ಪ್ರಜ್ವಲ್ ರೇವಣ್ಣ ಭಾರತಕ್ಕೆ ಬರೋದು ಯಾವಾಗ ಗೊತ್ತಾ? – ವಿಮಾನ ನಿಲ್ದಾಣಗಳಿಗೆ ಲುಕೌಟ್ ನೋಟಿಸ್ ಜಾರಿ!
ಹಾಸನ ಪೆನ್‌ಡ್ರೈವ್ ಪ್ರಕರಣ ರಾಜ್ಯ ಮಾತ್ರವಲ್ಲದೇ ದೇಶದಾದ್ಯಂತ ಭಾರಿ ಚರ್ಚೆಯಾಗುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದ್ದು, ಟ್ವಿಸ್ಟ್ ಮೇಲೆ ಟ್ವಿಸ್ಟ್ ಸಿಗುತ್ತಿದೆ. ಜರ್ಮನಿಯಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್ ರೇವಣ್ಣ ಭಾರತಕ್ಕೆ ಹಿಂತಿರುವುದು ಯಾವಾಗ? ವಾಪಸ್ ಬರ್ತಾರಾ ಅಲ್ಲೆ ಉಳಿದುಕೊಳ್ತಾರಾ ಅನ್ನೋ ಪ್ರಶ್ನೆ ಎಲ್ಲರನ್ನು ಕಾಡುತ್ತಿದೆ. ಇದೀಗ ಪ್ರಜ್ವಲ್ ರೇವಣ್ಣ ಭಾರತಕ್ಕೆ ಹಿಂತಿರುಗಲು ಫ್ಲೈಟ್ ಟಿಕೆಟ್ ಬುಕ್ ಮಾಡಿದ್ದಾರೆ ಎನ್ನಲಾದ ಟಿಕೆಟ್ ಪ್ರತಿ ಸಿಕ್ಕಿದ್ದು, ಇದು ಎಲ್ಲದ್ದಕ್ಕೂ ಉತ್ತರ ನೀಡಿದಂತಿದೆ.
ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಕೇಸ್ – ಮಾಜಿ ಕಾರು ಚಾಲಕ ಕಾರ್ತಿಕ್ ನಾಪತ್ತೆ!
ಹಾಸನ ಅಶ್ಲೀಲ ವಿಡಿಯೋ ವೈರಲ್ ಆದ ಬೆನ್ನಲ್ಲೇ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಎಸ್ಕೇಪ್ ಆಗಿದ್ದಾರೆ ಎಂದು ಹೇಳಲಾಗುತ್ತಿದೆ. ಸದ್ಯ ಜರ್ಮನಿಯಲ್ಲಿ ಇದ್ದಾರೆ ಎಂದು ಹೇಳಲಾಗುತ್ತಿದೆ. ಪ್ರಜ್ವಲ್ ರೇವಣ್ಣ ಮೇ 3 ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ ಎಂದು ಹೇಳಲಾಗಿತ್ತು. ಇದೀಗ ಪ್ರಜ್ವಲ್ ರೇವಣ್ಣ ಶುಕ್ರವಾರ ಬರುವುಉ ಅನುಮಾನ. ಮೇ 15 ಕ್ಕೆ ಭಾರತಕ್ಕೆ ರಿಟರ್ನ್ ಬರಲಿದ್ದಾರೆ ಎನ್ನಲಾಗುತ್ತಿದೆ. ಅದಕ್ಕೆ ಸಾಕ್ಷಿಯಾಗಿ ಟಿಕೆಟ್ ಪ್ರತಿ ಹರಿದಾಡುತ್ತಿದೆ.
ಮಾಹಿತಿ ಪ್ರಕಾರ, ಮೇ15 ಕ್ಕೆ ಹೊರಟು 16 ರಂದು ಬೆಂಗಳೂರಿಗೆ ವಿಮಾನ ತಲುಪಲಿದೆ. ಜರ್ಮನಿಯ ಮ್ಯೂನಿಚ್ ವಿಮಾನ ನಿಲ್ದಾಣದಿಂದ ಪ್ರಜ್ವಲ್ ರೇವಣ್ಣ ಹೊರಟು ಭಾರತಕ್ಕೆ ಬರುತ್ತಾರೆ ಎನ್ನಲಾಗುತ್ತಿದೆ. ಅದಕ್ಕೆ ಸರಿಯಾಗಿ ಟಿಕೆಟ್ನಲ್ಲಿ ಪ್ರಜ್ವಲ್ ಅವರ ಹೆಸರು, ಇನ್ನಿತರ ವಿಳಾಸ ಒಳಗೊಂಡಿರೋದು ಕಾಣಬಹುದಾಗಿದೆ.
ಲುಕೌಟ್ ನೋಟಿಸ್ ಜಾರಿ!
ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಸಂಸದ ಪ್ರಜ್ವಲ್ ರೇವಣ್ಣಗೆ ಲುಕೌಟ್ ನೋಟಿಸ್ ಜಾರಿ ಮಾಡಲಾಗಿದೆ. ವಿಮಾನ ನಿಲ್ದಾಣದ ಇಮಿಗ್ರೇಷನ್ ಲುಕೌಟ್ ನೋಟಿಸ್ ಸರ್ವ್ ಮಾಡಲಾಗಿದೆ. ಎಲ್ಲಾ ವಿಮಾನ ನಿಲ್ದಾಣದ ಇಮಿಗ್ರೇಷನ್ ವಿಭಾಗಕ್ಕೆ ಎಸ್‍ಐಟಿ ಅಧಿಕಾರಿಗಳು ಲುಕೌಟ್ ನೋಟಿಸ್ ತಲುಪಿಸಿದ್ದಾರೆ. ಈ ಮೂಲಕ ಲೊಕೇಟ್ ಆದ ಕೂಡಲೇ ವಶಕ್ಕೆ ಪಡೆಯಲು ಸೂಚನೆ ನೀಡಿದ್ದಾರೆ.