ವಿಶ್ವ ಅಥ್ಲೆಟಿಕ್ಸ್ ನಲ್ಲಿ ಭಾರತಕ್ಕೆ ಐತಿಹಾಸಿಕ ಚಿನ್ನ – ‘ಒಲಿಂಪಿಕ್ ವೀರ’ನ ಸಾಧನೆಗೆ ಪ್ರಧಾನಿ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಶ್ಲಾಘನೆ!

ವಿಶ್ವ ಅಥ್ಲೆಟಿಕ್ಸ್ ನಲ್ಲಿ ಭಾರತಕ್ಕೆ ಐತಿಹಾಸಿಕ ಚಿನ್ನ – ‘ಒಲಿಂಪಿಕ್ ವೀರ’ನ ಸಾಧನೆಗೆ ಪ್ರಧಾನಿ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಶ್ಲಾಘನೆ!

ಭಾರತದ ಜಾವೆಲಿನ್‌ ತಾರೆ ನೀರಜ್ ಚೋಪ್ರಾ ಅವರು ಹಂಗೇರಿಯಲ್ಲಿ ನಡೆದ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ ನಲ್ಲಿ ಜಾವೆಲಿನ್ ವಿಭಾಗದಲ್ಲಿ ಚಿನ್ನದ ಪದಕ ಗೆದ್ದು ಇತಿಹಾಸ ಸೃಷ್ಟಿಸಿದ್ದಾರೆ. ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಗೆಕೆ ಪಾತ್ರರಾಗಿರುವ ನೀರಜ್‌ಚೋಪ್ರಾ ಅವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೊಂಡಾಡಿದ್ದಾರೆ.

ಈ ಸಂಬಂಧ ಟ್ವೀಟ್‌ ಮಾಡಿ ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಭಾನ್ವಿತ ನೀರಜ್ ಚೋಪ್ರಾ ಶ್ರೇಷ್ಠತೆಯನ್ನು ಉದಾಹರಿಸುತ್ತಾರೆ. ಅವರ ಸಮರ್ಪಣೆ, ನಿಖರತೆ ಮತ್ತು ಉತ್ಸಾಹವು ಅವರನ್ನು ಕೇವಲ ಅಥ್ಲೆಟಿಕ್ಸ್‌ನಲ್ಲಿ ಚಾಂಪಿಯನ್ ಆಗಿರುವುದಷ್ಟೇ ಅಲ್ಲದೆ, ಇಡೀ ಕ್ರೀಡಾ ಜಗತ್ತಿನಲ್ಲಿ ಅಪ್ರತಿಮ ಶ್ರೇಷ್ಠತೆಯ ಸಂಕೇತವಾಗಿಸಿದೆ. ವಿಶ್ವಅಥ್ಲೆಟಿಕ್ಸ್ ಚಾಂಪಿಯನ್ ಶಿಪ್’ನಲ್ಲಿ ಚಿನ್ನ ಗೆದ್ದಿದ್ದಕ್ಕಾಗಿ ಅವರಿಗೆ ಅಭಿನಂದನೆಗಳು ಎಂದು ಹೇಳಿದ್ದಾರೆ.

ಇದನ್ನೂ ಓದಿ: ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಗೆದ್ದು ಹೊಸ ದಾಖಲೆ ಸೃಷ್ಟಿಸಿದ ನೀರಜ್ ಚೋಪ್ರಾ!

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೂಡ ಟ್ವೀಟ್‌ ಮಾಡಿ ನೀರಜ್‌ ಚೋಪ್ರಾ ಅವರ ಸಾಧನೆಯನ್ನು ಕೊಂಡಾಡಿದ್ದಾರೆ. ದೇಶದ ಇತಿಹಾಸಕ್ಕೆ ಸುವರ್ಣ ಪುಟ ಸೇರ್ಪಡೆಯಾಗಿದೆ.  ನೀರಜ್ ಸಾಧನೆ  ಲಕ್ಷಾಂತರ ಯುವಕರಿಗೆ ಸ್ಪೂರ್ತಿಯಾಗಿದೆ ಎಂದು ಹೇಳಿದ್ದಾರೆ.

ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರು ಕೂಡ ಟ್ವೀಟ್‌ ಮಾಡಿ ನೀರಜ್‌ ಚೋಪ್ರಾ ಅವರನ್ನು ಅಭಿನಂದಿಸಿದ್ದಾರೆ.  ‘88.17 ಮೀಟರ್ ದೂರ ಜಾವೆಲಿನ್ ಎಸೆದು ನೀರಜ್ ಮತ್ತೆ ಈ ಸಾಧನೆ ಮಾಡಿದ್ದಾರೆ!. ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಗೆಲ್ಲುವದರೊಂದಿಗೆ, ನೀರಜ್ ಚೋಪ್ರಾ ಈ ಸಾಧನೆ ಮಾಡಿದ ಭಾರತದ ಮೊದಲ ಅಥ್ಲೀಟ್‌ ಎನಿಸಿಕೊಂಡಿದ್ದಾರೆ. ನಿಮ್ಮ ಸಾಧನೆಗಳ ಬಗ್ಗೆ ಇಡೀ ರಾಷ್ಟ್ರವು ಹೆಮ್ಮೆಪಡುತ್ತದೆ ಮತ್ತು ಈ ಕ್ಷಣವು ಭಾರತೀಯ ಕ್ರೀಡಾ ಇತಿಹಾಸದಲ್ಲಿ ಶಾಶ್ವತವಾಗಿ ನೆನಪಿನಲ್ಲಿ ಉಳಿಯುತ್ತದೆ’ ಎಂದು ಟ್ವೀಟ್ ಮಾಡಿದ್ದಾರೆ.

suddiyaana