ಕೆಂಪು ಕೋಟೆಯಲ್ಲಿ ಪ್ರಧಾನಿ ಮೋದಿ ಧ್ವಜಾರೋಹಣ – ದೇಶ ನಿಮ್ಮ ಜೊತೆಗಿದೆ.. ಶಾಂತಿ ಕಾಪಾಡಲು ಮಣಿಪುರದ ಜನತೆಗೆ ಮೋದಿ ಮನವಿ  

ಕೆಂಪು ಕೋಟೆಯಲ್ಲಿ ಪ್ರಧಾನಿ ಮೋದಿ ಧ್ವಜಾರೋಹಣ – ದೇಶ ನಿಮ್ಮ ಜೊತೆಗಿದೆ.. ಶಾಂತಿ ಕಾಪಾಡಲು ಮಣಿಪುರದ ಜನತೆಗೆ ಮೋದಿ ಮನವಿ  

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು 77ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ದೆಹಲಿಯ ಐತಿಹಾಸಿಕ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ್ದಾರೆ. ಬಳಿಕ ಪ್ರಧಾನಿ ಮೋದಿ ದೇಶದ ಜನರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ದೇಶವು ಮಣಿಪುರದ ಜನರೊಂದಿಗೆ ನಿಂತಿದೆ… ಶಾಂತಿಯಿಂದ ಮಾತ್ರ ಯಾವುದೇ ಸಮಸ್ಯೆಗೆ ಪರಿಹಾರವನ್ನು ಕಂಡುಕೊಳ್ಳಬಹುದು. ಕೇಂದ್ರ ಮತ್ತು ರಾಜ್ಯ ಸರ್ಕಾರವು ಪರಿಹಾರ ಕಂಡುಕೊಳ್ಳಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಈ ಬಾರಿ, ನೈಸರ್ಗಿಕ ವಿಕೋಪವು ದೇಶದ ಹಲವಾರು ಭಾಗಗಳಲ್ಲಿ ಊಹಿಸಲಾಗದ ಬಿಕ್ಕಟ್ಟುಗಳನ್ನು ಸೃಷ್ಟಿಸಿದೆ. ಇದದಿಂದ ಸಂಕಷ್ಟಕ್ಕೀಡಾದ ಎಲ್ಲಾ ಕುಟುಂಬಗಳಿಗೆ ನಾನು ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಇಂದು ನಾವು ಅಪಾರ ಜನಸಂಖ್ಯೆ, ಪ್ರಜಾಪ್ರಭುತ್ವ ಮತ್ತು ವೈವಿಧ್ಯತೆಯನ್ನು ಹೊಂದಿದ್ದೇವೆ. ಈ ಮೂರೂ ಒಟ್ಟಾದರೆ ರಾಷ್ಟ್ರದ ಕನಸುಗಳನ್ನು ನನಸಾಗಿಸುವ ಸಾಮರ್ಥ್ಯವನ್ನು ಹೊಂದಿವೆ. ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ಮತ್ತು ಈಗ ಜನಸಂಖ್ಯೆಯ ದೃಷ್ಟಿಯಿಂದ ಮುಂಚೂಣಿಯಲ್ಲಿರುವ ದೇಶ ಭಾರತ. ಇಷ್ಟು ದೊಡ್ಡ ದೇಶ, ನನ್ನ ಕುಟುಂಬದ 140 ಕೋಟಿ ಸದಸ್ಯರು ಇಂದು ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದಾರೆ ಎಂದರು.

ಇದನ್ನೂ ಓದಿ: ಮಹಿಳಾ ಪ್ರಯಾಣಿಕರ ಸುರಕ್ಷತೆಗೆ ರಾಜ್ಯ ಸಾರಿಗೆ ಸಂಸ್ಥೆಯಿಂದ ಹೊಸ ಪ್ಲಾನ್‌ – ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಪ್ಯಾನಿಕ್ ಬಟನ್‌ ಅಳವಡಿಕೆ

