ಪೈಲೆಟ್‌ ಡ್ರೆಸ್ ಮಿಂಚಿದ ಪ್ರಧಾನಿ ಮೋದಿ – ತೇಜಸ್‌ ಫೈಟರ್‌ಜೆಟ್‌ನಲ್ಲಿ ಹಾರಾಟ

ಪೈಲೆಟ್‌ ಡ್ರೆಸ್ ಮಿಂಚಿದ ಪ್ರಧಾನಿ ಮೋದಿ – ತೇಜಸ್‌ ಫೈಟರ್‌ಜೆಟ್‌ನಲ್ಲಿ ಹಾರಾಟ

ಬೆಂಗಳೂರು: ಪ್ರಧಾನಿ ಮೋದಿ ಇಂದು ಬೆಂಗಳೂರಿಗೆ ಆಗಮಿಸಿದ್ದು, ಸರ್ಕಾರಿ ಸ್ವಾಮ್ಯದ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‌ (ಎಚ್‌ಎಎಲ್‌) ಉತ್ಪಾದನಾ ಘಟಕಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಸ್ವದೇಶಿ ನಿರ್ಮಿತ ತೇಜಸ್‌ ಯುದ್ಧ ವಿಮಾನದಲ್ಲಿ ಪ್ರಧಾನಿ ಮೋದಿ ಹಾರಾಟ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಪ್ರಧಾನಿ ಮೋದಿ ಅವರು ಎಚ್‌ಎಎಲ್‌ ಉತ್ಪಾದನಾ ಘಟಕದಲ್ಲಿ ನಡೆಯುತ್ತಿರುವ ಕಾಮಗಾರಿಯನ್ನು ಪರಿಶೀಲಿಸಲು ಬೆಂಗಳೂರಿಗೆ ಶನಿವಾರ ಬಂದಿದ್ದರು. ಈ ವೇಳೆ, ತೇಜಸ್‌ ಯುದ್ಧ ವಿಮಾನ ಪರಿಶೀಲಿಸಲು ಸ್ವತ: ಪ್ರಧಾನಿಯೇ ಹಾರಾಟ ನಡೆಸುವ ಮೂಲಕ ಗಮನ ಸೆಳೆದಿದ್ದಾರೆ. ಅವರು ತೇಜಸ್‌ ಯುದ್ಧ ವಿಮಾನದಲ್ಲಿ ಹಾರಾಟ ನಡೆಸುತ್ತಿರುವ ಫೋಟೋಗಳನ್ನು ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: 3ನೇ ತರಗತಿಯಲ್ಲೇ ಯೋಧನಾಗುವ ಕನಸು.. 2 ವರ್ಷಗಳ ಹಿಂದಷ್ಟೇ ಮದುವೆ – ‘ಆಲ್ ಓಕೆ’ ಎಂದು ತಂದೆಗೆ ಮೆಸೇಜ್ ಕಳಿಸಿದ್ದರು ಪ್ರಾಂಜಲ್

ತೇಜಸ್‌ನಲ್ಲಿ ಒಂದು ಪಯಣವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಅನುಭವವು ವಿಸ್ಮಯಕಾರಿಯಾಗಿ ಪುಷ್ಟೀಕರಿಸಿದೆ. ಇದು ನಮ್ಮ ದೇಶದಲ್ಲಿ ಸ್ಥಳೀಯ ರಕ್ಷಣಾ ವಲಯಗಳ ಸಾಮರ್ಥ್ಯದ ಬಗ್ಗೆ ನನ್ನಲ್ಲಿ ಗಣನೀಯವಾಗಿ ವಿಶ್ವಾಸ ಹೆಚ್ಚಿಸಿತು. ಜೊತೆಗೆ ನಮ್ಮ ರಾಷ್ಟ್ರೀಯ ಸಾಮರ್ಥ್ಯದ ಬಗ್ಗೆಯೂ ಹೆಮ್ಮೆ ಮತ್ತು ಆಶಾವಾದವನ್ನು ಹೆಚ್ಚಿಸಿತು ಎಂದು ಹೇಳಿಕೊಂಡಿದ್ದಾರೆ.

ಮೋದಿ ಆಗಮನದ ವೇಳೆ ಎಚ್‌ಎಎಲ್ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಸುಮಾರು 500ಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದ್ದು, ವೈಟ್‌ಫೀಲ್ಡ್ ಡಿಸಿಪಿ ನೇತೃತ್ವದಲ್ಲಿ ಪೊಲೀಸರ ಬಂದೋಬಸ್ತ್ ಮಾಡಲಾಗಿದೆ. 4 ಎಸಿಪಿ, 8 ಇನ್ಸ್ಪೆಕ್ಟರ್ ಸೇರಿ 500 ಪೊಲೀಸರನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ.

Shwetha M