ದಾಂಪತ್ಯ ಜೀವನಕ್ಕೆ ಕಾಲಿಟ್ಟ ಮುಂಗಾರು ಮಳೆ ಬೆಡಗಿ ಪೂಜಾ ಗಾಂಧಿ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಮುಂಗಾರು ಮಳೆ ಬೆಡಗಿ ಪೂಜಾ ಗಾಂಧಿ

ಮುಂಗಾರು ಮಳೆ ಖ್ಯಾತಿ ನಟಿ ಪೂಜಾ ಗಾಂಧಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬಹುಕಾಲದ ಗೆಳೆಯ ವಿಜಯ್ ಘೋರ್ಪಡೆ ಅವರ ಜೊತೆ ಮಂತ್ರ ಮಾಂಗಲ್ಯ ಪದ್ಧತಿಯಂತೆ ನಟಿ ಮದುವೆಯಾಗಿದ್ದಾರೆ.

ಇದನ್ನೂ ಓದಿ: ‘ಪುಷ್ಪಾ 2’ 1,000 ಕೋಟಿ ರೂ. ಗಳಿಸಿದ್ರೆ ಅಲ್ಲು ಅರ್ಜುನ್ ಗೆ ಸಿಗೋ ಸಂಭಾವನೆ ಇಷ್ಟೊಂದಾ!  – ಟಾಲಿವುಡ್‌ ಲೆಕ್ಕಾಚಾರ ಏನು?

ಬೆಂಗಳೂರಿನ ಯಲಹಂಕದಲ್ಲಿ ಸರಳವಾಗಿ ಮದುವೆ ನೆರವೇರಿದೆ. ಉದ್ಯಮಿ ಹಾಗೂ ಅವರಿಗೆ ಕನ್ನಡ ಕಲಿಸಿರುವ ವಿಜಯ್ ಘೋರ್ಪಡೆ ಅವರ ಜೊತೆ ಪೂಜಾ ಹೊಸ ಬದುಕಿಗೆ ಪೂಜಾಗಾಂಧಿ ಮದುವೆಯಾಗಿದ್ದಾರೆ. ಕಳೆದ 10 ವರ್ಷಗಳಿಂದ ವಿಜಯ್ ಮತ್ತು ಪೂಜಾ ಗಾಂಧಿ ಸ್ನೇಹಿತರಾಗಿದ್ದರು. ವಿಜಯ್ ಅವರಿಂದಲೇ ಪೂಜಾ ಗಾಂಧಿ ಕನ್ನಡ ಕಲಿತಿದ್ದರು. ಈ ಪರಿಚಯವೇ ಪ್ರೇಮಕ್ಕೆ ಮುನ್ನುಡಿ ಬರೆದಿದೆ. 10  ವರ್ಷಗಳ ಪ್ರೀತಿಗೆ ಮದುವೆಯ ಮುದ್ರೆ ಒತ್ತಿದ್ದಾರೆ.

ಪೂಜಾ- ವಿಜಯ್ ಅವರ ಮದುವೆ ಸಮಾರಂಭದಲ್ಲಿ ಅವರ ಕುಟುಂಬಸ್ಥರು, ಆಪ್ತರು ಸ್ಯಾಂಡಲ್‌ ವುಡ್‌ನ ಆತ್ಮೀಯ ಸ್ನೇಹಿತರು ಭಾಗಿದ್ದಾರೆ. ಮುಂಗಾರು ಮಳೆ ನಿರ್ದೇಶಕ ಯೋಗರಾಜ್ ಭಟ್, ಸುಧಾರಾಣಿ, ಶುಭಾ ಪೂಂಜಾ, ಸುಮನಾ ಕಿತ್ತೂರು ಸೇರಿದಂತೆ ಅನೇಕರು ಭಾಗಿಯಾಗಿದ್ದಾರೆ.

Shwetha M