ನರೇಂದ್ರ ಮೋದಿ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ

ನರೇಂದ್ರ ಮೋದಿ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ

ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಬಹುಮತ ಪಡೆದಿದೆ. ನರೇಂದ್ರ ಮೋದಿ 3ನೇ ಬಾರಿಗೆ ದೇಶದ ಪ್ರಧಾನಿಯಾಗಲು ಸಜ್ಜಾಗಿದ್ದಾರೆ. ಜೂನ್ 8 ರಂದು ಸಂಜೆ ಪ್ರಧಾನಿ ಮೋದಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಮೋದಿ ರಿಮೋಟ್ ಮೂವರ ಕೈಯಲ್ಲಿ! – 3.Oದಲ್ಲಿ ಕಂಟ್ರೋಲ್ ಮಾಡ್ತಾರಾ?

ಜೂನ್‌ 7 ರಂದು ಸಂಸತ್ ಭವನದಲ್ಲಿ ಎನ್‌ಡಿಎ ಸಂಸದರ ಸಭೆ ನಡೆಯಲಿದೆ. ಈ ಸಭೆಯಲ್ಲಿ ಎನ್‌ಡಿಎ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಮತ್ತು ವಿವಿಧ ಪಕ್ಷಗಳ ಅಧ್ಯಕ್ಷರು  ಭಾಗವಹಿಸಲಿದ್ದಾರೆ. ಅದ್ರ ಮರುದಿನ ಅಂದರೆ ಜೂನ್ 8 ರಂದು ನರೇಂದ್ರ ಮೋದಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಪ್ರಮಾಣ ವಚನ ಕಾರ್ಯಕ್ರಮ ಸಂಜೆ 7 ರಿಂದ 8 ಗಂಟೆಯವರೆಗೆ ನಡೆಯಬಹುದು ಎಂದು ಹೇಳಲಾಗುತ್ತಿದೆ.

ಪ್ರಧಾನ ಮಂತ್ರಿ ಸ್ಥಾನಕ್ಕೆ ನರೇಂದ್ರ ಮೋದಿ ರಾಜೀನಾಮೆ ಸಲ್ಲಿಸಿದ್ದಾರೆ. ಇವತ್ತು 17ನೇ ಲೋಕಸಭೆ ವಿಸರ್ಜನೆಗೆ ಶಿಫಾರಸು ಮಾಡಲು ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಮೋದಿ ಭೇಟಿಯಾಗಿದ್ದಾರೆ. ಈ ವೇಳೆ ಮೋದಿ ರಾಜೀನಾಮೆ ಪತ್ರವನ್ನು ರಾಷ್ಟ್ರಪತಿಗೆ ನೀಡಿದ್ದಾರೆ. ರಾಷ್ಟ್ರಪತಿಗಳು ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಅಲ್ಲದೇ ಹೊಸ ಸರ್ಕಾರ ಅಧಿಕಾರಕ್ಕೆ ಬರುವವರೆಗೆ ಅಧಿಕಾರದಲ್ಲಿ ಮುಂದುವರಿಯುವಂತೆ ನರೇಂದ್ರ ಮೋದಿ ಮತ್ತು ಮಂತ್ರಿ ಮಂಡಳಿಗೆ ಮನವಿ ಮಾಡಿದ್ದಾರೆ.

Shwetha M

Leave a Reply

Your email address will not be published. Required fields are marked *