ಜಮೀರ್‌ ಅಹ್ಮದ್‌ ವಾಸ್ತವ್ಯವಿದ್ದ ಹೋಟೆಲ್‌ ಮೇಲೆ ಪೊಲೀಸರಿಂದ ದಾಳಿ – ಸಿಕ್ಕಿದ್ದೇನು?  

ಜಮೀರ್‌ ಅಹ್ಮದ್‌ ವಾಸ್ತವ್ಯವಿದ್ದ ಹೋಟೆಲ್‌ ಮೇಲೆ ಪೊಲೀಸರಿಂದ ದಾಳಿ – ಸಿಕ್ಕಿದ್ದೇನು?  

ಬೆಂಗಳೂರು: ಸಚಿವ ಜಮೀರ್‌ ಅಹ್ಮದ್‌ ವಾಸ್ತವ್ಯವಿದ್ದ ಹೋಟೆಲ್‌ ಮೇಲೆ ದಾಳಿ ಹೈದರಾಬಾದ್‌ ಪೊಲೀಸರು ದಾಳಿ ನಡೆಸಿರುವ ಘಟನೆ ನಡೆದಿದೆ. ಅಕ್ರಮವಾಗಿ ಹಣ ಸಾಗಾಟ ಆರೋಪದ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ.

ಜಮೀರ್‌ ಅವರು ಅಕ್ರಮವಾಗಿ ಹಣ ಸಾಗಾಟ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಹಿನ್ನೆಲೆಯಲ್ಲಿ ವಾಸ್ತವ್ಯವಿದ್ದ ಹೈದರಾಬಾದ್‌ ನಗರದ ಪಾರ್ಕ್‌ ಹಯಾತ್‌ ಹೋಟೆಲ್‌ ಮೇಲೆ ಪೊಲೀಸರು ಇದ್ದಕ್ಕಿದ್ದಂತೆ ದಾಳಿ ನಡೆಸಿದ್ದಾರೆ. ಮಧ್ಯರಾತ್ರಿ ದಾಳಿ ನಡೆಸಿ ಜಮೀರ್ ಕೊಠಡಿ ಮತ್ತು ಬೆಂಬಲಿಗರ ಕೊಠಡಿಗಳನ್ನ ಪರಿಶೀಲಿಸಿದ್ದಾರೆ.

ಇದನ್ನೂ ಓದಿ: ಭಾರತದ ಜಿಡಿಪಿ 4 ಟ್ರಿಲಿಯನ್ ಡಾಲರ್ ಗಡಿ ದಾಟಿ ಇತಿಹಾಸ – ಮೋದಿಯ ಮೌನ.. ಸತ್ಯವೋ, ಸುಳ್ಳೋ?

ಈ ದಾಳಿ ಕುರಿತು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಸ್ಪಷ್ಟನೆ ನೀಡಿರುವ ಸಚಿವ ಜಮೀರ್‌, ನಾನು ಉಳಿದುಕೊಂಡಿರುವ ಹೈದರಾಬಾದ್‌ ನಗರದ ಪಾರ್ಕ್‌ ಹಯಾತ್‌ ಹೋಟೆಲ್‌ ಮೇಲೆ ಪೊಲೀಸರು ದಾಳಿ ನಡೆಸಿದರು. ಆದ್ರೆ ಯಾವುದೇ ಸಾಕ್ಷ್ಯಗಳೂ ಸಿಗದೇ ಹಿಂದಿರುಗಿದರು. ತೆಲಂಗಾಣ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದಿದ್ದೆ. ಇದರಿಂದ ಕೇಂದ್ರ ಬಿಜೆಪಿ ಮತ್ತು ರಾಜ್ಯದ ಬಿಆರ್‌ಎಸ್‌ ಸರ್ಕಾರ ಹತಾಶೆಗೊಂಡಿದ್ದು, ಜಂಟಿ ರಾಜಕೀಯ ದಾಳಿ ನಡೆಸಿವೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಈ ದಾಳಿಯು ನಮ್ಮನ್ನು ಹೆದರಿಸಿ ಹಿಮ್ಮೆಟ್ಟಿಸುವ ಕುತಂತ್ರವಾಗಿದೆ, ಇದಕ್ಕೆಲ್ಲ ನಾವು ಹೆದರಲ್ಲ ಎಂದು ತಿರುಗೇಟು ನೀಡಿದ್ದಾರೆ.

Shwetha M