ಗರ್ಭಕಂಠದ ಕ್ಯಾನ್ಸರ್ ಜಾಗೃತಿಗೆ ಪೂನಂ ಪಾಂಡೆ ರಾಯಭಾರಿಯಾಗ್ತಾರಾ? – ಆರೋಗ್ಯ ಸಚಿವಾಲಯ ಹೇಳಿದ್ದೇನು?

ಗರ್ಭಕಂಠದ ಕ್ಯಾನ್ಸರ್ ಜಾಗೃತಿಗೆ ಪೂನಂ ಪಾಂಡೆ ರಾಯಭಾರಿಯಾಗ್ತಾರಾ? – ಆರೋಗ್ಯ ಸಚಿವಾಲಯ ಹೇಳಿದ್ದೇನು?

ವಿವಾದಗಳಿಂದಲೇ ಹೆಚ್ಚು ಚಾಲ್ತಿಯಲ್ಲಿರುವ ಪೂನಂ ಪಾಂಡೆ, ಈಚೆಗೆ ಗರ್ಭಕಂಠ ಕ್ಯಾನ್ಸರ್‌ನಿಂದ ಸಾವನ್ನಪ್ಪಿದ್ದಾಗಿ ಸುದ್ದಿಯಾಗಿತ್ತು. ಪೂನಂ ಪಾಂಡೆ ಸರ್ವಿಕಲ್ ಕ್ಯಾನ್ಸರ್‌ನಿಂದ ಮೃತಪಟ್ಟಿದ್ದಾರೆ ಎಂದು ಇನ್‌ಸ್ಟಾಗ್ರಾಂ ಖಾತೆಯಲ್ಲಿ ಅವರ ಮ್ಯಾನೇಜರ್‌ ಹಂಚಿಕೊಂಡಿದ್ದರು. ಇದರ ಬೆನ್ನಲ್ಲೇ, ನಟಿ ತಾನೇ ವಿಡಿಯೋವೊಂದನ್ನು ಬಿಡುಗಡೆ ಮಾಡಿ, ತಾನು ಸತ್ತಿಲ್ಲ, ಬದುಕಿದ್ದೇನೆ. ಗರ್ಭಕಂಠ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸಲು ತಾವು ಈ ರೀತಿಯ ನಾಟಕವಾಡಿದ್ದಾಗಿ ಹೇಳಿದ್ದರು. ಈ ಬಳಿಕ ಗರ್ಭಕಂಠ ಕ್ಯಾನ್ಸರ್ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ನಡೆಸುತ್ತಿರುವ ಅಭಿಯಾನದ ರಾಯಭಾರಿಯನ್ನಾಗಿ ಆಕೆಯನ್ನು ಆಯ್ಕೆ ಮಾಡಲಾಗಿದೆ. ಹೀಗಾಗಿ ಈ ರೀತಿ ಮಾಡಲಾಗಿದೆ ಎಂಬ ಚರ್ಚೆಗಳು ಹುಟ್ಟಿಕೊಂಡಿದ್ದವು. ಇದೀಗ ಈ ವಿಚಾರವಾಗಿ ಕೇಂದ್ರ ಆರೋಗ್ಯ ಸಚಿವಾಲಯ ಸ್ಪಷ್ಟಣೆ ನೀಡಿದೆ. ಆಕೆಯನ್ನು ರಾಯಭಾರಿಯಾಗಿ ನೇಮಿಸಿಕೊಳ್ಳವುದಿಲ್ಲ ಎಂದು ಹೇಳಿದೆ.

ಇದನ್ನೂ ಓದಿ: ಜೈಲಿನಲ್ಲೇ ಅಂಚೆ ಮತಪತ್ರದ ಮೂಲಕ ಮತ ಚಲಾಯಿಸಿದ ಪಾಕ್‌ ಮಾಜಿ ಪ್ರಧಾನಿ ಇಮ್ರಾನ್ ಖಾನ್!

ಹೌದು, ಮಾರಣಾಂತಿಕ ಕಾಯಿಲೆಯಾದ ಗರ್ಭಕಂಠ ಕ್ಯಾನ್ಸರ್‌ನಿಂದ ತಾನು ಸಾವನ್ನಪ್ಪಿದ್ದಾಗಿ ಭಾರೀ ಸುದ್ದಿಯಾಗಿದ್ದ ಪೂನಂ ಪಾಂಡೆಯನ್ನು ಸರ್ಕಾರ ಜಾಗೃತಿ ರಾಯಭಾರಿಯನ್ನಾಗಿ ಮಾಡುವ ಕುರಿತು ಮಾತುಕತೆಗಳು ನಡೆಯುತ್ತಿವೆ ಎಂಬ ಸುದ್ದಿಯ ಬೆನ್ನಲ್ಲೇ ಸಚಿವಾಲಯ ಸ್ಪಷ್ಟನೆ ನೀಡಿದೆ. ಗರ್ಭಕಂಠ ಕ್ಯಾನ್ಸರ್ ಕುರಿತು ಜಾಗೃತಿ ಮೂಡಿಸಲು ದೇಶಾದ್ಯಂತ ನಡೆಸುತ್ತಿರುವ ಅಭಿಯಾನದ ರಾಯಭಾರಿಯನ್ನಾಗಿ ವಿವಾದಿತ ನಟಿ ಪೂನಂ ಪಾಂಡೆ ಅವರನ್ನು ಬಳಸಿಕೊಳ್ಳುವುದಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ದೇಶಾದ್ಯಂತ ಸರ್ಕಾರ ಗರ್ಭಕಂಠದ ಕ್ಯಾನ್ಸರ್ ಬಗ್ಗೆ ಜಾಗೃತಿ ಅಭಿಯಾನ ನಡೆಸುತ್ತಿದೆ. ಆದರೆ, ಪೂನಂ ಪಾಂಡೆ ಅವರನ್ನು ರಾಯಭಾರಿಯನ್ನಾಗಿ ಪರಿಗಣಿಸುವ ಯಾವುದೇ ಪ್ರಸ್ತಾವ ನಮ್ಮ ಮುಂದಿಲ್ಲ. ಕಾಯಿಲೆಯ ಬಗ್ಗೆ ಮಹಿಳೆಯರಲ್ಲಿ ಜಾಗೃತಿ ಉಂಟು ಮಾಡಲು ವಿವಿಧ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

Shwetha M