ಜೈಲು ಸೇರಿದ್ರು ಬುದ್ಧಿ ಕಲಿಯದ ಪ್ರಜ್ವಲ್ ರೇವಣ್ಣ – ಕಂಬಿ ಹಿಂದೆ ನೋಡುತ್ತಿದ್ದ ಹಸಿಬಿಸಿ ದೃಶ್ಯ

ಜೈಲು ಸೇರಿದ್ರು ಪ್ರಜ್ವಲ್ ರೇವಣ್ಣನಿಗೆ ಬುದ್ಧಿ ಬಂದಂತೆ ಕಾಣುತ್ತಿಲ್ಲ. ಅತ್ಯಾಚಾರ ಪ್ರಕರಣದ ಸಜಾ ಕೈದಿ ಹಾಗೂ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಕೊಠಡಿಯಲ್ಲಿಮೊಬೈಲ್ ಹಾಗೂ ಪೆನ್ಡ್ರೈವ್ಗಳು ಪತ್ತೆಯಾಗಿತ್ತು. ಇದೀಗ ಜೈಲಿನಲ್ಲೂ ಪ್ರಜ್ವಲ್ ರೇವಣ್ಣ ಅಶ್ಲೀಲ ಚಿತ್ರಗಳನ್ನು ನೋಡುತ್ತಿದ್ದರು ಎಂದು ತಿಳಿದು ಬಂದಿದೆ.
ಸಿಸಿಬಿ ದಾಳಿ ವೇಳೆ ಜಪ್ತಿಯಾದ ಪೆನ್ಡ್ರೈವ್ನಲ್ಲಿ 70ಕ್ಕೂ ಹೆಚ್ಚಿನ ಅಶ್ಲೀಲ ವಿಡಿಯೋಗಳು ಮತ್ತು ಪ್ರಜ್ವಲ್ ರೇವಣ್ಣ ಕೋಣೆಯಲ್ಲಿದ್ದ ಹಾಸಿಗೆ ಕೆಳಗೆ, ಪತ್ರಿಕೆಗಳಲ್ಲಿ ಪ್ರಕಟಗೊಂಡಿದ್ದ ನಟಿಯರು ಹಾಗೂ ರೂಪದರ್ಶಿಗಳ ಅರೆನಗ್ನ ಫೋಟೋಗಳು ಪತ್ತೆಯಾಗಿವೆ ಎಂದು ತಿಳಿದು ಬಂದಿದೆ. ಅತ್ಯಾಚಾರ ಪ್ರಕರಣದಲ್ಲಿ ಜೈಲಿಗೆ ಹೋಗಿ ಎರಡು ವರ್ಷಗಳು ಉರುಳಿದರೂ ಪ್ರಜ್ವಲ್ ಮನಸ್ಥಿತಿ ಮಾತ್ರ ಇನ್ನೂ ಬದಲಾಗಿಲ್ಲ ಎಂಬುದನ್ನು ಇದು ತೋರಿಸುತ್ತಿದೆ.
ಇದನ್ನೂ ಓದಿ: ಕೋಲಾರದಲ್ಲಿ ಭೀಮನ ಅಮಾವಾಸ್ಯೆ ದಿನವೇ ಹೆಂಡತಿಯಿಂದ ಗಂಡನ ಕೊ*ಲೆ
ಮೊಬೈಲ್ ಮತ್ತು ಪೆನ್ಡ್ರೈವ್ ಪತ್ತೆಯಾದ ಬೆನ್ನಲ್ಲೇ ಪ್ರಜ್ವಲ್ ರೇವಣ್ಣ ಹಾಗೂ ಸಹ ಕೈದಿ ಪ್ರತಾಪ್ ರಾಯ್ ವಿರುದ್ಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಜೊತೆಗೆ ವಿಶೇಷ ಭದ್ರತಾ ವಿಭಾಗದಿಂದ ಸಾಮಾನ್ಯ ಕೈದಿಗಳ ಬ್ಯಾರಕ್ಗೆ ಪ್ರಜ್ವಲ್ ರೇವಣ್ಣನನ್ನು ಕಾರಾಗೃಹ ಅಧಿಕಾರಿಗಳು ಎತ್ತಂಗಡಿ ಮಾಡಿದ್ದಾರೆ. ಪ್ರಜ್ವಲ್ ರೇವಣ್ಣನ ಸೆಲ್ನಲ್ಲಿ ಪತ್ತೆಯಾದ ಮೊಬೈಲ್ ಅನ್ನು ಪರಿಶೀಲಿಸಿದಾಗ ಅದರಲ್ಲಿ ಸಾಮಾಜಿಕ ಜಾಲತಾಣಗಳ ಆ್ಯಪ್ಗಳು ಡೌನ್ ಲೋಡ್ ಆಗಿರುವುದು ಪತ್ತೆಯಾಗಿದೆ. ಜೈಲಿನಲ್ಲಿದ್ದ ಟಿವಿಗೆ ಪೆನ್ಡ್ರೈವ್ ಕನೆಕ್ಟ್ ಮಾಡಿ ಚಲನಚಿತ್ರ ನೋಡಿದ್ದಾಗಿ ಸಿಸಿಬಿ ವಿಚಾರಣೆ ವೇಳೆ ಪ್ರಜ್ವಲ್ ಹಾಗೂ ಪ್ರತಾಪ್ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ

ನೋಡಿರಿ

