ಬ್ರೆಜಿಲ್‌ನಲ್ಲಿ ಪಾಕ್ ವಿರುದ್ಧ ಮೋದಿ ಗುಡುಗು – ಭಯೋತ್ಪಾದನೆ ಬಗ್ಗೆ ದ್ವಿಮುಖ ನೀತಿಗೆ ಅವಕಾಶವಿಲ್ಲವೆಂದ ಪ್ರಧಾನಿ

ಪ್ರಧಾನಿ ಮೋದಿ ವಿದೇಶ ಪ್ರವಾಸದಲ್ಲಿದ್ದು, ಬ್ರೆಜಿಲ್‌ನಲ್ಲಿ ಭಯೋತ್ಪಾದನೆ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಭಯೋತ್ಪಾದನೆ ಬಗ್ಗೆ ದ್ವಂದ್ವ ನಿಲುವುಗಳಿಗೆ ಅವಕಾಶವಿಲ್ಲ ಮೋದಿ ಹೇಳಿದ್ದಾರೆ. ಬ್ರೆಜಿಲ್‌ನಲ್ಲಿ ಮಾತನಾಡಿದ ಅವರು, ಭಯೋತ್ಪಾದನೆಯ ಬಗ್ಗೆ ದ್ವಿಮುಖ ನೀತಿಗಳಿಗೆ ಯಾವುದೇ ಸ್ಥಾನವಿಲ್ಲ. ಭಾರತ ಮತ್ತು ಬ್ರೆಜಿಲ್ ಎರಡೂ ಭಯೋತ್ಪಾದನೆ ಮತ್ತು ಅದನ್ನು ಬೆಂಬಲಿಸುವವರನ್ನು ಬಲವಾಗಿ ವಿರೋಧಿಸುತ್ತವೆ ಎಂದು ಹೇಳಿದರು.
ಪ್ರಸ್ತುತ ಭಾರತ-ಬ್ರೆಜಿಲ್ ನಡುವಿನ ಪರಸ್ಪರ ವ್ಯಾಪಾರ ಸುಮಾರು 13 ಶತಕೋಟಿ ಡಾಲರ್‌ಗಳಾಗಿದ್ದು, ಮುಂದಿನ ಐದು ವರ್ಷಗಳಲ್ಲಿ ಇದನ್ನು 20 ಶತಕೋಟಿ ಡಾಲರ್‌ಗಳಿಗೆ ಕೊಂಡೊಯ್ಯುವ ಗುರಿಯನ್ನು ಹೊಂದಲಾಗಿದೆ ಎಂದು ಮೋದಿ ಹೇಳಿದರು. ಪ್ರತಿಯೊಂದು ಕ್ಷೇತ್ರದಲ್ಲೂ ಸಹಕಾರವನ್ನು ಬಲಪಡಿಸುವ ಬಗ್ಗೆ ನಾವು ಚರ್ಚಿಸಿದ್ದೇವೆ ಎಂದು ಪ್ರಧಾನಿ ಮೋದಿ ಹೇಳಿದ್ರು.
ಇದನ್ನೂ ಓದಿ: ಉತ್ತಮ ಆರೋಗ್ಯಕ್ಕೆ ಈ ಹಣ್ಣು ಬೆಸ್ಟ್ – ಅಂಜೂರ ತಿಂದ್ರೆ ಏನೆಲ್ಲಾ ಪ್ರಯೋಜನ ಗೊತ್ತಾ?
ಭಾರತ ಮತ್ತು ಬ್ರೆಜಿಲ್ ನಡುವಿನ ರಕ್ಷಣಾ ಸಹಕಾರವು ಬೆಳೆಯುತ್ತಿದೆ. ಎರಡೂ ದೇಶಗಳು ರಕ್ಷಣಾ ಉತ್ಪಾದನಾ ಕೈಗಾರಿಕೆಗಳನ್ನು ಸಂಪರ್ಕಿಸುವತ್ತ ಸಾಗುತ್ತವೆ ಎಂದು ಪ್ರಧಾನಿ ಮೋದಿ ಹೇಳಿದ್ರು. ಭಾರತವು ಬ್ರೆಜಿಲ್‌ಗೆ UPI ಅಳವಡಿಸಿಕೊಳ್ಳಲು ಸಹಾಯ ಮಾಡುತ್ತಿದೆ. ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯ, ಬಾಹ್ಯಾಕಾಶ ತಂತ್ರಜ್ಞಾನ, AI ಮತ್ತು ಸೂಪರ್‌ಕಂಪ್ಯೂಟರ್‌ಗಳಂತಹ ಕ್ಷೇತ್ರಗಳಲ್ಲಿ ನಮ್ಮ ಸಹಕಾರವು ಬೆಳೆಯುತ್ತಿದೆ ಎಂದು ಹೇಳಿದರು.
ಭಾರತವು ಪಾಕಿಸ್ತಾನವನ್ನು ‘ಭಯೋತ್ಪಾದನೆಯ ಜಾಗತಿಕ ಕೇಂದ್ರ’ ಎಂದು ಬಣ್ಣಿಸಿದೆ. ಚೀನಾವನ್ನು ಪರೋಕ್ಷವಾಗಿ ಉಲ್ಲೇಖಿಸುತ್ತಾ, ಪ್ರಧಾನಿ ಮೋದಿ, ಭಯೋತ್ಪಾದನೆಯ ಬಗ್ಗೆ ದ್ವಿಮುಖ ನೀತಿಗಳಿಗೆ ಯಾವುದೇ ಸ್ಥಳವಿಲ್ಲ ಎಂದು ಹೇಳಿದರು.

ನೋಡಿರಿ

