ಹಾಸನ ಪೆನ್‌ಡ್ರೈವ್ ಕೇಸ್ – ಜರ್ಮನಿಯಿಂದ ಲಂಡನ್ ಗೆ ಹಾರಿದ್ರಾ ಪ್ರಜ್ವಲ್?
ಹಾಸನ ಪೆನ್‌ಡ್ರೈವ್ ಕೇಸ್‌ಗೆ ಹೊಸ ಹೊಸ ಟ್ವಿಸ್ಟ್ ಸಿಗುತ್ತಿದೆ. ಈ ಪ್ರಕರಣದ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿಶೇಷ ತನಿಖಾ ದಳ ಮೋಸ್ಟ್ ವಾಂಟೆಡ್ ಲಿಸ್ಟ್ನಲ್ಲಿದ್ದಾರೆ. ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್ ಈಗ ಜರ್ಮನಿಯಿಂದ ಮತ್ತೊಂದು ದೇಶಕ್ಕೆ ಎಸ್ಕೇಪ್ ಆಗಿದ್ದಾರೆ ಎಂದು ವರದಿಯಾಗಿದೆ.
ಇದನ್ನೂ ಓದಿ: SSLC ಪರೀಕ್ಷೆಯಲ್ಲಿ ನೀಡಿದ್ದ ಶೇಕಡಾ 20ರಷ್ಟು ಗ್ರೇಸ್ ಮಾರ್ಕ್ಸ್ ರದ್ದತಿಗೆ ಸಿಎಂ ಸಿದ್ಧರಾಮಯ್ಯ ಸೂಚನೆ!
ಹೌದು, ಹಾಸನ ಪೆನ್‌ಡ್ರೈವ್ ಕೇಸ್ ಬೆಳಕಿಗೆ ಬರುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಮತದಾನ ಮಾಡಿದ ಬಳಿಕ ವಿದೇಶಕ್ಕೆ ಹಾರಿದ್ದಾರೆ. ಪ್ರಜ್ವಲ್ ರೇವಣ್ಣ ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು ಮಾಹಿತಿ ಇತ್ತು. ಇದೀಗ ಪ್ರಜ್ವಲ್ ರೇವಣ್ಣ ಜರ್ಮನಿಯಿಂದಲೂ ಕಾಲ್ಕಿತ್ತಿದ್ದು, ಲಂಡನ್‌ಗೆ ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ.
ಇಂಗ್ಲೆಂಡ್ನಲ್ಲಿನ ಭಾರತದ ಉದ್ಯಮಿಯೊಬ್ಬರ ಸಹಾಯದಿಂದ ಸಂಸದ ಪ್ರಜ್ವಲ್ ರೇವಣ್ಣ ಮತ್ತು ಅವರ ಇಬ್ಬರು ಗೆಳೆಯರು ರೈಲು ಮೂಲಕ ಜರ್ಮಿನಿಯ ಮ್ಯೂನಿಚ್ ಲಂಡನ್‌ಗೆ ಹೋಗಿದ್ದಾರೆ. ದುಬೈ ಮೂಲದ ಒರ್ವ ಮತ್ತು ಬೆಂಗಳೂರು ಮೂಲದ ಒರ್ವ ಸ್ನೇಹಿತ ಪ್ರಜ್ವಲ್ ರೇವಣ್ಣ ಅವರ ಜೊತೆ ಇದ್ದಾರೆ. ಮೂರು ಮಂದಿ ಒಟ್ಟಿಗೆ ಲಂಡನ್‌ಗೆ ಹೋಗಿರುವ ಸಾಧ್ಯೆತೆ ಇದೆ. ಇನ್ನು ಪ್ರಜ್ವಲ್ ರೇವಣ್ಣ ಕೆಳದ 15 ದಿನಗಳಿಂದ ಕುಟುಂಬದ ಸಂಪರ್ಕದಲ್ಲಿಲ್ಲ ಎಂದು ಮೂಲಗಳು ತಿಳಿಸಿವೆ.
ಇನ್ನು ಅಶ್ಲೀಲ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಆರೋಪಿಯನ್ನು ಕುದುರೆಮುಖ ಠಾಣೆ ಪೊಲೀಸರು ಬಂಧಿಸಿದ್ದರು. ಮೂಡಿಗೆರೆ ತಾಲೂಕಿನ ಸಂಸೆ ಗ್ರಾಮದ ಪ್ರಜ್ವಲ್ ಬಂಧಿತ ಆರೋಪಿ. ಆರೋಪಿ ಪ್ರಜ್ವಲ್, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳು ಎಂದು ಫೇಸ್ಬುಕ್, ಯೂಟ್ಯೂಬ್, ಇನ್ಸ್ಟಾಗ್ರಾಮ್ನಲ್ಲಿ ಅಪ್ಲೋಡ್ ಮಾಡಿದ್ದನು. ಪ್ರಜ್ವಲ್ ವಿರುದ್ಧ ಕುದುರೆಮುಖ ಠಾಣೆಯಲ್ಲಿ ಐಪಿಸಿ ಸೆಕ್ಷನ್ 67,67 (ಎ) ಕಲಂ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿ ಪ್ರಜ್ವಲ್ ಟ್ರೋಲ್ ಪೇಜ್ ಅಡ್ಮಿನ್ ಆಗಿದ್ದಾನೆ.