ಕಾಂತಾರಾ ಚಾಪ್ಟರ್ 1 ಪ್ರೀಮಿಯರ್ ಶೋ ಆರಂಭ – ಎಲ್ಲೆಲ್ಲಿ ಪ್ರೀಮಿಯರ್ ಶೋ ಇರಲಿದೆ?

ಕಾಂತಾರಾ ಚಾಪ್ಟರ್ 1 ಪ್ರೀಮಿಯರ್ ಶೋ ಆರಂಭ – ಎಲ್ಲೆಲ್ಲಿ ಪ್ರೀಮಿಯರ್ ಶೋ ಇರಲಿದೆ?

ಸ್ಯಾಂಡಲ್‌ವುಡ್‌ ನ ಬಹುನಿರೀಕ್ಷಿತ ಸಿನಿಮಾ ಕಾಂತಾರ ಚಾಪ್ಟರ್‌ 1 ರಿಲೀಸ್‌ ಗೆ ಕೌಂಟ್‌ಡೌನ್‌ ಶುರುವಾಗಿದೆ. ನಾಳೆ ದೇಶ ವಿದೇಶಗಳಲ್ಲಿ ಸಿನಿಮಾ ಅದ್ದೂರಿಯಾಗಿ ತೆರೆಮೇಲೆ ಅಪ್ಪಳಿಸಲಿದೆ. ಅದಕ್ಕೂ ಮೊದಲು ಅಂದರೆ ಅಕ್ಟೋಬರ್ 1ರಂದು ಸಿನಿಮಾಗೆ ಪ್ರೀಮಿಯರ್ ಶೋ ಆಯೋಜನೆ ಮಾಡಲಾಗಿದೆ. ಸಿಲಿಕಾನ್‌ ಸಿಟಿ ಬೆಂಗಳೂರು ಸೇರಿದಂತೆ ಹಲವು ಕಡೆಗಳಲ್ಲಿ ಸಿನಿಮಾ ತೆರೆಕಾಣಲಿದೆ.

ಇದನ್ನೂ ಓದಿ: 35ರ ಮಹಿಳೆಯನ್ನ ಮದುವೆಯಾದ 75ರ ವೃದ್ಧ.. ಹನಿಮೂನ್​ಗೂ ಮೊದಲೇ ಪ್ರಾಣ ಬಿಟ್ಟ ಅಜ್ಜ!

ರಿಷಬ್‌ ಶೆಟ್ಟಿ ನಟನೆ- ನಿರ್ದೇಶನದ, ಹೊಂಬಾಳೆ ಫಿಲಂಸ್‌ ನಿರ್ಮಾಣದ ಬಹುನಿರೀಕ್ಷಿತ ಸಿನಿಮಾ ‘ಕಾಂತಾರ ಚಾಪ್ಟರ್‌ 1’ ಗುರುವಾರ ವಿಶ್ವಾದ್ಯಂತ ಬಿಡುಗಡೆಯಾಗಲಿದ್ದು, ಎಲ್ಲೆಡೆ ಹವಾ ಜೋರಾಗಿದೆ. ಕಾಂತಾರ ಚಿತ್ರದ ಪ್ರೀಕ್ವೆಲ್ ಆಗಿರುವ ಕಾರಣ ‘ಕಾಂತಾರ: : ಚಾಪ್ಟರ್ 1’ ಚಿತ್ರದ ಬಗ್ಗೆ ನಿರೀಕ್ಷೆ ಮೂಡಿದೆ.   ದೇಶಾದ್ಯಂತ 6500ರಿಂದ 7000 ಪರದೆಗಳಲ್ಲಿ ಈ ಸಿನಿಮಾ ತೆರೆ ಕಾಣುತ್ತಿದೆ. ಈ ಸಿನಿಮಾದಲ್ಲಿ ರುಕ್ಮಿಣಿ ವಸಂತ್, ಗುಲ್ಶನ್ ದೇವಯ್ಯ ಮೊದಲಾದವರು ನಟಿಸಿದ್ದಾರೆ. ಈ ಸಿನಿಮಾ ಅಕ್ಟೋಬರ್ 2ರಂದು ದೊಡ್ಡ ಮಟ್ಟದಲ್ಲಿ ರಿಲೀಸ್ ಆಗುತ್ತಿದೆ. ಅದಕ್ಕೂ ಮೊದಲೇ ಚಿತ್ರದ ಪ್ರೀಮೀಯರ್ ಶೋಗಳನ್ನು ಬೆಂಗಳೂರಿನಲ್ಲಿ  ಆಯೋಜನೆ ಮಾಡಲಾಗಿದೆ. ಸಂಜೆ 5 ಗಂಟೆಯಿಂದ ಶೋಗಳು ಆರಂಭ ಆಗಿವೆ.

ಬೆಂಗಳೂರಿನಲ್ಲಿರುವ ಏಕ ಪರದೆ ಮತ್ತು ಮಲ್ಟಿಪ್ಲೆಕ್ಸ್​ಗಳಲ್ಲಿ ‘ಕಾಂತಾರ: ಚಾಪ್ಟರ್ 1’ ಚಿತ್ರದ ಪ್ರೀಮಿಯರ್ ಶೋಗಳನ್ನು ಆಯೋಜನೆ ಮಾಡಲಾಗಿದೆ. ಕೆಲವು ತಾಂತ್ರಿಕ ಸಮಸ್ಯೆಗಳ ಕಾರಣದಿಂದ ಪ್ರೀಮಿಯರ್ ಶೋಗಳ ಬಗ್ಗೆ ಯಾವುದೇ ಮಾಹಿತಿ ರಿವೀಲ್ ಆಗಿರಲಿಲ್ಲ. ಆದರೆ, ಈಗ ಅವು ಬಗೆಹರಿದಿದ್ದು, ಸಿನಿಮಾ ಪ್ರೀಮಿಯರ್ ಆಯೋಜನೆ ಮಾಡಲಾಗಿದೆ. ಎಲ್ಲ ಕಡೆಗಳಲ್ಲೂ ದುಬಾರಿ ಬೆಲೆ ನಿಗದಿ ಮಾಡಲಾಗಿದೆ. ಸಿಂಗಲ್ ಸ್ಕ್ರೀನ್​ನಲ್ಲಿ 400 ರೂಪಾಯಿ ಹಾಗೂ ಮಲ್ಟಿಪ್ಲೆಕ್ಸ್​ಗಳಲ್ಲಿ 500 ರೂಪಾಯಿಗೂ ಹೆಚ್ಚಿನ ದರ ನಿಗದಿ ಮಾಡಲಾಗಿದೆ. ಇದರಿಂದ ಹೆಚ್ಚಿನ ಕಲೆಕ್ಷನ್ ನಿರೀಕ್ಷಿಸಬಹುದಾಗಿದೆ. ಸಿನಿಮಾದ ಅವಧಿ 2 ಗಂಟೆ 48 ನಿಮಿಷ ಇದೆ.

Shwetha M