ಮಳೆ ಕೊರತೆ ಹಿನ್ನೆಲೆ ಬರದ ಛಾಯೆ – 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡಿಕೆ?

ಮಳೆ ಕೊರತೆ ಹಿನ್ನೆಲೆ ಬರದ ಛಾಯೆ – 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡಿಕೆ?

ಸಾಹಿತ್ಯ ಸಮ್ಮೇಳನ ಅಂದ ಮೇಲೆ ಕೋಟಿ ಕೋಟಿ ರೂಪಾಯಿ ಖರ್ಚು ಮಾಡಬೇಕಾಗುತ್ತದೆ. ಆದರೆ, ರಾಜ್ಯದಲ್ಲಿ ಬರಗಾಲದ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಮಂಡ್ಯದಲ್ಲಿ ನಡೆಯಬೇಕಿದ್ದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮುಂದೂಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಇದನ್ನೂ ಓದಿ : ಕೇರಳದಲ್ಲಿ ನಿಫಾ ವೈರಸ್ ಆತಂಕ – ಕರ್ನಾಟಕ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ

ಮಾನ್ಸೂನ್ ಮಳೆ ಕೊರತೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನೀರಿನ ಅಭಾವ ಇದೆ. ಡ್ಯಾಂಗಳಲ್ಲೂ ನೀರು ಕಡಿಮೆಯಾಗುತ್ತಿದ್ದು, ಆತಂಕದ ವಾತಾವರಣ ನಿರ್ಮಾಣವಾಗಿದೆ. ಇದೀಗ ಬರದಿಂದ ರೈತರು ಸಂಕಷ್ಟಕ್ಕೆ ಸಿಲುಕಿರುವುದರಿಂದ ಸಮ್ಮೇಳನ ಮುಂದೂಡಲಾಗಿದೆ. ಮಳೆ ಇಲ್ಲಿದೆ ಜಲಾಶಯಗಳು, ಹಳ್ಳ-ಕೊಳ್ಳಗಳು ಒಣಗುತ್ತಿವೆ. ಹೀಗೆ ಮುಂದುವರಿದರೆ ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೂ ಪರದಾಡುವಂತ ಪರಿಸ್ಥಿತಿ ಎದುರಾಗುವ ಸಾಧ್ಯತೆ ಇದೆ. ರಾಜ್ಯ ಸರ್ಕಾರ ಘೋಷಿಸಿರುವ ಪ್ರಕಾರ ಕರುನಾಡಿನ 195 ತಾಲೂಕುಗಳಲ್ಲಿ ಬರದ (Drought) ಛಾಯೆ ಆವರಿಸಿದೆ. ಇದೀಗ ದಸರಾ ಹಾಗೂ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಮೇಲೂ ಬರದ ಛಾಯೆ ಆವರಿಸಿದೆ. ಹೌದು ಭೀಕರ ಬರಗಾಲ ಪರಿಸ್ಥಿತಿ ಹಿನ್ನೆಲೆ ಮಂಡ್ಯದಲ್ಲಿ ನಡೆಯಬೇಕಿದ್ದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮುಂದೂಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಬರದಿಂದ ರೈತರು ಸಂಕಷ್ಟಕ್ಕೆ ಸಿಲುಕಿರುವುದರಿಂದ ಸಮ್ಮೇಳನ ಮುಂದೂಡಲಾಗಿದೆ.

ಎಲ್ಲೆಲ್ಲಿ ಜಾಸ್ತಿ ಬರ?

ಜಿಲ್ಲಾಧಿಕಾರಿಗಳಿಂದ ಬೆಳೆಹಾನಿಯ ಸಮೀಕ್ಷೆಯ ವರದಿಯ ಅನುಸಾರ, ಸಂಪುಟ ಉಪಸಮಿತಿ ಶಿಫಾರಸಿನ ಅನುಸಾರ 2023ನೇ ಸಾಲಿನಲ್ಲಿ ರಾಜ್ಯದ 31 ಜಿಲ್ಲೆಗಳ 236 ತಾಲೂಕುಗಳ ಪೈಕಿ 195 ತಾಲ್ಲೂಕುಗಳಲ್ಲಿ ಬರ ಪರಿಸ್ಥಿತಿ ಇದೆ ಎಂದು ರಾಜ್ಯ ಸರ್ಕಾರ ಘೋಷಿಸಿದೆ. ಇನ್ನೂ 195 ತಾಲ್ಲೂಕುಗಳ ಪೈಕಿ 161 ತಾಲ್ಲೂಕುಗಳನ್ನು ತೀವ್ರ ಬರಪೀಡಿತ ತಾಲ್ಲೂಕುಗಳಿವೆ. ಹಾಗೂ 34 ತಾಲೂಕುಗಳನ್ನು ಸಾಧಾರಣ ಬರಪೀಡಿತ ತಾಲೂಕು ಎಂದು ಘೋಷಿಸಲಾಗಿದೆ.

Shantha Kumari