ಸುಖೋಯ್-30 ಯುದ್ಧವಿಮಾನದಲ್ಲಿ ಹಾರಾಟ ನಡೆಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸುಖೋಯ್-30 ಯುದ್ಧವಿಮಾನದಲ್ಲಿ ಹಾರಾಟ ನಡೆಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇವತ್ತು ಶನಿವಾರ (ಏಪ್ರಿಲ್.8) ಅಸ್ಸಾಂನಲ್ಲಿ ಭಾರತೀಯ ವಾಯುಪಡೆಯ ಸುಖೋಯ್- 30 ಎಂಕೆಐ ಯುದ್ಧ ವಿಮಾನದಲ್ಲಿ ಮೊದಲ ಬಾರಿಗೆ ಹಾರಾಟ ನಡೆಸಿದರು. 3 ದಿನಗಳ ಅಸ್ಸಾಂ ಪ್ರವಾಸದಲ್ಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ಇಂದು ಸುಖೋಯ್ ವಿಮಾನದಲ್ಲಿ ಹಾರಾಟ ನಡೆಸಿದರು. ಈ ಮೂಲಕ ಯುದ್ಧವಿಮಾನದಲ್ಲಿ ಹಾರಾಟ ನಡೆಸಿದ ಎರಡನೇ ಮಹಿಳಾ ರಾಷ್ಟ್ರಪತಿ ಎಂಬ ಪ್ರಶಂಸೆಗೂ ದ್ರೌಪದಿ ಮುರ್ಮು ಪಾತ್ರರಾಗಿದ್ದಾರೆ.

ಇದನ್ನೂ ಓದಿ: ಕನ್ನಡಿಗರ ಜೀವನಾಡಿ ನಂದಿನಿಯನ್ನು ಮುಗಿಸಲು ಈಗ 3ನೇ ಸಂಚು ನಡೆದಿದೆ: ಎಚ್ಡಿಕೆ ಆರೋಪ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ತೇಜ್‌ಪುರ ಏರ್ ಫೋರ್ಸ್ ಸ್ಟೇಷನ್‌ಗೆ ಆಗಮಿಸಿದ ನಂತರ ವಾಯುಸೇನೆಯು ಗೌರವವನ್ನು ಸಲ್ಲಿಸಿತ್ತು. ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರು 2009 ರಲ್ಲಿ ಸುಖೋಯ್-30 MKI ಫೈಟರ್ ಜೆಟ್‌ನಲ್ಲಿ ಪುಣೆ ವಾಯುನೆಲೆಯಿಂದ ಹಾರಾಟ ನಡೆಸಿದ ಮೊದಲ ಮಹಿಳಾ ರಾಷ್ಟ್ರಪತಿ ಎಂಬ ಪ್ರಶಂಸೆಗೆ ಪಾತ್ರರಾಗಿದ್ದರು. ಇದೀಗ ಯುದ್ಧವಿಮಾನದಲ್ಲಿ ಹಾರಾಟ ನಡೆಸಿದ ಎರಡನೇ ಮಹಿಳಾ ರಾಷ್ಟ್ರಪತಿ ಎಂಬ ಪ್ರಶಂಸೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಪಡೆದಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಮೂರು ದಿನಗಳ ಅಸ್ಸಾಂ ಪ್ರವಾಸದಲ್ಲಿದ್ದಾರೆ.

suddiyaana