ಗಣರಾಜ್ಯೋತ್ಸವ ಆಚರಣೆಗೆ ಸಿದ್ಧತೆ – ಕಾರ್ಯಕ್ರಮದಲ್ಲಿ ಭಾಗವಹಿಸುವವರಿಗೆ ಮಾಸ್ಕ್ ಕಡ್ಡಾಯ

ಗಣರಾಜ್ಯೋತ್ಸವ ಆಚರಣೆಗೆ ಸಿದ್ಧತೆ – ಕಾರ್ಯಕ್ರಮದಲ್ಲಿ ಭಾಗವಹಿಸುವವರಿಗೆ ಮಾಸ್ಕ್ ಕಡ್ಡಾಯ

ಬೆಂಗಳೂರು: ಗಣರಾಜ್ಯೋತ್ಸವ ಆಚರಣೆಗೆ ಬೆಂಗಳೂರು ನಗರದ ಮಾಣೆಕ್ ಷಾ ಮೈದಾನದಲ್ಲಿ ಸಿದ್ಧತೆ ನಡೆಯುತ್ತಿದೆ. ಜನವರಿ 26ರಂದು ನಡೆಯಲಿರುವ ಗಣರಾಜ್ಯೋತ್ಸವ ಆಚರಣೆಗೆ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಕಾರ್ಯಕ್ರಮದಲ್ಲಿ ಭಾಗವಹಿಸುವವರು ಮಾಸ್ಕ್ ಹಾಕೋದು ಕಡ್ಡಾಯ ಮಾಡಲಾಗಿದೆ. ಇದಲ್ಲದೇ, ಭದ್ರತೆಗೆ 1,200ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ. ಹಾಗೂ ಹೆಚ್ಚುವರಿ ಭದ್ರತೆಗೆ 10 KSRP ತುಕಡಿ, ಸಿಎಆರ್ ತುಕಡಿ ನಿಯೋಜಿಸಲಾಗಿದೆ. ಮಾಣೆಕ್ ಷಾ ಮೈದಾನದ ಸುತ್ತಮುತ್ತ 56 ಸಿಸಿ ಕ್ಯಾಮರಾ ಅಳವಡಿಸಲಾಗಿದೆ. 3 ಅಗ್ನಿಶಾಮಕ ವಾಹನಗಳು, 2 ಆ್ಯಂಬುಲೆನ್ಸ್, 1 ಕ್ಷಿಪ್ರ ಕಾರ್ಯಾಚರಣೆ ಪಡೆ ನಿಯೋಜಿಸಲಾಗಿದೆ.

ಇದನ್ನೂ ಓದಿ:  ‘ಹಾಸನದಲ್ಲಿ ನಾನೇ ಜೆಡಿಎಸ್ ಅಭ್ಯರ್ಥಿ’ – ಸ್ವಯಂ ಘೋಷಿಸಿಕೊಂಡ ಭವಾನಿ ರೇವಣ್ಣ..!

ಮೈದಾನದ ಆಯಾಕಟ್ಟಿನಲ್ಲಿ 100 ಸಿಸಿಟಿವಿ ಅಳವಡಿಸಲಾಗಿದೆ. ಕಾರು ಪಾಸ್ ಗಳನ್ನ ಹೊಂದಿರೋ ಆಹ್ವಾನಿತರು ಪಾಸ್ ಗಳಲ್ಲಿ ನಿಗದಿ ಪಡಿಸಿದ ಸ್ಥಳಗಳಲ್ಲೇ ಕಾರು ಪಾರ್ಕಿಂಗ್ ಮಾಡಬೇಕು. ಜನವರಿ 26 ರ ಬೆಳಗ್ಗೆ 8.30 ರಿಂದ 10.30 ರವರೆಗೂ ಕಬ್ಬನ್ ರಸ್ತೆಯಲ್ಲಿ ಬಿಆರ್ ವಿ ಜಂಕ್ಷನ್ ನಿಂದ ಕಾಮರಾಜ್ ರಸ್ತೆ ಜಂಕ್ಷನ್ ವರೆಗೆ ಸಂಚಾರ ನಿರ್ಬಂಧವಿರಲಿದೆ. ಮಾಣೆಕ್ ಷಾ ಮೈದಾನಕ್ಕೆ ಅನುಮಾನಾಸ್ಪದ ವಸ್ತುಗಳನ್ನು ನಿಷೇಧಿಸಲಾಗಿದೆ. ಹೆಲ್ಮೆಟ್, ಕ್ಯಾಮರಾ, ಕೊಡೆ, ಸೇರಿದಂತೆ ಕೆಲ ವಸ್ತುಗಳನ್ನು ತರುವುದನ್ನು ನಿಷೇಧಿಸಲಾಗಿದೆ. ಸಮಾರಂಭಕ್ಕೆ ಬರುವವರು ಬೆಳಗ್ಗೆ 8.30ರೊಳಗೆ ಪ್ರವೇಶ ಮಾಡಬೇಕು. ಸಮಾರಂಭಕ್ಕೆ ಬರುವ ಸಾರ್ವಜನಿಕರಿಗೆ ಗೇಟ್ 4ರಲ್ಲಿ ಮಾತ್ರ ಪ್ರವೇಶ ನೀಡಲಾಗುತ್ತದೆ.

suddiyaana