ದೇಶ ಬಿಟ್ಟು ಹೋಗಲು ಸಜ್ಜಾದ್ರಾ ಹೆಚ್‌.ಡಿ ರೇವಣ್ಣ? – ಲುಕ್‌ಔಟ್‌ ನೋಟಿಸ್‌ ಜಾರಿ ಮಾಡಿದ ಎಸ್‌ಐಟಿ!

ದೇಶ ಬಿಟ್ಟು ಹೋಗಲು ಸಜ್ಜಾದ್ರಾ ಹೆಚ್‌.ಡಿ ರೇವಣ್ಣ? – ಲುಕ್‌ಔಟ್‌ ನೋಟಿಸ್‌ ಜಾರಿ ಮಾಡಿದ ಎಸ್‌ಐಟಿ!

ಹಾಸನ ಪೆನ್‌ಡ್ರೈವ್‌ ಪ್ರಕರಣಕ್ಕೆ ಟ್ವಿಸ್ಟ್‌ ಮೇಲೆ ಟ್ವಿಸ್ಟ್‌ ಸಿಗುತ್ತಿದೆ. ಈ ಪ್ರಕರಣದ ತನಿಖೆ ಚುರುಕುಗೊಂಡಿದೆ. ಇದೀಗ ಹೆಚ್‌. ಡಿ ರೇವಣ್ಣ ಅವರು ದೇಶ ಬಿಟ್ಟು ಹೋಗಲು ಸಜ್ಜಾದರೇ ಎಂಬ ಪ್ರಶ್ನೆ ಉದ್ಭವವಾಗಿದೆ. ಇದಕ್ಕೆ ಕಾರಣ ರೇವಣ್ಣ ವಿರುದ್ಧ ಎಸ್‌ಐಟಿ ಲುಕ್‌ಔಟ್‌ ನೋಟಿಸ್‌ ಜಾರಿ ಮಾಡಿರುವುದು.

ಇದನ್ನೂ ಓದಿ: ಲೈಂಗಿಕ ದೌರ್ಜನ್ಯ.. ಕೊಲೆ ಬೆದರಿಕೆ.. ಬ್ಲ್ಯಾಕ್‌ಮೇಲ್‌..  – ಪ್ರಜ್ವಲ್ ವಿರುದ್ಧ​ ಮತ್ತೊಬ್ಬ ಸಂತ್ರಸ್ತೆಯಿಂದ ದೂರು!

ಹೌದು, ಹಾಸನ ಸಂಸದ, ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ   ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಮುಖ ಆರೋಪಿ ಎಚ್‌.ಡಿ. ರೇವಣ್ಣ. ರೇವಣ್ಣ ವಿರುದ್ಧವೂ ಲೈಂಗಿಕ ದೌರ್ಜನ್ಯ ಹಾಗೂ ಅಪಹರಣ ಪ್ರಕರಣ ದಾಖಲಾಗಿದೆ. ಕಳೆದ ಎರಡು ದಿನಗಳಿಂದ ಎಚ್.ಡಿ. ರೇವಣ್ಣ ಕಾಣಿಸಿಕೊಂಡಿಲ್ಲ. ಈ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ಲುಕ್‌ಔಟ್ ನೋಟಿಸ್‌ ಅನ್ನು ಜಾರಿ ಮಾಡಿದ್ದಾರೆ.  ದೇಶ ಬಿಟ್ಟು ಹೋಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಲುಕ್‌ಔಟ್ ನೋಟಿಸ್ ಜಾರಿ ಮಾಡಲಾಗಿದೆ ಎನ್ನಲಾಗಿದೆ.

ಕೆ. ಆರ್. ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಡಿ ಲುಕ್ ಔಟ್ ನೋಟಿಸ್‌ ಅನ್ನು ಜಾರಿ ಮಾಡಲಾಗಿದೆ. ಈಗ ಎಚ್.ಡಿ. ರೇವಣ್ಣ ಸಹ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದ್ದು, ದೇಶ ಬಿಟ್ಟು ಹೋಗುವ ಸಾಧ್ಯತೆ ಇದೆ. ಒಂದು ವೇಳೆ ಅವರು ದೇಶ ಬಿಟ್ಟು ಹೋದರೆ ರಾಜ್ಯ ಸರ್ಕಾರಕ್ಕೆ ತೀವ್ರ ಮುಖಭಂಗವಾಗಲಿದೆ. ಇದೊಂದು ಹೈಪ್ರೊಫೈಲ್‌ ಕೇಸ್‌ ಆಗಿದ್ದು, ಸೂಕ್ಷ್ಮವಾಗಿ ತನಿಖೆ ನಡೆಸಬೇಕಿದೆ. ಹೀಗಾಗಿ ಎಸ್‌ಐಟಿ ಅಧಿಕಾರಿಗಳು ಎಲ್ಲ ಆಯಾಮಗಳಲ್ಲಿಯೂ ತನಿಖೆ ಮಾಡುತ್ತಿದ್ದಾರೆ.

ಇದರ ಜತೆಗೆ ರೇವಣ್ಣ ಅವರಿಗೆ ಈಗಾಗಲೇ ವಿಚಾರಣೆಗೆ ಹಾಜರಾಗುವಂತೆ ಹಲವು ಬಾರಿ ನೋಟಿಸ್‌ ನೀಡುತ್ತಲೇ ಬರಲಾಗಿದೆ. ಇಷ್ಟಾದರೂ ಅವರು ಎಲ್ಲಿಯೂ ಕಾಣಿಸಿಕೊಂಡಿಲ್ಲ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಎಸ್‌ಐಟಿ ಲುಕ್‌ಔಟ್‌ ನೋಟಿಸ್‌ ಜಾರಿಗೊಳಿಸಿದೆ.

Shwetha M