ಹಬ್ಬಕ್ಕೆ ಊರಿಗೆ ಹೊರಟವರಿಗೆ ಬಿಗ್‌ ಶಾಕ್!‌ – ಖಾಸಗಿ ಬಸ್‌ ಟಿಕೆಟ್‌ ದರ ಶೇ. 30 ರಷ್ಟು ಹೆಚ್ಚಳ!

ಹಬ್ಬಕ್ಕೆ ಊರಿಗೆ ಹೊರಟವರಿಗೆ ಬಿಗ್‌ ಶಾಕ್!‌ – ಖಾಸಗಿ ಬಸ್‌ ಟಿಕೆಟ್‌ ದರ ಶೇ. 30 ರಷ್ಟು ಹೆಚ್ಚಳ!

ದೀಪಾವಳಿ ಹಬ್ಬಕ್ಕೆ ಕೆಲವೇ ದಿನಗಳು ಬಾಕಿ ಉಳಿದಿದೆ. ಹಬ್ಬಕ್ಕೆ ಬೆಂಗಳೂರಿನಿಂದ ಊರಿಗೆ ತೆರಳಲು ಟಿಕೆಟ್ ಬುಕ್ ಮಾಡಲು ಹೋದವರಿಗೆ ಶಾಕ್ ಎದುರಾಗಿದೆ. ಖಾಸಗಿ ಮಾಲೀಕರು ಬಸ್‌ ಟಿಕೆಟ್‌ ದರ ದುಪ್ಪಟ್ಟು ಮಾಡಿದ್ದು, ಪ್ರಯಾಣಿಕರ ಜೇಬಿಗೆ ಕತ್ತರಿ ಬಿದ್ದಂತಾಗಿದೆ.

ಹೌದು, ದೀಪಾವಳಿ ಹಬ್ಬದ ಹಿನ್ನೆಲೆ ಸಾಲು ಸಾಲು ರಜೆ ಇರುವುದರಿಂದ ಖಾಸಗಿ ಬಸ್​ ಮಾಲೀಕರು ​ ಟಿಕೆಟ್​​​ನ ದರ ದುಪ್ಪಟ್ಟು ಮಾಡಿದ್ದಾರೆ. ಬೇಡಿಕೆ ಹೆಚ್ಚಿರುವ ಮಾರ್ಗಗಳಲ್ಲಿ ಬಸ್ ಟಿಕೆಟ್ ದರವನ್ನು ಶೇ.30ರಷ್ಟು ಹೆಚ್ಚಳ ಮಾಡಿ, ಹಬ್ಬದ ಸಂದರ್ಭದಲ್ಲೇ ಹಗಲು ದರೋಡೆಗೆ ಇಳಿದಿದ್ದಾರೆ.

ಈಗಾಗಲೇ ಹೆಚ್ಚುವರಿ ಶುಲ್ಕ ವಸೂಲಿ ಮಾಡದಂತೆ ಈಗಾಗಲೇ ಖಾಸಗಿ ಬಸ್‌ ಸಂಸ್ಥೆಗಳಿಗೆ ರಾಜ್ಯ ಸರ್ಕಾರ ಎಚ್ಚರಿಕೆ ನೀಡಿದೆ. ಈ ನಿಟ್ಟಿನಲ್ಲಿ ಕಾರ್ಯಾಚರಣೆ ನಡೆಸಲಾಗುವುದು ಎಂದು ಸಾರಿಗೆ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ವಿದೇಶದಲ್ಲೂ ದೀಪಾವಳಿ ಸಂಭ್ರಮ! – ಹಿಂದೂ ಸಮುದಾಯದೊಂದಿಗೆ ಹಬ್ಬ ಆಚರಿಸಿದ ಬ್ರಿಟನ್​​ ಪ್ರಧಾನಿ ರಿಷಿ ಸುನಕ್!

ಇನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಖಾಸಗಿ ಟ್ರಾವೆಲ್ ಆಪರೇಟರ್‌ಗಳಿಗೆ ಹೆಚ್ಚಿನ ಶುಲ್ಕ ವಿಧಿಸದಂತೆ ಎಚ್ಚರಿಕೆ ನೀಡಿದ್ದಾರೆ ಮತ್ತು ಕಾನೂನು ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ. ಸೂಚನೆಯಂತೆ ನಾವು ಕ್ರಮ ಕೈಗೊಳ್ಳುತ್ತೇವೆ ಮತ್ತು ನಿಯಮ ಉಲ್ಲಂಘಿಸುವ ಖಾಸಗಿ ಟ್ರಾವೆಲ್ ಆಪರೇಟರ್‌ಗಳಿಗೆ ದಂಡವನ್ನು ವಿಧಿಸುತ್ತೇವೆಂದು ಅಧಿಕಾರಿಗಳು ತಿಳಿಸಿದ್ದಾರೆ.

ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಕಲಬುರಗಿ, ಬಳ್ಳಾರಿ, ಹೊರನಾಡು, ಯಾದಗಿರಿ, ಮತ್ತು ಬೀದರ್ ಸೇರಿದಂತೆ  ರಾಜ್ಯದೊಳಗಿನ ವಿವಿಧ ಸ್ಥಳಗಳಿಗೆ ಹೆಚ್ಚುವರಿ   2,000 ಹೆಚ್ಚುವರಿ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ನಿಯೋಜಿಸಲಾಗುತ್ತಿದೆ. ತಮಿಳುನಾಡು, ಕೇರಳ, ಆಂಧ್ರಪ್ರದೇಶ ಮತ್ತು ಗೋವಾದಂತಹ ಅಂತರರಾಜ್ಯ ಹೆಚ್ಚುವರಿ ಬಸ್ ಗಳ ನಿಯೋಜಿಸಲಾಗಿದೆ. ಜನರು ಖಾಸಗಿ ಬಸ್ ಗಳ ಬದಲು ಸರ್ಕಾರಿ ಬಸ್ ಗಳ ಬಳಸಬೇಕೆಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಅಧಿಕಾರಿಗಳು ಮನವಿ ಮಾಡಿದ್ದಾರೆ.

Shwetha M