ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಮೋದಿ ಭೇಟಿ – ಏ. 6 ರಿಂದ 9 ರವರೆಗೆ ಏನೆಲ್ಲಾ ಬಂದ್?

ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಮೋದಿ ಭೇಟಿ – ಏ. 6 ರಿಂದ 9 ರವರೆಗೆ ಏನೆಲ್ಲಾ ಬಂದ್?

ಚಾಮರಾಜನಗರ: ಬಂಡೀಪುರ ಅರಣ್ಯವನ್ನು ರಾಷ್ಟ್ರೀಯ ಹುಲಿ ಸಂರಕ್ಷಿತಾರಣ್ಯವೆಂದು ಘೋಷಿಸಿ 50 ವರ್ಷ ತುಂಬಿದೆ. ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್ 9 ರಂದು ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ ಭೇಟಿ ನೀಡಲಿದ್ದಾರೆ. ಅಷ್ಟೇ ಅಲ್ಲದೇ ಉದ್ಯಾನವನದಲ್ಲಿ ಸಫಾರಿ ನಡೆಸಲಿದ್ದಾರೆ.

ಇದನ್ನೂ ಓದಿ: ದೇಶದಲ್ಲಿ ಹೆಚ್ಚಾಯ್ತು ಕೊರೊನಾ ಕೇಸ್ – ಆನ್ ಲೈನ್ ನಲ್ಲೇ ವಾದ ಮಂಡಿಸಿ ಎಂದ ಸುಪ್ರೀಂ ಜಡ್ಜ್

ಈ ಹಿನ್ನೆಲೆ ಏಪ್ರಿಲ್ 6 ರಿಂದ 9 ರವರೆಗೆ ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಅಲ್ಲದೇ ಬಂಡೀಪುರ ವ್ಯಾಪ್ತಿಯ ಎಲ್ಲಾ ಹೋಂಸ್ಟೇ, ರೆಸಾರ್ಟ್, ಲಾಡ್ಜ್​​ಗಳಲ್ಲಿ ಪ್ರವಾಸಿಗರ ವಾಸ್ತವ್ಯಕ್ಕೆ ನಿರ್ಬಂಧಿಸಲಾಗಿದೆ. ರಸ್ತೆ ನಿರ್ವಹಣೆ, ಪೂರ್ವ ಸಿದ್ದತೆ, ಹಾಗೂ ರಕ್ಷಣೆ ದೃಷ್ಟಿಯಿಂದ ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ ಸಾರ್ವಜನಿಕರಿಗೆ ನಿರ್ಬಂಧ ಹೇರಲಾಗಿದೆ ಅಂತಾ ಎಂದು ಚಾಮರಾಜನಗರ ಜಿಲ್ಲಾಧಿಕಾರಿ ಡಿ.ಎಸ್.ರಮೇಶ್ ತಿಳಿಸಿದ್ದಾರೆ.

ಏಪ್ರಿಲ್ 9ರಂದು ರಾಜ್ಯಕ್ಕೆ ಆಗಮಿಸಲಿರುವ ಮೋದಿ, ಮೈಸೂರಿನಲ್ಲಿ 3 ದಿನಗಳ ಮೆಗಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಈ ವೇಳೆ ಇತ್ತೀಚಿನ ಹುಲಿಗಣತಿ ವರದಿ, ಹುಲಿ ಸಂರಕ್ಷಣೆಗಾಗಿ ಸರ್ಕಾರ ಕೈಗೊಂಡ ಕ್ರಮಗಳ ವರದಿ, ಮತ್ತು ನಾಣ್ಯ ಸ್ಮರಣಿಕೆಯನ್ನು ಪ್ರಧಾನಿ ನರೇಂದ್ರ ಮೋದಿ ಮೈಸೂರಿನಲ್ಲಿ ಬಿಡುಗಡೆ ಮಾಡಲಿದ್ದಾರೆ.

suddiyaana