ಬೆಂಗಳೂರಿಗೆ ಹೊರಟಿದ್ದ ಬಸ್ನಲ್ಲಿ ಬೆಂಕಿ! – 20ಕ್ಕೂ ಹೆಚ್ಚು ಮಂದಿ ಸಜೀವ ದಹನ

ಸಿಲಿಕಾನ್ ಸಿಟಿ ಬೆಂಗಳೂರಿಗೆ ಹೊರಟಿದ್ದ ಬಸ್ಸೊಂದು ಬೆಂಕಿಗೆ ಆಹುತಿಯಾಗಿದೆ. ಈ ಅವಘಡದಲ್ಲಿ 20ಕ್ಕೂ ಹೆಚ್ಚು ಮಂದಿ ಸಜೀವ ದಹನವಾಗಿದ್ದಾರೆ ಎಂದು ಹೇಳಲಾಗ್ತಿದೆ.
ಇದನ್ನೂ ಓದಿ: ಈ ಮದುವೆಗೆ ಬರುವವರು ಮದ್ಯ, ಮಾಂಸ ಸೇವನೆ ಮಾಡುವಂತಿಲ್ಲ! – ವೈರಲ್ ಆಯ್ತು ವೆಡ್ಡಿಂಗ್ ಕಾರ್ಡ್!
ಹೈದರಾಬಾದ್ನಿಂದ ಬೆಂಗಳೂರಿಗೆ ಬರುತ್ತಿದ್ದ ಕಾವೇರಿ ಹೆಸರಿನ ವೋಲ್ವೋ ಖಾಸಗಿ ಬಸ್ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಶುಕ್ರವಾರ ಬೆಳಗಿನ ಜಾವ 3 ಗಂಟೆಯ ಧ್ರದ ಕರ್ನೂಲ್ ಬಳಿಯ ಚಿನ್ನಟೇಕೂರು ಬಳಿ ವೇಗವಾಗಿ ಬಂದ ಬೈಕ್ ಬಸ್ಸಿನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ನಂತರ ಬೈಕ್ ಬಸ್ಸಿನ ಕೆಳಗಡೆಯಿಂದ ಮುಂದಕ್ಕೆ ಹೋಗಿ ಇಂಧನ ಟ್ಯಾಂಕ್ಗೆ ಬಡಿದಿದೆ. ಹಿಂಭಾಗದಲ್ಲಿರುವ ಇಂಧನ ಟ್ಯಾಂಕ್ಗೆ ಬೈಕ್ ಡಿಕ್ಕಿ ಬಡಿದ ರಭಸಕ್ಕೆ ಬೆಂಕಿ ಹೊತ್ತಿಕೊಂಡಿದೆ. ಕೆಲವೇ ನಿಮಿಷದಲ್ಲಿ ಬೆಂಕಿ ಇಡೀ ಬಸ್ಸನ್ನು ಆವರಿಸಿದೆ.ಉರಿದಿದ್ದು, ಕನಿಷ್ಠ 20ಕ್ಕೂ ಹೆಚ್ಚು ಜನ ಸಜೀವ ದಹನವಾಗಿರುವ ಶಂಕೆ ವ್ಯಕ್ತವಾಗಿದೆ.
ಈ ಬಸ್ನಲ್ಲಿ 44 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಬಸ್ಸಿನಲ್ಲಿದ್ದ 12 ಮಂದಿ ಪ್ರಯಾಣಿಕರು ಪಾರಾದರೂ ಕನಿಷ್ಠ 25 ಮಂದಿ ಜೀವಂತವಾಗಿ ಸುಟ್ಟು ಹೋಗಿರುವ ಶಂಕೆ ವ್ಯಕ್ತವಾಗಿದೆ. ಪ್ರಯಾಣಿಕರನ್ನು ಕರ್ನೂಲ್ ಸರ್ಕಾರಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಪ್ರಯಾಣಿಕರು ಹೈದರಾಬಾದ್ ನಿವಾಸಿಗಳು ಎಂದು ಪೊಲೀಸರು ತಿಳಿಸಿದ್ದಾರೆ. ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳ ಮತ್ತು ಪೊಲೀಸ್ ತಂಡಗಳು ಸ್ಥಳಕ್ಕೆ ಆಗಮಿಸಿದವು. ರಕ್ಷಣಾ ತಂಡಗಳು ಸ್ಥಳಕ್ಕೆ ಬರುವಷ್ಟರಲ್ಲಿ ಬಸ್ಸು ಬಹುತೇಕ ಸುಟ್ಟುಹೋಗಿತ್ತು. ಈಗ ಅಧಿಕಾರಿಗಳು ಮೃತ ವ್ಯಕ್ತಿಗಳ ಗುರುತು ಪತ್ತೆ ಹಚ್ಚುವ ಕೆಲಸ ಆರಂಭಿಸಿದ್ದಾರೆ.
ಸ್ಲೀಪರ್ ಕೋಚ್ ಬಸ್ಸು ಆಗಿದ್ದ ಕಾರಣ ಪ್ರಯಾಣಿಕರು ನಿದ್ದೆ ಮಾಡುತ್ತಿದ್ದರು. ಸಾಧಾರಣವಾಗಿ ವೋಲ್ವೋ ಬಸ್ಸಿನಲ್ಲಿ ಕಿಟಕಿಯ ಗಾಜುಗಳು ಸಂಪೂರ್ಣವಾಗಿ ಲಾಕ್ ಆಗಿರುತ್ತದೆ. ಹೀಗಿದ್ದರೂ ಬೆಂಕಿ ಕಾಣಿಸಿದ ಕೂಡಲೇ ಕೆಲ ಪ್ರಯಾಣಿಕರು ಗಾಜನ್ನು ಒಡೆದು ಕೆಳಗೆ ಹಾರಿ ಜೀವ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ನೋಡಿರಿ

