ಚಾಮುಂಡಿ ಬೆಟ್ಟಕ್ಕೆ ಖಾಸಗಿ ವಾಹನಗಳಿಗೆ ನಿರ್ಬಂಧ – ಆಷಾಢದ ಪ್ರತಿ ಶುಕ್ರವಾರ ಉಚಿತ ಸರ್ಕಾರಿ ಬಸ್‌ ವ್ಯವಸ್ಥೆ

ಚಾಮುಂಡಿ ಬೆಟ್ಟಕ್ಕೆ ಖಾಸಗಿ ವಾಹನಗಳಿಗೆ ನಿರ್ಬಂಧ – ಆಷಾಢದ ಪ್ರತಿ ಶುಕ್ರವಾರ ಉಚಿತ ಸರ್ಕಾರಿ ಬಸ್‌ ವ್ಯವಸ್ಥೆ

ಮೈಸೂರು : ಜೂನ್‌ ತಿಂಗಳಲ್ಲಿ ಜ್ಯೇಷ್ಠ ಮಾಸ ಮುಕ್ತಾಯಗೊಂಡು ಆಷಾಢ ಮಾಸ ಆರಂಭವಾಗುತ್ತದೆ. ಆಷಾಢ ಮಾಸದಲ್ಲಿ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭಕ್ತ ಸಾಗರವೇ ಹರಿದು ಬರುತ್ತದೆ. ಆಷಾಢ ಶುಕ್ರವಾರ ಹಾಗೂ ಚಾಮುಂಡೇಶ್ವರಿ ವರ್ಧಂತಿ ದಿನದಂದು ನಗರದ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳನ್ನು ನಿಷೇಧಿಸಲಾಗಿದ್ದು, ಭಕ್ತರು ದೇವಸ್ಥಾನಕ್ಕೆ ತೆರಳಲು ಜಿಲ್ಲಾಡಳಿತದಿಂದ ಕೆಎಸ್‌ಆರ್‌ಟಿಸಿ ಉಚಿತ ಬಸ್‌ ವ್ಯವಸ್ಥೆ ಮಾಡಲಾಗಿದೆ.

ಇದನ್ನೂ ಓದಿ: ಗೃಹಜ್ಯೋತಿ ಯೋಜನೆ ಅರ್ಜಿ ಸಲ್ಲಿಕೆಗೆ ಐದನೇ ದಿನವೂ ವಿಘ್ನ – ಸರ್ವರ್‌ ಸಮಸ್ಯೆಯಿಂದ ಸಿಬ್ಬಂದಿ ಸುಸ್ತು

ಆಷಾಢ ಮಾಸದಲ್ಲಿ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುತ್ತಾರೆ. ಹೀಗಾಗಿ ಟ್ರಾಫಿಕ್‌ ಸಮಸ್ಯೆ ಉಂಟಾಗುವ ಹಿನ್ನೆಲೆ ಸಾರ್ವಜನಿಕರ ವಾಹನಗಳಿಗೆ ನಿರ್ಬಂಧ ಹೇರಲಾಗಿದೆ. ಜೂ. 23, 30, ಜು. 7, 14ರ ಆಷಾಢ ಶುಕ್ರವಾರ ಮತ್ತು ಜು. 10ರ ಶ್ರೀ ಚಾಮುಂಡೇಶ್ವರಿ ವರ್ಧಂತಿಯಂದು ಉಚಿತ ಬಸ್‌ ಸೇವೆ ಕಲ್ಪಿಸಲಾಗಿದೆ.

ಚಾಮುಂಡಿಬೆಟ್ಟಕ್ಕೆ ತಾವರೆಕಟ್ಟೆ ಕಡೆಯಿಂದ, ಉತ್ತನಹಳ್ಳಿ ರಸ್ತೆ ಕಡೆಯಿಂದ ಮತ್ತು ಇಂಡಸ್‌ವ್ಯಾಲಿ ರಸ್ತೆ ಮೂಲಕ ಹೋಗುವ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ. ಬೆಟ್ಟಕ್ಕೆ ಬರುವ ಭಕ್ತರು ತಮ್ಮ ವಾಹನಗಳನ್ನು ಲಲಿತಮಹಲ್‌ ಮೈದಾನದಲ್ಲಿ ಪಾರ್ಕಿಂಗ್‌ ಮಾಡಲು ಜಿಲ್ಲಾಡಳಿತ ವ್ಯವಸ್ಥೆ ಮಾಡಿದೆ. ವಾಹನಗಳನ್ನು ಪಾರ್ಕ್‌ ಮಾಡಿದ ಬಳಿಕ ಬಸ್‌ಗಳಲ್ಲಿ ದೇವಸ್ಥಾನಕ್ಕೆ ತೆರಳಬಹುದು. ಮುಂಜಾನೆ 3 ಗಂಟೆಯಿಂದ ರಾತ್ರಿ 10ರವರೆಗೆ ಬಸ್‌ ಸೌಲಭ್ಯ ಇರುತ್ತದೆ. ಬೆಟ್ಟದ ಪಾದದಿಂದ ಮೆಟ್ಟಿಲು ಮುಖಾಂತರ ದೇವಸ್ಥಾನಕ್ಕೆ ಹೋಗುವ ಭಕ್ತರು ವಾಹನಗಳನ್ನು ಪಿಂಜರಾಪೋಲ್‌ ಮುಂಭಾಗದ ಮೈದಾನದಲ್ಲಿಹಾಗೂ ಪೊಲೀಸರು ಸೂಚಿಸುವ ಪಾರ್ಕಿಂಗ್‌ ಸ್ಥಳದಲ್ಲಿ ನಿಲ್ಲಿಸಿ ದೇವಸ್ಥಾನಕ್ಕೆ ಹೋಗಬೇಕು ಎಂದು ಜಿಲ್ಲಾಡಳಿತ ಸೂಚಿಸಿದೆ.

ಇನ್ನು ದೇವಸ್ಥಾನದಲ್ಲಿ ಭಕ್ತರ ಅನುಕೂಲಕ್ಕಾಗಿ ಪ್ರತ್ಯೇಕ ಹೆಲ್ಪ್‌ ಡೆಸ್ಕ್‌ ಸ್ಥಾಪಿಸಲಾಗಿದೆ. ಇದರೊಂದಿಗೆ ಭದ್ರತಾ ದೃಷ್ಟಿಯಿಂದ ವಿದ್ಯುದೀಪಗಳ ವ್ಯವಸ್ಥೆ ಮತ್ತು ಸಿಸಿ ಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಲಲಿತ ಮಹಲ್‌ ಮೈದಾನದಲ್ಲಿ ವಾಹನಗಳ ನಿಲುಗಡೆಗೆ ಭದ್ರತಾ ವ್ಯವಸ್ಥೆ, ತಾತ್ಕಾಲಿಕ ಬಸ್‌ ನಿಲ್ದಾಣ, ಶೌಚಗೃಹ, ವೈದ್ಯಕೀಯ ಸೌಲಭ್ಯ ಹಾಗೂ ವಿದ್ಯುತ್‌ ದೀಪಗಳ ವ್ಯವಸ್ಥೆ, ಕುಡಿಯುವ ನೀರಿನ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.

suddiyaana