ಸಿಜೆಐ ಚಂದ್ರಚೂಡ್ ನಿವಾಸದಲ್ಲಿ ಗಣಪತಿ ಪೂಜೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ – ಕಳವಳ ವ್ಯಕ್ತಪಡಿಸಿದ ವಿರೋಧ ಪಕ್ಷದ ನಾಯಕರು

ಪ್ರಧಾನಿ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿರುವ ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರ ನಿವಾಸದಲ್ಲಿ ನಡೆದ ಗಣೇಶ ಪೂಜೆಯಲ್ಲಿ ಪಾಲ್ಗೊಂಡಿದ್ದಾರೆ.
ಇದನ್ನೂ ಓದಿ : ಐಸಿಸಿ ಟೆಸ್ಟ್ ರ್ಯಾಂಕಿಂಗ್ನಲ್ಲಿ ಧೂಳೆಬ್ಬಿಸಿದ ಟೀಮ್ ಇಂಡಿಯಾ ಕ್ರಿಕೆಟರ್ಸ್ – ಟಾಪ್ 10ನಲ್ಲಿ ಮೂವರು ಭಾರತೀಯರು
ಪ್ರಧಾನಮಂತ್ರಿ ಮೋದಿ ಮುಖ್ಯ ನ್ಯಾಯಮೂರ್ತಿ ಮತ್ತು ಅವರ ಪತ್ನಿ ಕಲ್ಪನಾ ದಾಸ್ ಅವರೊಂದಿಗೆ ದೇವರಿಗೆ ಪೂಜೆ ಮಾಡುತ್ತಾ, ತಮ್ಮ ಪೂಜೆ ಸಲ್ಲಿಸುತ್ತಿರುವ ವಿಡಿಯೋ ವೈರಲ್ ಆಗಿದೆ. ಗಣೇಶೋತ್ಸವ ಸಮಯದಲ್ಲಿ ಸಿಜೆಐ ನಿವಾಸಕ್ಕೆ ಆಗಮಿಸಿದ ಮೋದಿ ಗಣಪತಿಗೆ ಆರತಿ ಎತ್ತಿದ್ದರು. ಆದ್ರೆ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನಿವಾಸಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿರೋದಕ್ಕೆ ವಿಪಕ್ಷನಾಯಕರು ಕಿಡಿ ಕಾರಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಸುಪ್ರಿಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರ ನಿವಾಸದಲ್ಲಿ ಗಣಪತಿ ಪೂಜೆಯಲ್ಲಿ ಪಾಲ್ಗೊಂಡಿದ್ದು, ಇದೀಗ ವಿವಾದಕ್ಕೆ ಕಾರಣವಾಗಿದೆ. ಸಿಜೆಐ ಚಂದ್ರಚೂಡ್ ಅವರ ನಿವಾಸಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿರುವ ಬಗ್ಗೆ ಸುಪ್ರೀಂ ಕೋರ್ಟ್‌ನ ಹಿರಿಯ ನ್ಯಾಯಾಧೀಶರು ಮತ್ತು ಕೆಲವು ವಿರೋಧ ಪಕ್ಷದ ನಾಯಕರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.