7 ಕೋಟಿ ದರೋಡೆ ಬೆನ್ನಲ್ಲೇ ಎಚ್ಚೆತ್ತುಕೊಂಡ ಪೊಲೀಸ್ ಇಲಾಖೆ – RBIಗೆ ಪತ್ರ ಬರೆದ ಪೊಲೀಸರು!

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹಾಡಹಗಲೇ ಮಹಾ ದರೋಡೆ ನಡೆದಿತ್ತು. ಎಟಿಎಂಗೆ ಹಣ ಸಾಗಿಸುವ ವೇಳೆ ವಾಹನ ಅಡ್ಡಗಟ್ಟಿ 7.11 ಕೋಟಿ ರೂ ದರೋಡೆ ಮಾಡಲಾಗಿತ್ತು. ಈ ಪ್ರಕರಣ ಸಂಬಂಧ ಈಗಾಗಲೇ ಕೆಲ ಆರೋಪಿಗಳನ್ನ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂಎಸ್ ವಿರುದ್ಧ ಕ್ರಮಕೈಗೊಳ್ಳಲು ಪೊಲೀಸ್ ಇಲಾಖೆ ಆರ್ಬಿಐಗೆ ಪತ್ರ ಬರೆದಿದೆ.
ಇದನ್ನೂ ಓದಿ: ಜೈಲಿನಲ್ಲಿದ್ದುಕೊಂಡೇ ಫ್ಯಾನ್ಸ್ಗೆ ಗುಡ್ನ್ಯೂಸ್ ಕೊಟ್ಟ ದಾಸ! – ಡೆವಿಲ್ ಟ್ರೈಲರ್ ರಿಲೀಸ್ಗೆ ಮುಹೂರ್ತ ಫಿಕ್ಸ್!
ಡೈರಿ ಸರ್ಕಲ್ ಬಳಿ ಹಣ ದರೋಡೆ ಆಗಿದ್ರು, ಸಿಬ್ಬಂದಿ ತಡವಾಗಿ ಸುದ್ದಿ ತಲುಪಿಸಿದ್ರು. ಸಿಎಂಎಸ್ ಸಿಬ್ಬಂದಿ ಈ ನಡೆ ಸಾಕಷ್ಟು ಅನುಮಾನಗಳಿಗೆ ಎಡೆ ಮಾಡಿದೆ. ಇದೀಗ ಈ ಪ್ರಕರಣದ ಬೆನ್ನಲ್ಲೇ ಪೊಲೀಸರು ಎಚ್ಚೆತ್ತುಕೊಂಡಿದ್ದಾರೆ. ಈ ಪ್ರಕರಣ ಸಂಬಂಧ ಇಲಾಖೆ ಆರ್ಬಿಐಗೆ ಪತ್ರ ಬರೆದಿದ್ದು, ದರೋಡೆ ಪ್ರಕರಣದಲ್ಲಿ ಸಿಎಂಎಸ್ ಭದ್ರತಾ ಲೋಪ ಕಂಡುಬಂದಿದ್ದು, ಸಂಸ್ಥೆಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿಕೊಂಡಿದೆ.
ಇನ್ನು RBI ಮೂಲಕ ಎಟಿಎಂಗೆ ಹಣ ತುಂಬುವ ಎಲ್ಲಾ ಸಂಸ್ಥೆಗಳ ಜೊತೆಗೆ ಪೊಲೀಸ್ ಇಲಾಖೆ ಸಭೆ ನಡೆಸಲು ಮುಂದಾಗಿದೆ. ಕಮಿಷನರೇಟ್ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕೋ-ಆಪರೇಟಿವ್ ಬ್ಯಾಂಕ್ ಸೇರಿದಂತೆ ಎಲ್ಲಾ ಬ್ಯಾಂಕ್ಗಳ ಲಿಸ್ಟ್ ತಯಾರಿ ಮಾಡಲಾಗಿದೆ. ರಿಜಿಸ್ಟರ್ ಆಫ್ ಸೊಸೈಟಿಗೆ ಈಗಾಗಲೇ ಕಮಿಷನರೇಟ್ ವ್ಯಾಪ್ತಿಯ ಸಂಸ್ಥೆಗಳ ಲಿಸ್ಟ್ ಕೊಡಲು ಸೂಚನೆ ನೀಡಲಾಗಿದೆ. ಅಷ್ಟೇ ಅಲ್ಲದೇ, ನಗರದ ಆಯಾ ವಿಭಾಗದ ಡಿಸಿಪಿಗಳಿಗೆ ತಮ್ಮ ವ್ಯಾಪ್ತಿಯ ಲಿಸ್ಟ್ ತಯಾರಿಗೆ ಸೂಚನೆ ನೀಡಿದ್ದು, ರಿಜಿಸ್ಟರ್ ಆಫ್ ಸೊಸೈಟಿಯಿಂದ ಮಾಹಿತಿ ಪಡೆದು, RBI ಮೂಲಕವೇ ವಾರ್ನಿಂಗ್ ಕೊಡಿಸಲು ಪೊಲೀಸರು ಪ್ಲ್ಯಾನ್ ಮಾಡಿಕೊಂಡಿದ್ದಾರೆ. ಈ ಬಗ್ಗೆ ಈಗಾಗ್ಲೇ ಆರ್ಬಿಐ ಅಧಿಕಾರಿಗಳ ಜೊತೆ ಚರ್ಚೆ ನಡೆಸಿರುವ ಕಮಿಷನರ್, ಬಹುತೇಕ ಈ ವಾರ ಕಮಿಷನರ್ ಕಚೇರಿಯಲ್ಲಿ ಸಭೆ ನಡೆಯುವ ಸಾಧ್ಯತೆಯಿದೆ.
ಇನ್ನು ಸಿಬ್ಬಂದಿ ನೇಮಕದಲ್ಲಿ ಎನ್ಒಸಿ ಪಡೆಯದಿರೋದು, ದಾಖಲೆ ಪಡೆಯದೇ ಕೆಲಸಕ್ಕೆ ಸಿಬ್ಬಂದಿ ನೇಮಕ, ಸಾಲು ಸಾಲು ಭದ್ರತಾ ಲೋಪವೆಸಗಿ ಕೆಲಸಂಸ್ಥೆಗಳ ನಿರ್ಲಕ್ಷ್ಯಕ್ಕೆ ಆರ್ಬಿಐ ಮೂಲಕವೇ ಪೊಲೀಸರು ಮಾರ್ಗಸೂಚಿ ಪ್ರಕಟಿಸಲು ನಿರ್ಧರಿಸಿದ್ದಾರೆ.

ನೋಡಿರಿ

