ರಾಜ್ಯ ಸರ್ಕಾರದ ಮನವಿಗೆ ಸ್ಪಂದಿಸಿದ ಕೇಂದ್ರ – ಪ್ರಜ್ವಲ್‌ ರೇವಣ್ಣ ರಾಜತಾಂತ್ರಿಕ ಪಾಸ್‌ಪೋರ್ಟ್‌ ರದ್ದತಿ ಪ್ರಕ್ರಿಯೆ ಆರಂಭ!

ರಾಜ್ಯ ಸರ್ಕಾರದ ಮನವಿಗೆ ಸ್ಪಂದಿಸಿದ ಕೇಂದ್ರ – ಪ್ರಜ್ವಲ್‌ ರೇವಣ್ಣ ರಾಜತಾಂತ್ರಿಕ ಪಾಸ್‌ಪೋರ್ಟ್‌ ರದ್ದತಿ ಪ್ರಕ್ರಿಯೆ ಆರಂಭ!

ಮಹಿಳೆಯರ ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಲ್ಲಿ ಪ್ರಜ್ವಲ್‌ ರೇವಣ್ಣ ತಲೆ ಮರೆಸಿಕೊಂಡಿದ್ದಾರೆ. ಪ್ರಕರಣ ಸಂಬಂಧ ಎಸ್‌ಐಟಿ ನೋಟಿಸ್‌ ಕೊಟ್ಟರೂ ಕ್ಯಾರೇ ಎಂದಿಲ್ಲ. ಈ ಹಿನ್ನೆಲೆಯಲ್ಲಿ ರಾಜತಾಂತ್ರಿಕ ಪಾಸ್‌ಪೋರ್ಟ್‌ ರದ್ದು ಮಾಡುವಂತೆ ಕರ್ನಾಟಕ ಸರ್ಕಾರದಿಂದಲೂ ಪ್ರಧಾನಿಯವರಿಗೆ 2 ಬಾರಿ ಪತ್ರ ಬರೆದಿದ್ದರು. ಇದೀಗ ರಾಜ್ಯ ಸರ್ಕಾರ ಮನವಿಗೆ ಕೇಂದ್ರ ಸರ್ಕಾರ ಮಣಿದಿದೆ. ಸಂಸದ ಪ್ರಜ್ವಲ್‌ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್‌ ರದ್ದತಿ ಪ್ರಕ್ರಿಯೆ ಚಾಲನೆ ನೀಡಲಾಗಿದೆ ಎಂದು ವಿದೇಶಾಂಗ ಸಚಿವಾಲಯದ ಮೂಲಗಳಿಂದ ತಿಳಿದುಬಂದಿದೆ.

ಇದನ್ನೂ ಓದಿ: ಹಾಸನ ಪೆನ್‌ಡ್ರೈವ್‌ ಕೇಸ್‌ – ಪ್ರಜ್ವಲ್‌ ರೇವಣ್ಣ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದು ಮಾಡುವಂತೆ  ಪ್ರಧಾನಿಗೆ ಮತ್ತೊಮ್ಮೆ ಪತ್ರ ಬರೆದ ಸಿಎಂ!

ಪ್ರಜ್ವಲ್‌ ರೇವಣ್ಣ ರಾಜತಾಂತ್ರಿಕ ಪಾಸ್‌ ಪೋರ್ಟ್‌ ರದ್ದುಗೊಳಿಸುವಂತೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಎರಡು ಬಾರಿ ಪತ್ರ ಬರೆದಿತ್ತು. ಇದೀಗ ಕರ್ನಾಟಕ ಸರ್ಕಾರದ ಮನವಿಯ ಬೆನ್ನಲ್ಲೇ ವಿದೇಶಾಂಗ ಸಚಿವಾಲಯ ಪ್ರತಿಕ್ರಿಯಿಸಿದ್ದು, ಎಸ್‌ಐಟಿಯಿಂದ ಪಾಸ್‌ಪೋರ್ಟ್‌ ರದ್ದತಿ ಮನವಿ ಬಂದಿದೆ. ಹೀಗಾಗಿ ಪಾಸ್‌ಪೋರ್ಟ್‌ ರದ್ದತಿಗೆ ಕ್ರಮ ಕೈಗೊಳ್ಳಲಾಗುವುದು. ಕೆಲವೊಂದು ದಾಖಲೆಗಳ ಪರಿಶೀಲನೆ ನಡೆಯುತ್ತಿದೆ ಎಂದು ತಿಳಿಸಿದೆ.

ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್‌ಪೋರ್ಟ್‌ ರದ್ದತಿ ಕೋರಿ ಬುಧವಾರವಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ 2ನೇ ಬಾರಿ ಪತ್ರ ಬರೆದಿದ್ದರು. ಅಲ್ಲದೆ, ವಿದೇಶಾಂಗ ಸಚಿವಾಲಯ ಮಧ್ಯಪ್ರವೇಶಿಸುವಂತೆಯೂ ಮನವಿ ಮಾಡಿಕೊಂಡಿದ್ದರು. ಈ ಮನವಿಗೆ ವಿದೇಶಾಂಗ ಸಚಿವಾಲಯ ಪ್ರತಿಕ್ರಿಯೆ ನೀಡಿದೆ ಎಂದು ತಿಳಿದುಬಂದಿದೆ.

Shwetha M