ಅಧಿಕಾರದಿಂದ ಹೊರಹಾಕಲ್ಪಟ್ಟವರು ಮತ್ತೆ ಅಧಿಕಾರಕ್ಕೆ ಬರಲು ಯಾತ್ರೆ ನಡೆಸುತ್ತಿದ್ದಾರೆ –  ಪ್ರಧಾನಿ ಮೋದಿ
ಭಾರತ್ ಜೋಡೋ ಯಾತ್ರೆ ವಿರುದ್ಧ ಪ್ರಧಾನಿ ಮೋದಿ ವ್ಯಂಗ್ಯ

ಅಧಿಕಾರದಿಂದ ಹೊರಹಾಕಲ್ಪಟ್ಟವರು ಮತ್ತೆ ಅಧಿಕಾರಕ್ಕೆ ಬರಲು ಯಾತ್ರೆ ನಡೆಸುತ್ತಿದ್ದಾರೆ –  ಪ್ರಧಾನಿ ಮೋದಿಭಾರತ್ ಜೋಡೋ ಯಾತ್ರೆ ವಿರುದ್ಧ ಪ್ರಧಾನಿ ಮೋದಿ ವ್ಯಂಗ್ಯ

ಗಾಂಧಿನಗರ : ಅಧಿಕಾರದಿಂದ ಹೊರಹಾಕಲ್ಪಟ್ಟವರು ಮತ್ತೆ ಅಧಿಕಾರಕ್ಕೆ ಬರಲು ಯಾತ್ರೆ ನಡೆಸುತ್ತಿದ್ದಾರೆ ಎಂದು ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯ ಬಗ್ಗೆ ವ್ಯಂಗ್ಯವಾಡಿದ್ದಾರೆ.

ಇದನ್ನೂ ಓ ದಿ: ಚುನಾವಣಾ ಆಯೋಗದ ನೂತನ ಆಯಕ್ತರಾಗಿ ಅರುಣ್ ಗೋಯೆಲ್ ಅಧಿಕಾರ ಸ್ವೀಕಾರ

ಗುಜರಾತ್‌ನ ಸುರೇಂದ್ರನಗರ ಪಟ್ಟಣದಲ್ಲಿ ಚುನಾವಣಾ ರ್‍ಯಾಲಿ  ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಬಹಳ ಹಿಂದೆಯೇ ಅಧಿಕಾರದಿಂದ ಕೆಳಗಿಳಿದ ಜನರು ಮತ್ತೆ ಅಧಿಕಾರ ಪಡೆಯಲು ಯಾತ್ರೆ ನಡೆಸುತ್ತಿದ್ದಾರೆ ಎಂದು ಭಾರತ್ ಜೋಡೋ ಯಾತ್ರೆ ವಿರುದ್ದ ಕಿಡಿಕಾರಿದರು.

ರಾಜ್ಯದಲ್ಲಿ ತಯಾರಿಸಿದ ಉಪ್ಪನ್ನು ತಿಂದ ನಂತರವೂ ಕೆಲವರು ಗುಜರಾತ್ ಅನ್ನು ನಿಂದಿಸುತ್ತಾರೆ. ದೇಶದ ಶೇ 80 ರಷ್ಟು ಉಪ್ಪನ್ನು ಗುಜರಾತ್ ಉತ್ಪಾದಿಸುತ್ತದೆ ಎಂದು ಅವರು ಹೇಳಿದರು.

ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೊ ಯಾತ್ರೆಯಲ್ಲಿ ನರ್ಮದಾ ಬಚಾವೋ ಆಂದೋಲನದ ಮುಖ್ಯಸ್ಥೆ ಮೇಧಾ ಪಾಟ್ಕರ್ ಸೇರಿದ್ದನ್ನು ಮೋದಿ ಉಲ್ಲೇಖಿಸಿದ್ದಾರೆ. ನರ್ಮದಾ ಅಣೆಕಟ್ಟು ಯೋಜನೆಯನ್ನು 40 ವರ್ಷಗಳಿಂದ ಸ್ಥಗಿತಗೊಳಿಸಿದವರ ಜೊತೆ ಅವರು ಕೈಜೋಡಿಸಿದ್ದಾರೆ ಎಂದು ಹೇಳಿದರು.

40 ವರ್ಷಗಳ ಹಿಂದೆ ನರ್ಮದಾ ಅಣೆಕಟ್ಟು ಯೋಜನೆಯನ್ನು ಸ್ಥಗಿತಗೊಳಿಸಿದವರಿಗೆ ಶಿಕ್ಷೆ ನೀಡಲು ಗುಜರಾತ್‌ನ ಜನರು ನಿರ್ಧರಿಸಿದ್ದಾರೆ. ಚುನಾವಣೆಯ ಸಮಯದಲ್ಲಿ ಅಭಿವೃದ್ಧಿಯ ಬಗ್ಗೆ ಮಾತನಾಡುವ ಬದಲು ವಿರೋಧ ಪಕ್ಷವಾದ ಕಾಂಗ್ರೆಸ್ ತನ್ನ “ಔಕತ್” (ಸ್ಥಾನಮಾನ) ತೋರಿಸುವುದಾಗಿ ಹೇಳುತ್ತಿದೆ ಎಂದು ಅವರು ಹೇಳಿದರು.

suddiyaana