ನಾನು ಕಳೆದ 1000 ವರ್ಷಗಳ ಬಗ್ಗೆ ಮಾತನಾಡುತ್ತಿದ್ದೇನೆ. ಏಕೆಂದರೆ, ದೇಶದ ಮುಂದೆ ಮತ್ತೊಮ್ಮೆ ಅವಕಾಶವಿದೆ ಎಂದು ನಾನು ನೋಡುತ್ತೇನೆ. ಈ ಯುಗದಲ್ಲಿ ನಾವು ಏನು ಮಾಡುತ್ತೇವೆ, ಒಂದರ ನಂತರ ಒಂದರಂತೆ ನಾವು ತೆಗೆದುಕೊಳ್ಳುವ ಕ್ರಮಗಳು ಮತ್ತು ನಾವು ತೆಗೆದುಕೊಳ್ಳುವ ನಿರ್ಧಾರಗಳು ಮುಂಬರುವ 1000 ವರ್ಷಗಳಲ್ಲಿ ದೇಶದ ಸುವರ್ಣ ಇತಿಹಾಸವನ್ನು ರೂಪಿಸುತ್ತವೆ  ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ದೇಶದಲ್ಲಿ ಅವಕಾಶಗಳ ಕೊರತೆ ಇಲ್ಲ. ದೇಶಕ್ಕೆ ಅಂತ್ಯವಿಲ್ಲದ ಅವಕಾಶಗಳನ್ನು ಒದಗಿಸುವ ಸಾಮರ್ಥ್ಯವಿದೆ. ಭಾರತದ ಉದಯ ಮತ್ತು ಅಭಿವೃದ್ಧಿಯು ದೇಶದಲ್ಲಿ ಜಾಗತಿಕ ಮಟ್ಟದಲ್ಲಿ ವಿಶ್ವಾಸಕ್ಕೆ ಕಾರಣವಾಗಿದೆ. ಜಗತ್ತು ತಂತ್ರಜ್ಞಾನ ಚಾಲಿತವಾಗಿದೆ. ತಂತ್ರಜ್ಞಾನದಲ್ಲಿನ ತನ್ನ ಪ್ರತಿಭೆಯೊಂದಿಗೆ ಭಾರತವು ಜಾಗತಿಕ ವೇದಿಕೆಯಲ್ಲಿ ಹೊಸ ಪಾತ್ರ ಮತ್ತು ಪ್ರಭಾವವನ್ನು ಹೊಂದಿದೆ ಎಂದು  ಹೇಳಿದರು.

ಯುವಜನರ ಕೊಡುಗೆಯನ್ನು ಶ್ಲಾಷಿಸಿದ ಪ್ರಧಾನಿ ಮೋದಿ, ಹಂತ 2, ಹಂತ 3ನೇ ನಗರದ ಜನರು ಸಹ ಸ್ಟಾರ್ಟ್‌ಅಪ್‌ಗಳು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಕಷ್ಟು ಪ್ರಭಾವ ಬೀರುತ್ತಿದ್ದಾರೆ. ಭಾರತ ಈಗ ಯಾವ ಕ್ಷೇತ್ರದಲ್ಲಿ ಹಿಂದುಳಿಯುವುದಿಲ್ಲ ಎಂದು ಜಾಗತಿಕ ತಜ್ಞರೇ ಹೇಳಿದ್ದಾರೆ. ಎಲ್ಲಾ ರೇಟಿಂಗ್ ಏಜೆನ್ಸಿಗಳು ದೇಶವನ್ನು ಶ್ಲಾಘಿಸುತ್ತಿವೆ. ಭಾರತದ ಅತ್ಯಂತ ದೊಡ್ಡ ಸಾಮರ್ಥ್ಯವೆಂದರೆ ನಂಬಿಕೆ. ಸರ್ಕಾರದಲ್ಲಿ ಜನರ ನಂಬಿಕೆ, ದೇಶದ ಉಜ್ವಲ ಭವಿಷ್ಯದಲ್ಲಿ ಮತ್ತು ಭಾರತದ ಮೇಲೆ ವಿಶ್ವದ ನಂಬಿಕೆಯೇ ದೊಡ್ಡದು ಎಂದು ತಿಳಿಸಿದರು.

ಪ್ರಧಾನಿ ಮೋದಿ ತಮ್ಮ ಸ್ವಾತಂತ್ರ್ಯೋತ್ಸವದ ಭಾಷಣದಲ್ಲಿ ನಾಗರಿಕರನ್ನು ಉದ್ದೇಶಿಸಿ ‘ಪರಿವಾರಜನ್’ (ಕುಟುಂಬದ ಸದಸ್ಯರು) ಎಂಬ ಪದವನ್ನು ಪದೇ ಪದೆ ಬಳಸಿದರು. ಬದಲಾಗುತ್ತಿರುವ ಜಗತ್ತನ್ನು ರೂಪಿಸುವಲ್ಲಿ, ಭಾರತದ ಜನರ ಸಾಮರ್ಥ್ಯಗಳು ಸ್ಪಷ್ಟವಾಗಿವೆ. ನಮ್ಮ ಕಡೆಯಲ್ಲಿರುವ ಚೆಂಡು ಮತ್ತು ಅವಕಾಶವನ್ನು ನಾವು ಬಿಡಬಾರದು. ಭಾರತದ ಸಾಮರ್ಥ್ಯಗಳ ಬಗ್ಗೆ ಯಾರ ಮನಸ್ಸಿನಲ್ಲಿಯೂ ಅಪನಂಬಿಕೆ ಇಲ್ಲ ಎಂದು ಪ್ರಧಾನಿ ಮೋದಿ ಹೇಳಿದರು.

suddiyaana