ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ – ಜೂನ್ 18ರಿಂದ ನೋಂದಣಿ ಪ್ರಕ್ರಿಯೆ ಆರಂಭ

ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ – ಜೂನ್ 18ರಿಂದ ನೋಂದಣಿ ಪ್ರಕ್ರಿಯೆ ಆರಂಭ

ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್ ಉಚಿತ ನೀಡುವ ಸರ್ಕಾರದ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಕೆ ದಿನಾಂಕವನ್ನು ಮುಂದೂಡಿಕೆ ಮಾಡಲಾಗಿದೆ. ಗೃಹಜ್ಯೋತಿ ಯೋಜನೆಗೆ ಜೂನ್ 18 ರಿಂದ ನೋಂದಣಿ ಪ್ರಕ್ರಿಯೆ ಶುರುವಾಗಲಿದೆ. ರಾಜ್ಯದಲ್ಲಿ 200 ಯೂನಿಟ್ ಉಚಿತ ವಿದ್ಯುತ್ ಪಡೆಯುವ ಗೃಹ ಜ್ಯೋತಿ ಯೋಜನೆಗೆ ಇದೇ ತಿಂಗಳು 15 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದರು. ಆದರೆ, ತಾಂತ್ರಿಕ ದೋಷ ಹಿನ್ನೆಲೆಯಲ್ಲಿ ಸೇವಾಸಿಂಧು ಆ್ಯಪ್ ಮೂಲಕ ಅರ್ಜಿ ಸಲ್ಲಿಸಲು ವಿಳಂಬವಾಗಲಿದೆ. ಇದರಿಂದ ಸರ್ಕಾರ ಅರ್ಜಿ ಸಲ್ಲಿಸುವ ದಿನಾಂಕ ಮುಂದೂಡಿದೆ.

ಇದನ್ನೂ ಓದಿ:  ಸುರ್ಜೇವಾಲ ವಿರುದ್ಧ ರಾಜ್ಯಪಾಲರಿಗೆ ಬಿಜೆಪಿ ದೂರು – ಕಾಫಿ ಕುಡಿದು ಹೋದೆವು ಅಷ್ಟೇ ಎಂದ ರಾಮಲಿಂಗಾರೆಡ್ಡಿ!

ಗೃಹಜ್ಯೋತಿ ಯೋಜನೆಗೆ ಜೂನ್ 18ರಿಂದ ಅರ್ಜಿ ಸಲ್ಲಿಸಲು ಕೋರಲಾಗಿದೆ. ಕರ್ನಾಟಕ ವಿಧಾನಸಭಾ ಚುನವಾಣೆ ವೇಳೆ ಕಾಂಗ್ರೆಸ್ ಕೊಟ್ಟ 5 ಗ್ಯಾರಂಟಿಗಳಲ್ಲಿ 200 ಯೂನಿಟ್ ಉಚಿತವಾಗಿ ನೀಡುವ ಗ್ಯಾರಂಟಿಯೂ ಕೂಡ ಮಹತ್ವದ್ದಾಗಿದೆ. ಇನ್ನು ಗೃಹಜ್ಯೋತಿ ಯೋಜನೆಗೆ ಕೆಲವು ಷರತ್ತುಗಳನ್ನು ವಿಧಿಸಿದ್ದ ಸರ್ಕಾರವು ಜೂನ್ 15ರಿಂದ ಜುಲೈ 15 ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿತ್ತು. ಕೆಲ ತಾಂತ್ರಿಕ ದೋಷದಿಂದಾಗಿ ಅರ್ಜಿ ಸಲ್ಲಿಕೆ ದಿನಾಂಕವನ್ನು ಮುಂದೂಡಲಾಗಿದೆ.

suddiyaana