ಪವರ್ ಶೇರಿಂಗ್ ಫೈಟ್! – ಸಿಎಂ-ಡಿಸಿಎಂ ಎಲ್ಲರನ್ನೂ ಕರೆಸಿ ಸೆಟಲ್ ಮಾಡ್ತೀವಿ ಎಂದ ಖರ್ಗೆ!

ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ನಡುವಿನ ಪವರ್ ಶೇರಿಂಗ್ ವಿಚಾರ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಯಲ್ಲಿದೆ. ಇದೇ ವಿಚಾರ ಹಲವು ಗೊಂದಲಗಳಿಗೆ ಕಾರಣವಾಗಿದ್ದು, ಅದಕ್ಕಾಗಿ ಹೈಕಮಾಂಡ್ ಮಧ್ಯೆ ಪ್ರವೇಶ ಮಾಡಿದೆ. ಇದೀಗ ಈ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯಿಸಿದ್ದಾರೆ. ದೆಹಲಿಗೆ ಹೋದ ಬಳಿಕ ಮೂರ್ನಾಲ್ಕು ಇಂಪಾರ್ಟೆಂಟ್ ಜನರನ್ನ ಕರೆಸಿ ಮಾತನಾಡ್ತೀನಿ. ಹೈಕಮಾಂಡ್ ಎಲ್ಲವನ್ನ ಸೆಟಲ್ ಮಾಡುತ್ತೆ ಎಂದು ತಿಳಿಸಿದರು.
ಇದನ್ನೂ ಓದಿ: ಡಿವೋರ್ಸ್, ಅಕ್ರಮ ಸಂಬಂಧ ಕೇಸ್ಗಳಿಗಾಗಿ ಕೋರ್ಟ್ಗೆ ಅರ್ಚಕರ ಅಲೆದಾಟ – ಈ ದೇಗುಲದಲ್ಲಿ ಮದುವೆಯೇ ಬಂದ್
ದೆಹಲಿಯ ಇಂದಿರಾ ಕಾಂಗ್ರೆಸ್ ಭವನದಲ್ಲಿ ಇಂದು ಹೈಕಮಾಂಡ್ ಸಭೆ ನಿಗದಿಯಾಗಿದೆ. ಈ ಹಿನ್ನೆಲೆ ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿನಿಂದ ದೆಹಲಿಗೆ ತೆರಳುವ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ಮೂರ್ನಾಲ್ಕು ಜನರನ್ನ ಕರೆಸಿ ಮಾತಾಡ್ತೀನಿ. ಮುಂದೆ ಹೇಗೆ ನಡೆಯಬೇಕು ಅಂತ ತೀರ್ಮಾನ ಮಾಡ್ತೀನಿ. ಸಿಎಂ-ಡಿಸಿಎಂ ಎಲ್ಲರನ್ನೂ ಕರೆಸಿ ಸೆಟಲ್ ಮಾಡ್ತೀವಿ ಎಂದು ಹೇಳಿದರು.ನಾನು ಎಲ್ಲರನ್ನೂ ಕರೆಸಿ ಚರ್ಚೆ ಮಾಡ್ತೇನೆ. ರಾಹುಲ್ ಗಾಂಧಿ ಕೂಡ ಸಭೆಯಲ್ಲಿ ಇರ್ತಾರೆ. ಸಿಎಂ ಡಿಸಿಎಂ ಇಬ್ಬರೂ ಇರ್ತಾರೆ. ಹೈಕಮಾಂಡ್ ಅಂದರೆ ಟೀಮ್ ಏಕಾಂಗಿ ಅಲ್ಲ. ಹೈಕಮಾಂಡ್ ಟೀಮ್ ಕೂತು ಚರ್ಚಿಸಿ ನಿರ್ಣಯ ಕೈಗೊಳ್ಳತ್ತೆ ಎಂದು ಸ್ಪಷ್ಟಪಡಿಸಿದರು.
ಇನ್ನು ಪವರ್ ಶೇರಿಂಗ್ ವಿಚಾರವಾಗಿ ಇದೇ ಶನಿವಾರ ರಾಹುಲ್ ಗಾಂಧಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ಸಿಎಂ, ಡಿಸಿಎಂ ಇಬ್ಬರೂ ಸಭೆಗೆ ತೆರಳೋ ಸಾಧ್ಯತೆಯಿದ್ದು, ಇನ್ನೆರಡು ದಿನಗಳಲ್ಲಿ ಸಂಧಾನ ಸೂತ್ರ ಹೊರಬೀಳಲಿದೆ. ಅಲ್ಲದೇ ಸಿಎಂ-ಡಿಸಿಎಂ ಮುಖಾಮುಖಿ ಆಗುವುದಕ್ಕೂ ಮುನ್ನ ಹೈಕಮಾಂಡ್ಗೆ ಕ್ಲ್ಯಾರಿಟಿಯ ಅಗತ್ಯವಿದೆ. ಹೀಗಾಗಿ ಇಂದು ನಿರ್ಣಾಯಕ ಸಭೆ ನಡೆಸಲಿದೆ ಎಂದು ಪಕ್ಷದ ಆಪ್ತ ಮೂಲಗಳು ತಿಳಿಸಿವೆ.
ದೆಹಲಿಯ ಕಾಂಗ್ರೆಸ್ ಭವನದಲ್ಲಿಂದು ರಾಜ್ಯ ಕಾಂಗ್ರೆಸ್ ಪಾಲಿನ ನಿರ್ಣಾಯಕ ಸಭೆ ನಡೆಯಲಿದ್ದು, ಯಾರು ಸಿಎಂ ಬೇಕು ಅನ್ನೋದರ ಬಗ್ಗೆ ನಿರ್ಣಯ ಕೈಗೊಳ್ಳುವ ಸಾಧ್ಯತೆಯಿದೆ. ಅದಕ್ಕಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ವೇಣುಗೋಪಾಲ ಹಾಗೂ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ ಒಟ್ಟು ಸೇರಿ ಇಂದು ಸಭೆ ನಡೆಸಲಿದ್ದಾರೆ ಅಂತ ಹೇಳಲಾಗ್ತಿದೆ. ಇಂದಿನ ಸಭೆಯಲ್ಲಿ ಪವರ್ ಶೇರಿಂಗ್ ವಿಚಾರದಲ್ಲಿ ಹೈಕಮಾಂಡ್ ನಿಲುವು ಧನಿರಬೇಕು ಎಂಬ ವಿಚಾರದಲ್ಲಿ ಒಂದು ಕ್ಲಾರಿಟಿಗೆ ಬರುವ ಸಾಧ್ಯತೆ ಇದೆ ಎನ್ನಲಾಗಿದೆ.

ನೋಡಿರಿ

