ಸೈನಿಕರ ಜೊತೆ ಪ್ರಧಾನಿ ಮೋದಿ ಮಾತುಕತೆ – ಅದಂಪುರ ವಾಯುನೆಲೆಗೆ ಭೇಟಿ ಕೊಟ್ಟ ನಮೋ

ಭಾರತ-ಪಾಕಿಸ್ತಾನ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಇಂದು ( ಮಂಗಳವಾರ) ಬೆಳಗ್ಗೆ ಪಂಜಾಬ್‌ನ ಅದಂಪುರ ವಾಯುನೆಲೆಗೆ ಭೇಟಿ ನೀಡಿದ್ದು, ವಾಯುಪಡೆಯ ಸಿಬ್ಬಂದಿಯ ಬಳಿ ಮಾಹಿತಿ ಪಡೆದಿದ್ದಾರೆ. ಹಾಗೇ, ಸೈನಿಕರೊಂದಿಗೆ ಸಂವಾದ ನಡೆಸಿದ್ದಾರೆ. ಸೈನಿಕರು ಸಂತೋಷದಿಂದ ಪ್ರಧಾನಿ ಮೋದಿಯವರನ್ನು ಸುತ್ತುವರೆದು ಮಾತುಕತೆ ನಡೆಸುತ್ತಿರುವ ಫೋಟೋಗಳನ್ನು ಪ್ರಧಾನಮಂತ್ರಿ ಕಚೇರಿ ಹಂಚಿಕೊಂಡಿದೆ. ಪ್ರಧಾನಿ ಅವರ ಭೇಟಿಯಿಂದ ಸೈನಿಕರಿಗೆ ಮತ್ತಷ್ಟು ಧೈರ್ಯ ಬಂದಿದೆ.
ಪಂದ್ಯಕ್ಕೂ ಮುನ್ನ ಇಂಜೆಕ್ಷನ್ ತೆಗೆದುಕೊಳ್ತಿದ್ದ ಸುಯಾಶ್! – RCB ಸುಯಾಶ್ ಕಣ್ಣೀರ ಕತೆ!
ಭಾರತದ ಆಪರೇಷನ್ ಸಿಂಧೂರ್ ನಂತರ, ಮೇ 9 ಮತ್ತು 10ರ ಮಧ್ಯರಾತ್ರಿ ಪಾಕಿಸ್ತಾನ ದಾಳಿ ಮಾಡಲು ಪ್ರಯತ್ನಿಸಿದ ವಾಯುಪಡೆಯ ಕೇಂದ್ರಗಳಲ್ಲಿ ಅದಮ್‌ಪುರವೂ ಒಂದು. ಭಾರತ ಮತ್ತು ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿಕೊಂಡ ಕೆಲವು ದಿನಗಳ ನಂತರ, ಪ್ರಧಾನಿ ನರೇಂದ್ರ ಮೋದಿ ಇಂದು ಪಂಜಾಬ್‌ನ ಅದಮ್‌ಪುರ ವಾಯುನೆಲೆಗೆ ಭೇಟಿ ನೀಡಿ ಸೈನಿಕರೊಂದಿಗೆ ಸಂವಾದ ನಡೆಸಿದರು. ಈ ಫೋಟೋಗಳು ಈ ವೈರಲ್ ಆಗುತ್ತಿವೆ.