ತಾನು ಆಡಿದ ಮಾತೇ ಉಪೇಂದ್ರಗೆ ಮುಳುವಾಯ್ತು –  ನಟನ ವಿರುದ್ಧ ಎಫ್‌ಐಆರ್‌ ದಾಖಲು

ತಾನು ಆಡಿದ ಮಾತೇ ಉಪೇಂದ್ರಗೆ ಮುಳುವಾಯ್ತು –  ನಟನ ವಿರುದ್ಧ ಎಫ್‌ಐಆರ್‌ ದಾಖಲು

ಫೇಸ್​ಬುಕ್ ಲೈವ್​ನಲ್ಲಿ ಅನೇಕ ವಿಚಾರಗಳ ಬಗ್ಗೆ ಮಾತನಾಡಿದ್ದ ಉಪೇಂದ್ರ, ಗಾದೆ ಮಾತೊಂದನ್ನು ಹೇಳಿದ್ದರು. ಇದೀಗ ಈ ಮಾತು ಒಂದು ಸಮುದಾಯದವರನ್ನು ಬಡಿದೆಬ್ಬಿಸಿದೆ. ಈ ಸಂಬಂಧ ನಟ- ನಿರ್ದೇಶಕ ಉಪೇಂದ್ರ ವಿರುದ್ಧ ಎರಡು ಎಫ್ ಐ ಆರ್ ದಾಖಲಾಗಿದೆ.

ನಟ ಉಪೇಂದ್ರ ಅವರು ಸಮುದಾಯವೊಂದನ್ನು ನಿಂದಿಸಿದ ಆರೋಪದ ಮೇಲೆ ಅವರ ವಿರುದ್ಧ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಮಧುಸೂದನ್‌ ಅವರು ಸಿ.ಕೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದರು. ಇದೀಗ ಉಪೇಂದ್ರ ವಿರುದ್ಧ ಮತ್ತೊಂದು ಎಫ್ ಐ ಆರ್ ದಾಖಲಾಗಿದೆ. ರಣಧೀರ ಪಡೆ ಹರೀಶ್  ಕೊಟ್ಟ ದೂರಿನ ಆಧಾರದ ಮೇಲೆ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಇದೂವರೆಗೂ ಉಪೇಂದ್ರ ವಿರುದ್ದ ಎರಡು ಎಫ್ ಐ ಆರ್ ದಾಖಲಾಗಿದ್ದು, ವಿಚಾರಣೆ ಎದುರಿಸಬೇಕಾಗಿದೆ.

ಇದನ್ನೂ ಓದಿ:ಹಿಮಾಚಲ ಪ್ರದೇಶದಲ್ಲಿ ಮಳೆಯ ಆರ್ಭಟಕ್ಕೆ 7 ಮಂದಿ ಬಲಿ – ಮೂವರು ನಾಪತ್ತೆ

ನಟ ಉಪೇಂದ್ರ ಅವರು ಫೇಸ್‌ ಬುಕ್‌ ಲೈವ್‌ನಲ್ಲಿ ಅನೇಕ ವಿಚಾರಗಳ ಬಗ್ಗೆ ಮಾತನಾಡಿದ್ದರು. ಮೊದಲಿಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳು ರಾಷ್ಟ್ರೀಯ ಪಕ್ಷಗಳನ್ನು ಹೊರತುಪಡಿಸಿ ತಮ್ಮದೇ ವಾರಗೆಯ ಇತರೆ ಕೆಲವು ರಾಜಕೀಯ ಪಕ್ಷಗಳಿಗಿಂತಲೂ ಹೆಚ್ಚು ಮತವನ್ನು ಯಾವುದೇ ಪ್ರಚಾರವಿಲ್ಲದೆ ಪಡೆದಿದ್ದಾರೆ ಎಂದು ಹೆಮ್ಮೆಯಿಂದ ಹೇಳಿದರು. ಬಳಿಕ ಮಾತು ಮುಂದುವರೆಸಿ ಯಾವುದೋ ಮಾತಿಗೆ ಊರೆಂದರೆ ಹೊಲೆಗೇರಿ ಇದ್ದೇ ಇರುತ್ತದೆ ಎಂದು ಹೊಲೆಗೇರಿಯನ್ನು ತುಚ್ಛವಾಗಿ ಕಾಣುವ ಗಾದೆಯೊಂದನ್ನು ಹೇಳಿದ್ದರು. ಉಪೇಂದ್ರರ ಈ ಮಾತಿಗೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ.

ಉಪೇಂದ್ರ ವಿರುದ್ಧ ಪ್ರತಿಭಟನೆಗಳು ಶುರುವಾಗಿದೆ. ರಾಮನಗರಲ್ಲಿ ಉಪೇಂದ್ರ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಹಾರೋಹಳ್ಳಿ ವೃತ್ತದಲ್ಲಿ ದಲಿತ ಪರ ಸಂಘಟನೆಗಳ ಮುಖಂಡರು ಉಪೇಂದ್ರ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದ್ದಾರೆ. ಉಪೇಂದ್ರ ಹೇಳಿಕೆ ಖಂಡಿಸಿ ಸಮತಾ ಸೈನಿಕ ದಳ ಮತ್ತು ದಲಿತ ಪರ ಒಕ್ಕೂಟಗಳು ಆಕ್ರೋಶ ಹೊರಹಾಕಿದೆ.

suddiyaana