ಜೂನ್ 1ರಂದು ಸಚಿವ ಸಂಪುಟ ಸಭೆ – ಗುರುವಾರವೇ 5 ಗ್ಯಾರಂಟಿ ಯೋಜನೆಗಳ ಜಾರಿ..?

ಜೂನ್ 1ರಂದು ಸಚಿವ ಸಂಪುಟ ಸಭೆ – ಗುರುವಾರವೇ 5 ಗ್ಯಾರಂಟಿ ಯೋಜನೆಗಳ ಜಾರಿ..?

ಕರ್ನಾಟದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದು 2 ವಾರಗಳು ಉರುಳಿವೆ. 135 ಸ್ಥಾನಗಳನ್ನ ಗೆಲ್ಲುವ ಮೂಲಕ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಆದರೆ ಕಾಂಗ್ರೆಸ್ ಪಕ್ಷ ಚುನಾವಣಾ ಪೂರ್ವ ನೀಡಿದ್ದ 5 ಗ್ಯಾರಂಟಿ ಯೋಜನೆಗಳ ಜಾರಿ ವಿಚಾರವೇ ಭಾರೀ ಸದ್ದು ಮಾಡುತ್ತಿದೆ. ಈಗಾಗಲೇ ಕರೆಂಟ್ ಬಿಲ್, ಬಸ್ ಗಳಲ್ಲಿ ಟಿಕೆಟ್ ಸೇರಿದಂತೆ ಗ್ಯಾರಂಟಿಗಳ ವಿಚಾರವಾಗಿ ಸಾರ್ವಜನಿಕರು ಅಧಿಕಾರಿಗಳ ಜೊತೆ ಜಗಳ ಮಾಡುತ್ತಿದ್ದಾರೆ.

ಇದನ್ನೂ ಓದಿ : ಸಿದ್ದರಾಮಯ್ಯ ಸಿಟ್ಟಿನಿಂದಾಗಿ ತನ್ವೀರ್ ಸೇಠ್‌ಗೆ ಸಚಿವ ಸ್ಥಾನ ಸಿಕ್ಕಿಲ್ವಾ?

5 ಗ್ಯಾರಂಟಿಗಳ ಹೆಸರಲ್ಲಿ ಅಧಿಕಾರ ಹಿಡಿದಿರುವ ಕಾಂಗ್ರೆಸ್ ಕೊನೆಗೂ ಯೋಜನೆ ಜಾರಿಗೆ ಮುಂದಾಗಿದೆ. ಜೂನ್ 1ರಂದು ಸಚಿವ ಸಂಪುಟ ಸಭೆ ನಡೆಸಿ ಅಂದೇ ಗ್ಯಾರಂಟಿ ಘೋಷಿಸುವ ನಿರೀಕ್ಷೆ ಇದೆ. ಗ್ಯಾರಂಟಿಗಳ ಜಾರಿ ಸಮಸ್ಯೆ ಬಗೆಹರಿಸಲು ವಿಶೇಷ ಸಮಿತಿ ರಚನೆಗೆ ಸರ್ಕಾರ ಮುಂದಾಗಿದೆ. ಗ್ಯಾರಂಟಿ ಯೋಜನೆಗಳ ಬಗ್ಗೆ ಟೀಕೆ ಮಾಡುತ್ತಿರುವ ಬಿಜೆಪಿ ನಾಯಕರಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಬಿಜೆಪಿಯವರು ಟೀಕೆ ಮಾಡಿದಷ್ಟೂ ನಮ್ಮ ಗ್ಯಾರಂಟಿಗಳಿಗೆ ಹೆಚ್ಚು ಪ್ರಚಾರ ಸಿಗುತ್ತದೆ. ಗ್ಯಾರಂಟಿ ಯೋಜನೆಗಳಿಗೆ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲು ಮಾರ್ಗಸೂಚಿ ಸಿದ್ಧಪಡಿಸಿಕೊಂಡು ಜೂನ್‌ 1ರಂದು ಸಚಿವ ಸಂಪುಟ ಸಭೆ ನಡೆಸುತ್ತೇವೆ. ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆ ಅನುಷ್ಠಾನ ಮಾಡುತ್ತೇವೆ ಎಂದು ಹೇಳಿದ್ದಾರೆ.  ಯೋಜನೆಗಳ ಜಾರಿ ಬಗ್ಗೆ ಚರ್ಚೆ ಮಾಡಲು ಜೂ.1ರಂದು ಸಚಿವ ಸಂಪುಟ ಸಭೆ ನಡೆಯಲಿದೆ. ಈ ವೇಳೆ ಎಲ್ಲವನ್ನೂ ಚರ್ಚಿಸಿ ಅನುಷ್ಠಾನ ಮಾಡಲಾಗುತ್ತದೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದ್ದು ಎಲ್ಲಾ ಸಚಿವರು ಭಾಗಿಯಾಗಲಿದ್ದಾರೆ ಎಂದು ತಿಳಿದುಬಂದಿದೆ.

suddiyaana