ಮೊದಲ ಹಂತದ ಚುನಾವಣೆ ಆರಂಭ – ಮತದಾನ ಹಕ್ಕು ಚಲಾಯಿಸಲು ಮೋದಿ ಕರೆ

ಮೊದಲ ಹಂತದ ಚುನಾವಣೆ ಆರಂಭ – ಮತದಾನ ಹಕ್ಕು ಚಲಾಯಿಸಲು ಮೋದಿ ಕರೆ

ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಶುಕ್ರವಾರ ಆರಂಭವಾಗಿದೆ. 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 102 ಸ್ಥಾನಗಳಿಗೆ ವೋಟಿಂಗ್‌ ನಡೆಯುತ್ತಿದೆ. ಸ್ಪರ್ಧಿಗಳಲ್ಲಿ ಸಚಿವರು, ಹಿರಿಯ ನಾಯಕರು ಮತ್ತು ಪ್ರಮುಖರು ಕಣದಲ್ಲಿದ್ದಾರೆ.

ಮೊದಲ ಹಂತದ ಚುನಾವಣೆಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಸಂದೇಶ ರವಾನಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಪೋಸ್ಟ್‌ ಮಾಡಿದ್ದಾರೆ. ಪ್ರಜಾಪ್ರಭುತ್ವದ ಅತಿ ದೊಡ್ಡ ಹಬ್ಬ ಇಂದಿನಿಂದ ಆರಂಭ, ಲೋಕಸಭೆ ಚುನಾವಣೆಯ ಮೊದಲ ಹಂತದಲ್ಲಿ 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 102 ಸ್ಥಾನಗಳಿಗೆ ಮತದಾನ ನಡೆಯಲಿದೆ. ಈ ಎಲ್ಲಾ ಸ್ಥಾನಗಳ ಮತದಾರರು ತಮ್ಮ ಹಕ್ಕು ಚಲಾಯಿಸಲು ಮತ್ತು ಮತದಾನದಲ್ಲಿ ಹೊಸ ದಾಖಲೆಯನ್ನು ರಚಿಸಬೇಕೆಂದು ನಾನು ಪ್ರಾರ್ಥನೆ ಮಾಡುತ್ತೇನೆ ಎಂದು ಪೋಸ್ಟ್‌ ಮಾಡಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಪರ ದಚ್ಚು ಪ್ರಚಾರ ಮಾಡಿದ್ದು ಯಾಕೆ? – ದರ್ಶನ್ ನಡೆ ಹಿಂದೆ ಸುಮಲತಾ ಗೇಮ್ ಪ್ಲ್ಯಾನ್?

ಪ್ರಥಮ ಬಾರಿಗೆ ಮತದಾನ ಮಾಡಲಿರುವ ನನ್ನ ಯುವ ಮಿತ್ರರಲ್ಲಿ ವಿಶೇಷ ಮನವಿ ಮಾಡುತ್ತೇನೆ, ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಬೇಕು. ಪ್ರಜಾಪ್ರಭುತ್ವದಲ್ಲಿ, ಪ್ರತಿ ಮತವೂ ಅಮೂಲ್ಯವಾಗಿದೆ ಮತ್ತು ಪ್ರತಿ ಧ್ವನಿಯೂ ಮುಖ್ಯವಾಗಿದೆ ಎಂದು ಎಕ್ಸ್​ನಲ್ಲಿ ಬರೆದಿದ್ದಾರೆ.

ದೇಶದ 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102 ಲೋಕಸಭಾ ಸ್ಥಾನಗಳಿಗೆ ಮೊದಲ ಹಂತದಲ್ಲಿ ಮತದಾನ ನಡೆಯುತ್ತಿದೆ. ಮೊದಲ ಹಂತದಲ್ಲಿ ಅರುಣಾಚಲ ಪ್ರದೇಶ, ಅಸ್ಸಾಂ, ಬಿಹಾರ, ಛತ್ತೀಸ್‌ಗಢ, ಮಧ್ಯಪ್ರದೇಶ, ಮಹಾರಾಷ್ಟ್ರ, ಮಣಿಪುರ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್, ರಾಜಸ್ಥಾನ, ಸಿಕ್ಕಿಂ, ತಮಿಳುನಾಡು, ತ್ರಿಪುರಾ ಮತ್ತು ಉತ್ತರ ಪ್ರದೇಶದಲ್ಲಿ ಮತದಾನ ನಡೆಯುತ್ತಿದೆ. ಇದಲ್ಲದೇ ಉತ್ತರಾಖಂಡ, ಪಶ್ಚಿಮ ಬಂಗಾಳ, ಅಂಡಮಾನ್ ನಿಕೋಬಾರ್, ಜಮ್ಮು ಮತ್ತು ಕಾಶ್ಮೀರ, ಲಕ್ಷದ್ವೀಪ, ಪುದುಚೇರಿಯಲ್ಲಿಯೂ ಮತದಾನ ನಡೆಯುತ್ತಿದೆ. ಲೋಕಸಭೆ ಚುನಾವಣೆಯ ಮೊದಲ ಹಂತದಲ್ಲಿ, ಈ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102 ಸ್ಥಾನಗಳಿಗೆ ಮತದಾನ ನಡೆಯುತ್ತಿದೆ.

Shwetha M