ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಅವಾಂತರ – ಇಂದು ಜಿಲ್ಲಾಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಚರ್ಚೆ

ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಅವಾಂತರ – ಇಂದು ಜಿಲ್ಲಾಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಚರ್ಚೆ

ಬೆಂಗಳೂರು: ರಾಜ್ಯದಲ್ಲಿ ಕೆಲವು ದಿನಗಳಿಂದ ಭಾರಿ ಮಳೆ ಸುರಿಯುತ್ತಿದ್ದು, ಭಾರಿ ಅವಾಂತರ ಸೃಷ್ಟಿಸಿದೆ. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂಗಾರು ಪೂರ್ವ ಅವಾಂತರ ಹಿನ್ನೆಲೆ ಮಂಗಳವಾರ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚೆ ನಡೆಸಲಿದ್ದಾರೆ.

ಇದನ್ನೂ ಓದಿ: ವರುಣನ ಮೃತ್ಯುಕೇಕೆಗೆ ರಾಜ್ಯದಲ್ಲಿ 8 ಜನ ಮರಣ – ಆಲಿಕಲ್ಲು ಮಳೆಗೆ ಬೆಳೆಯೂ ಸರ್ವನಾಶ!  

ಮಂಗಳವಾರ ಮಧ್ಯಾಹ್ನ 3 ಗಂಟೆಗೆ ವಿಧಾನಸೌಧದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಸಿಇಒಗಳ ಜೊತೆ ವಿವಿಧ ಭಾಗಗಳಲ್ಲಿ ಮಳೆಯಿಂದ ಆದ ಅನಾಹುತಗಳ ಬಗ್ಗೆ ಮಾಹಿತಿ ಪಡೆಯಲಿದ್ದಾರೆ.

ಬಂಗಾಳಕೊಲ್ಲಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿ ಕೆಲವು ದಿನಗಳಿಂದ ರಾಜ್ಯದಾದ್ಯಂತ ಭಾರಿ ಮಳೆಯಾಗುತ್ತಿದೆ. ಈಗಾಗಲೇ ಹಲವು ಜಿಲ್ಲೆಗಳಲ್ಲಿ ಸಾಕಷ್ಟು ಅವಾತಂರ ಸೃಷ್ಟಿಸಿದೆ.  ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದ್ದು, ಸಾರ್ವಜನಿಕ ಆಸ್ತಿ-ಪಾಸ್ತಿಗಳಿಗೆ ನಷ್ಟ ಉಂಟಾಗಿದೆ. ಕೆಲವರ ಮನೆಗಳಿಗೆ ಹಾನಿಯಾಗಿದ್ದು, ಇನ್ನೂ ಕೆಲವು ಮನೆಗಳು ಕುಸಿದುಬಿದ್ದಿವೆ. ಸುಡು ಬೇಸಿಗೆಯಿಂದ ಕಂಗೆಟ್ಟು ಕಾಯುತ್ತಿದ್ದ ರೈತರಿಗೆ ಭಾರೀ ಮಳೆ ನಿದ್ದೆಗೆಡಿಸಿದೆ. ನಿರೀಕ್ಷೆ ಮೀರಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಿದೆ.

suddiyaana