ಗರ್ಭಿಣಿ ಹೊಟ್ಟೆಗೆ ಒದ್ದ ಕಟುಕ ಪೊಲೀಸ್ – ಮಗು ಹುಟ್ಟಿದ ನಂತ್ರ ತಾಯಿ ಸಾ*ವು!

ಗರ್ಭಿಣಿ ಹೊಟ್ಟೆಗೆ ಒದ್ದ ಕಟುಕ ಪೊಲೀಸ್ – ಮಗು ಹುಟ್ಟಿದ ನಂತ್ರ ತಾಯಿ ಸಾ*ವು!

ಉತ್ತರ ಪ್ರದೇಶದ ಫಿರೋಜಾಬಾದ್‌ನಲ್ಲಿ ಗರ್ಭಿಣಿ ಮಹಿಳೆಯೊಬ್ಬರ ಸಾವಿನ ಪ್ರಕರಣ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. 28 ವರ್ಷದ ಅಂಜಲಿ ಎಂಬ ಮಹಿಳೆಯ ಪತಿ ಗೌರವ್ ಅವರನ್ನು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಕರೆದೊಯ್ಯಲು ಪೊಲೀಸರು ರಾತ್ರಿ ವೇಳೆ ಅವರ ಮನೆಗೆ ತೆರಳಿದ್ದರು. ಈ ವೇಳೆ, ಪತಿಯನ್ನು ಕರೆದುಕೊಂಡು ಹೋಗದಂತೆ ಅಂಜಲಿ ಪೊಲೀಸರನ್ನು ಮನವಿ ಮಾಡಿದ್ದರು ಎನ್ನಲಾಗಿದೆ.

ಆದರೆ, ಕುಟುಂಬದ ಆರೋಪದ ಪ್ರಕಾರ, ಈ ಸಂದರ್ಭದಲ್ಲಿ ಸಬ್‌ಇನ್‌ಸ್ಪೆಕ್ಟರ್ ಧರ್ಮಪಾಲ್ ಸಿಂಗ್ ಅವರು ಅಂಜಲಿಯ ಹೊಟ್ಟೆಗೆ ಒದ್ದಿದ್ದಾರೆ. ಇದರಿಂದ ಅವರು ಕೆಳಗೆ ಬಿದ್ದು, ನಂತರ ಅವರ ಆರೋಗ್ಯದಲ್ಲಿ ತೀವ್ರ ಏರುಪೇರು ಕಂಡುಬಂದಿದೆ ಎಂದು ಕುಟುಂಬದವರು ಆರೋಪಿಸಿದ್ದಾರೆ.

ಇದನ್ನೂ ಓದಿ: ಗಣೇಶೋತ್ಸವದ ಸಂಭ್ರಮದ ನಡುವೆ ದುರಂತ! -KSRTC ಬಸ್ ಡಿಕ್ಕಿಗೆ ಮೂವರು ಯುವಕರು ಬ*ಲಿ!

ಅಂಜಲಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸೋಮವಾರ ಬೆಳಗ್ಗೆ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಆದರೆ ಪ್ರಸವದ ಬಳಿಕ ಅವರ ಆರೋಗ್ಯ ಮತ್ತಷ್ಟು ಹದಗೆಟ್ಟಿದ್ದು, ನಂತರ ಫಿರೋಜಾಬಾದ್‌ನ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಅಲ್ಲಿ ವೈದ್ಯರು ಅಂಜಲಿ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. ನವಜಾತ ಶಿಶುವಿನ ಆರೋಗ್ಯವೂ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಆಗ್ರಾಕ್ಕೆ ಕರೆದೊಯ್ಯಲಾಗಿದೆ ಎಂದು ವರದಿಯಾಗಿದೆ.

ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್‌ಸ್ಪೆಕ್ಟರ್‌ಗಳು ಸೇರಿದಂತೆ ಒಟ್ಟು ಆರು ಪೊಲೀಸ್ ಸಿಬ್ಬಂದಿಯನ್ನು ನಿರ್ಲಕ್ಷ್ಯದ ಆರೋಪದಡಿ ಅಮಾನತುಗೊಳಿಸಲಾಗಿದೆ. ಪ್ರಕರಣದ ಕುರಿತು ತನಿಖೆ ಮುಂದುವರಿದಿದ್ದು, ಅಂಜಲಿಯ ಸಾವಿಗೆ ಕಾರಣವೇನು ಎಂಬುದು ತನಿಖೆಯಿಂದ ಸ್ಪಷ್ಟವಾಗಬೇಕಿದೆ.

Kishor KV

Leave a Reply

Your email address will not be published. Required fields are marked *