ಯಶಸ್ವಿ ಜೈಸ್ವಾಲ್‌ಗೆ ಜೈ ಹೋ – ಕ್ರಿಕೆಟ್ ದಿಗ್ಗಜರಿಂದ ಹೊಗಳಿಕೆಯ ಮಹಾಪೂರ
ಜೈಸ್ವಾಲ್ ಆಟ ಮೆಚ್ಚಿಕೊಂಡ ಬಿಸಿಸಿಐ ಬಿಗ್‌ಬಾಸ್
ಐಪಿಎಲ್ ಇತಿಹಾಸದಲ್ಲೇ ಅತಿವೇಗದ ಅರ್ಧಶತಕ ಗಳಿಸಿರುವ ದಾಖಲೆ ಮಾಡಿರುವ ಯಶಸ್ವಿ ಜೈಸ್ವಾಲ್ ಈಗ ಕ್ರಿಕೆಟ್ ದಿಗ್ಗಜರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಕೆಕೆಆರ್ ವಿರುದ್ಧ ಕೇವಲ 47 ಎಸೆತಗಳನ್ನು ಎದುರಿಸಿದ ಜೈಸ್ವಾಲ್ 12 ಬೌಂಡರಿ ಹಾಗೂ 5 ಭರ್ಜರಿ ಸಿಕ್ಸರ್ಗಳ ನೆರವಿನಿಂದ ಅಜೇಯ 98 ರನ್ ಬಾರಿಸಿದರು. ಯುವ ಬ್ಯಾಟರ್ ಆಟಕ್ಕೆ ಮನಸೋತಿರುವ ಬಿಸಿಸಿಐ ಕಾರ್ಯದರ್ಶಿ ಜೈ ಶಾ, ಯಶಸ್ವಿ ಜೈಸ್ವಾಲ್ ಅವರ ಆಟವನ್ನು ಹೊಗಳಿದ್ದಾರೆ. ಬಿಸಿಸಿಐ ಬಿಗ್‌ಬಾಸ್ ಜೈಸ್ವಾಲ್ ಆಟ ನೋಡಿ ಮೆಚ್ಚುಗೆ ವ್ಯಕ್ತಪಡಿಸಿರುವುದು ಯುವ ಆಟಗಾರನಿಗೆ ಟೀಮ್ ಇಂಡಿಯಾ ಸೇರಲು ಜಾಸ್ತಿ ದಿನ ಬೇಕಾಗಿಲ್ಲ ಅನ್ನೋ ಮಾತು ಕೂಡಾ ಕೇಳಿಬರುತ್ತಿದೆ.
ಇದನ್ನೂ ಓದಿ: ಐಪಿಎಲ್ ಇತಿಹಾಸದಲ್ಲೇ ಅತಿ ವೇಗದ ಅರ್ಧಶತಕ – ರಾಜಸ್ಥಾನ್ ರಾಯಲ್ಸ್ ತಂಡದ ಜೈಸ್ವಾಲ್ ದಾಖಲೆ
ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಕೇವಲ 13 ಎಸೆತಗಳಲ್ಲಿ ಸ್ಫೋಟಕ ಅರ್ಧಶತಕ ಸಿಡಿಸಿದ ರಾಜಸ್ಥಾನ್ ರಾಯಲ್ಸ್ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಅತಿ ವೇಗದ ಅರ್ಧ ಶತಕದ ದಾಖಲೆಯನ್ನು ತನ್ನ ಹೆಸರಿಗೆ ಬರೆದುಕೊಂಡಿದ್ದಾರೆ. ಈ ಹಿಂದೆ ಲಕ್ನೋ ನಾಯಕ ಕೆಎಲ್ ರಾಹುಲ್ ಹಾಗೂ ಮಾಜಿ ಕೆಕೆಆರ್ ಆಟಗಾರ ಪ್ಯಾಟ್ ಕಮ್ಮಿನ್ಸ್ 14 ಎಸೆತಗಳಲ್ಲಿ ವೇಗದ ಅರ್ಧಶತಕ ಸಿಡಿಸಿದ ದಾಖಲೆ ಬರೆದಿದ್ದರು. ಇದೀಗ ಆ ದಾಖಲೆ ಜೈಸ್ವಾಲ್ ಪಾಲಾಗಿದೆ. ಕೆಕೆಆರ್ ವಿರುದ್ಧ ಕೇವಲ 47 ಎಸೆತಗಳನ್ನು ಎದುರಿಸಿದ ಜೈಸ್ವಾಲ್ 12 ಬೌಂಡರಿ ಹಾಗೂ 5 ಭರ್ಜರಿ ಸಿಕ್ಸರ್ಗಳ ನೆರವಿನಿಂದ ಅಜೇಯ 98 ರನ್ ಬಾರಿಸಿದರು. ಈ ಯುವ ಬ್ಯಾಟರ್ ಆಟ ನೋಡಿ ಬಿಸಿಸಿಐ ಕಾರ್ಯದರ್ಶಿ ಜೈ ಶಾ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವಿಟರ್‌ನಲ್ಲಿ ಬರೆದುಕೊಂಡಿರುವ ಜೈ ಶಾ, ಯಶಸ್ವಿ ಜೈಸ್ವಾಲ್ ಅವರ ಈ ಇನ್ನಿಂಗ್ಸ್ ವಿಶೇಷವಾಗಿದೆ. ಆಟದ ಬಗ್ಗೆ ಅವರ ಧೈರ್ಯ ಮತ್ತು ಉತ್ಸಾಹವು ಸ್ಪಷ್ಟವಾಗಿತ್ತು. ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ್ದಕ್ಕೆ ಅಭಿನಂದನೆಗಳು. ಮುಂದೆಯೂ ನಿಮ್ಮ ಫಾರ್ಮ್ ಹೀಗೆಯೇ ಮುಂದುವರೆಯಲಿ” ಎಂದು ಬರೆದುಕೊಂಡಿದ್ದಾರೆ. ಯಶಸ್ವಿ ಜೈಸ್ವಾಲ್ ತಂಡ ಭಾರತ ಪರ ಆಡುವ ಸಮಯ ಬಂದಿದೆ ಎಂದು ರವಿಶಾಸ್ತ್ರಿ ಹೇಳಿಕೊಂಡಿದ್ದರೆ, ಇನ್ನು 3 ತಿಂಗಳಲ್ಲಿ ಟೀಂ ಇಂಡಿಯಾದಲ್ಲಿ ಜೈಸ್ವಾಲ್ ಸ್ಥಾನ ಪಡೆಯುತ್ತೇನೆ ಎಂದು ಆಕಾಶ್ ಚೋಪ್ರಾ ಬರೆದುಕೊಂಡಿದ್ದಾರೆ. ಇಷ್ಟೆ ಅಲ್ಲದೆ ಯಶಸ್ವಿ ಜೈಸ್ವಾಲ್ ಆಟವನ್ನು ಐಪಿಎಲ್‌ನ ಎಲ್ಲಾ ತಂಡಗಳು ಹಾಡಿ ಹೊಗಳುವುದರೊಂದಿಗೆ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಶುಭ ಹಾರೈಸಿದ್ದಾರೆ.