ಲೋಕಸಭೆ ಪ್ರವೇಶಿಸಿದ ಪ್ರಿಯಾಂಕಾ ಗಾಂಧಿ – ವಯನಾಡು ಉಳಿಸಿಕೊಂಡ ರಾಹುಲ್ ಗಾಂಧಿ ಸಹೋದರಿ

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಯನಾಡಿನಲ್ಲಿ ಗೆದ್ದು ಬೀಗಿದ್ದಾರೆ. ರಾಹುಲ್ ಗಾಂಧಿ ಕ್ಷೇತ್ರದಿಂದ ಸಹೋದರಿ ಪ್ರಿಯಾಂಕಾ ಗಾಂಧಿ ಭರ್ಜರಿ ಜಯಭೇರಿ ಸಾಧಿಸಿದ್ದಾರೆ. ಪ್ರಿಯಾಂಕಾ ಗಾಂಧಿ ಅವರು ಇದೇ ಮೊದಲ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಮೊದಲ ಚುನಾವಣೆಯಲ್ಲೇ ದಾಖಲೆಯನ್ನು ಸೃಷ್ಟಿಸಿದ್ದಾರೆ.
ಇದನ್ನೂ ಓದಿ: ಗೌತಮ್ ಅದಾನಿಗೆ ಮಹಾ ಸಂಕಷ್ಟ – ನೆಲಕಚ್ಚಿದ ಷೇರು, ಎಷ್ಟು ಕೋಟಿ ಲಾಸ್?
ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಇದೇ ಮೊದಲ ಭಾರಿಗೆ ಲೋಕಸಭೆ ಪ್ರವೇಶಿಸಿದ್ದಾರೆ. ಚೊಚ್ಚಲ ಪ್ರಯತ್ನದಲ್ಲೇ ಪ್ರಿಯಾಂಕಾ ಗಾಂಧಿ ಸುಮಾರು 4 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.ವಯನಾಡ್ ಕಾಂಗ್ರೆಸ್ ಹಾಗೂ ಎಡ ಪಕ್ಷಗಳ ಭದ್ರಕೋಟೆಯಾಗಿದೆ. ಈ ಬಾರಿ ಬಿಜೆಪಿ ಹಾಗೂ ಬಿಜೆಪಿ ಬೆಂಬಲಿತ ಪಕ್ಷಗಳನ್ನು ಹೊರತುಪಡಿಸಿ, ಉಳಿದ ಪಕ್ಷಗಳಿಂದ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲವಿತ್ತು.
2019ರ ಲೋಕಸಭಾ ಚುನಾವಣೆಯಲ್ಲಿ ಅಮೇಥಿಯಲ್ಲಿ ಸ್ಮೃತಿ ಇರಾನಿ ಎದುರು ಸೋತಿದ್ದ ರಾಹುಲ್ ಗಾಂಧಿ, ವಯನಾಡ್ ಕ್ಷೇತ್ರದಿಂದ ಗೆದ್ದು ಸಂಸದರಾಗಿದ್ದರು. 2024ರ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ವಯನಾಡ್ ಮತ್ತು ರಾಯ್ ಬರೇಲಿ ಎರಡೂ ಕ್ಷೇತ್ರದಲ್ಲಿ ಸ್ಪರ್ಧಿಸಿ ಭಾರಿ ಮತಗಳ ಅಂತರದಿಂದ ಗೆದ್ದಿದ್ದರು. ಸೋನಿಯಾ ಗಾಂಧಿ ಅವರು ರಾಜ್ಯಸಭೆಗೆ ಪ್ರವೇಶಿಸಿದ್ದರಿಂದ ರಾಯ್ ಬರೇಲಿ ಕ್ಷೇತ್ರ ಉಳಿಸಿಕೊಂಡ ರಾಹುಲ್ ಗಾಂಧಿ, ವಯನಾಡ್ ಕ್ಷೇತ್ರವನ್ನು ಸಹೋದರಿಗೆ ಬಿಟ್ಟುಕೊಟ್ಟರು.
ವಯನಾಡ್‌ನಲ್ಲಿ ಎಲ್‌ಡಿಎಫ್‌ನಿಂದ ಸತ್ಯನ್ ಮೊಕೇರಿ ಮತ್ತು ಎನ್‌ಡಿಎಯಿಂದ ನವ್ಯಾ ಹರಿದಾಸ್ ಸೇರಿದಂತೆ ಒಟ್ಟು 16 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಉತ್ತರ ಕೇರಳದಲ್ಲಿರುವ ವಯನಾಡ್ ಲೋಕಸಭಾ ಕ್ಷೇತ್ರವು ಭಾರತದ ಪ್ರಮುಖ ಲೋಕಸಭಾ ಕ್ಷೇತ್ರಗಳಲ್ಲಿ ಒಂದಾಗಿದೆ. ಸುಂದರ ಪ್ರಕೃತಿ ಮತ್ತು ಆದಿವಾಸಿ ಜನರಿಗೆ ಹೆಸರುವಾಸಿಯಾಗಿರುವ ವಯನಾಡ್ ಸಾಂಸ್ಕೃತಿಕ ಮತ್ತು ರಾಜಕೀಯ ಮಹತ್ವವನ್ನು ಹೊಂದಿದೆ.