ಬೈಕ್ ಟ್ಯಾಕ್ಸಿಗೆ ಕೇಂದ್ರದಿಂದ ಗ್ರೀನ್ ಸಿಗ್ನಲ್! – ಹೊಸ ಮಾರ್ಗಸೂಚಿಯಲ್ಲಿ ಏನೇನಿದೆ?

ರಾಜ್ಯದಲ್ಲಿ ಕಳೆದ ಕೆಲವು ದಿನಗಳ ಹಿಂದೆ ಬೈಕ್ ಟ್ಯಾಕ್ಸಿಗೆ ನಿಷೇಧ ಹೇರಲಾಗಿತ್ತು. ಇದೀಗ ಭಾರಿ ಆಕ್ರೋಶಕ್ಕೆ ಕಾರಣವಾಗಿತ್ತು. ಸರ್ಕಾರದ ಈ ನಡೆಯ ವಿರುದ್ಧ ಅಲ್ಲಲ್ಲ ಪ್ರತಿಭಟನೆ ನಡೆಸಲಾಗುತ್ತಿತ್ತು. ಇದೀಗ ಕಡೆಗೂ ಕೇಂದ್ರ ಸರ್ಕಾರ ಬೈಕ್ ಟ್ಯಾಕ್ಸಿಗೆ ಗ್ರೀನ್ ಸಿಗ್ನಲ್ ಕೊಟ್ಟಿದೆ. ಅಷ್ಟೇ ಅಲ್ಲ ಬೈಕ್ ಟ್ಯಾಕ್ಸಿಗೆ ಕೆಲ ಮಾರ್ಗ ಸೂಚಿಯನ್ನ ಬಿಡುಗಡೆ ಮಾಡಲಾಗಿದೆ.
ಇದನ್ನೂ ಓದಿ: ಮೊಹಮ್ಮದ್ ಶಮಿಗೆ ಬಿಗ್ ಶಾಕ್ – ಪತ್ನಿ, ಮಗಳಿಗೆ ತಿಂಗಳಿಗೆ ₹4 ಲಕ್ಷ ಜೀವನಾಂಶ ನೀಡುವಂತೆ ಕೋರ್ಟ್ ಆದೇಶ
ಕರ್ನಾಟಕ ಸರ್ಕಾರ ಕಳೆದ ಜೂ.16ರಿಂದ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಯನ್ನು ಬ್ಯಾನ್ಗೊಳಿಸಿತ್ತು. ಈ ಹಿನ್ನೆಲೆ ಇದರ ವಿರುದ್ಧ ಭಾರಿ ಪ್ರತಿಭಟನೆ ನಡೆಯುತ್ತಿದೆ. ಇದೇ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಬೈಕ್ ಟ್ಯಾಕ್ಸಿಗೆ ಅನುಮತಿ ನೀಡಿದೆ. ಈ ಸಂಬಂಧ ಕೇಂದ್ರ ಸರ್ಕಾರ ಮಾರ್ಗಸೂಚಿಯನ್ನು ಹೊರಡಿಸಿದ್ದು, ನಿಮ್ಮ ಖಾಸಗಿ ಬೈಕ್ಗಳನ್ನು ಬಳಸಿಕೊಂಡು ಅಗ್ರಿಗೇಟರ್ ಸೇವೆಗಳನ್ನು ಒದಗಿಸಬಹುದು. ಆದರೆ ಆಯಾ ರಾಜ್ಯ ಸರ್ಕಾರದ ಅನುಮತಿ ಕಡ್ಡಾಯ ಎಂದು ತಿಳಿಸಿದೆ. ಆದರೆ ಇದೇ ಮೊದಲ ಬಾರಿಗೆ ಕೇಂದ್ರ ಸರ್ಕಾರ ಬೈಕ್ ಟ್ಯಾಕ್ಸಿಗೆ ಅನುಮತಿ ನೀಡಿದೆ. ಕೇಂದ್ರ ರಸ್ತೆ ಸಾರಿಗೆ ಸಚಿವಾಲಯ 1988ರ ಮೋಟಾರು ವಾಹನ ಕಾಯ್ದೆ ಅಡಿಯಲ್ಲಿ 2025ರ ಅಗ್ರಿಗೇಟರ್ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.
ಮಾರ್ಗಸೂಚಿಯಲ್ಲಿ ಏನಿದೆ?
- ರಾಜ್ಯ ಸರ್ಕಾರಗಳು ಖಾಸಗಿ ಬೈಕ್ಗಳನ್ನು ಪ್ರಯಾಣಿಕರ ಸಂಚಾರಕ್ಕೆ ಬಳಸಲು ಅಗ್ರಿಗೇಟರ್ಗಳಿಗೆ ಅನುಮತಿ ಕೊಡಬಹುದು.
- ಇದರಿಂದ ಸಂಚಾರ ದಟ್ಟಣೆ, ಮಾಲಿನ್ಯ ನಿಯಂತ್ರಣ, ಕೈಗೆಟುಕುವ ದರದ ಪ್ರಯಾಣ, ಸ್ಥಳೀಯ ಸಾರಿಗೆ ಅಭಿವೃದ್ಧಿ ಮತ್ತು ಜೀವನವನ್ನ ರೂಪಿಸಲು ಅವಕಾಶ ಮಾಡಿಕೊಡಬಹುದು.
- ರಾಜ್ಯ ಸರ್ಕಾರಗಳು ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 67ರ ಸಬ್ ಸೆಕ್ಷನ್ (3)ರ ಅಡಿಯಲ್ಲಿ ಅಗ್ರಿಗೇಟರ್ಗಳಿಗೆ ಖಾಸಗಿ ವಾಹನಗಳನ್ನ ಪ್ರಯಾಣಿಕರ ಸಂಚಾರಕ್ಕೆ ಬಳಸಲು ಅನುಮತಿ ಕೊಡಬಹುದು
- ಇದರಡಿ ಅಗ್ರಿಗೇಟರ್ಗಳಿಗೆ ದೈನಂದಿನ, ವಾರದ, ಹದಿನೈದು ದಿನದ ಅನುಮತಿಗಾಗಿ ಸರ್ಕಾರ ಶುಲ್ಕ ವಿಧಿಸಬಹುದು.

ನೋಡಿರಿ

