ಬೆಂಗಳೂರಿನಲ್ಲಿ ಆಲಿಕಲ್ಲು ಸಹಿತ ಅಬ್ಬರಿಸಲಿದೆ ಮಳೆ – ಕರ್ನಾಟಕದ ಹಲವೆಡೆ ಮಳೆ ಪೂರ್ವ ಮುಂಗಾರು ಆರ್ಭಟ ಶುರು

ಏಪ್ರಿಲ್ 1ರಿಂದಲೇ ರಾಜ್ಯದ ಹಲವೆಡೆ ಪೂರ್ವ ಮುಂಗಾರು ಆರ್ಭಟ ಶುರುವಾಗಲಿದೆ. ಮಳೆಯಾಗುವ ಜಿಲ್ಲೆಗಳಲ್ಲಿ ಬಿಸಿಲ ಧಗೆ ಕಡಿಮೆಯಾಗಲಿದೆ. ಈಗಾಗಲೇ ಕರಾವಳಿ ಮತ್ತು ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಬಿಸಿಲ ಝಳ ಹೆಚ್ಚಾಗಿದ್ದು, ತಂಪೆರೆಯಲು ಮಳೆರಾಯ ಎಂಟ್ರಿ ಕೊಡ್ತಿದ್ದಾನೆ.
ಇದನ್ನೂ ಓದಿ: ಏ.2ಕ್ಕೆ ದೆಹಲಿಯಲ್ಲಿ ಹೊಸ ಕರ್ನಾಟಕ ಭವನ ಉದ್ಘಾಟನೆ
ರಾಜ್ಯದ ಕೆಲ ಜಿಲ್ಲೆಗಳಲ್ಲಿ ಏಪ್ರಿಲ್ ಮೊದಲ ವಾರ ಗುಡುಗು-ಮಿಂಚು ಸಹಿತ ಆಲಿಕಲ್ಲು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ವರುಣ ಅಬ್ಬರಿಸಲಿದ್ದಾನೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಮೈಸೂರು, ಚಾಮರಾಜ ನಗರ, ಬೆಳಗಾವಿ, ಬಾಗಲಕೋಟೆ, ಗದಗ ಮತ್ತು ಹಾವೇರಿ ಜಿಲ್ಲೆಗಳ ಒಂದೆರಡು ಕಡೆ ಗುಡುಗು ಸಹಿತ ಆಲಿಕಲ್ಲು ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.
ಇದರ ಜೊತೆಗೆ, ಅಂಡಮಾನ್ ಸಮುದ್ರ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ EA ಮಟ್ಟದ ಹವಾಮಾನ ಪರಿಸ್ಥಿತಿ ಇದ್ದು, ಬಂಗಾಳ ಕೊಲ್ಲಿಯ ಮೇಲೆ 3.1 ಕಿ.ಮೀ. ಎತ್ತರದಲ್ಲಿ ಮೇಲಿನ ವಾಯು ಚಂಡಮಾರುತದ ಪ್ರಸರಣ ಗೋಚರಿಸುತ್ತಿದೆ. ಈ ವಾತಾವರಣದ ಬದಲಾವಣೆಗಳು ಕರ್ನಾಟಕದಲ್ಲಿ ಮಳೆಯ ಸಾಧ್ಯತೆಯನ್ನು ಹೆಚ್ಚಿಸಿವೆ. ಕರ್ನಾಟಕದಲ್ಲಿ ಮುಂದಿನ ಮೂರು ದಿನಗಳಲ್ಲಿ 25ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಲವೆಡೆ ಎಲ್ಲೋ ಅಲರ್ಟ್ ಕೂಡ ಘೋಷಣೆ ಮಾಡಲಾಗಿದೆ.
ಏ.1 ಮತ್ತು ಏ.2 ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಮೈಸೂರು, ಚಾಮರಾಜ ನಗರ, ಬೆಳಗಾವಿ, ಬಾಗಲಕೋಟೆ, ಗದಗ ಮತ್ತು ಹಾವೇರಿ ಜಿಲ್ಲೆಗಳ ಒಂದೆರಡು ಕಡೆ ಗುಡುಗು ಸಹಿತ ಆಲಿಕಲ್ಲು ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.
ಏ.3ರಂದು ಕರಾವಳಿಯ ಎಲ್ಲಾಜಿಲ್ಲೆಗಳು, ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆಯಾಗಲಿದ್ದು, ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ ಮತ್ತು ಬಾಗಲಕೋಟೆಯ ಒಂದೆರೆಡು ಕಡೆ ಜೋರು ಮಳೆಯಾಗಲಿದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ.