ಪ್ರಿಯಾಂಕ ಗಾಂಧಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲು – ಭಾರತ್ ಜೋಡೋ ನ್ಯಾಯ್ ಯಾತ್ರೆಗೆ ಗೈರು
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾದ್ರಾ ಅನಾರೋಗ್ಯದಿಂದ ಬಳಲುತ್ತಿದ್ದು, ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಭಾರತ್ ಜೋಡೋ ನ್ಯಾಯ್ ಯಾತ್ರೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಪ್ರಿಯಾಂಕ ಗಾಂಧಿ ಸ್ಪಷ್ಟಪಡಿಸಿದ್ದಾರೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ್ ಯಾತ್ರೆ ಉತ್ತರ ಪ್ರದೇಶ ತಲಿಪಿದೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಉತ್ತರಪ್ರದೇಶದ ಚಂದೌಲಿಯಲ್ಲಿನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗಿಯಾಗುವುದಿಲ್ಲ ಎಂದು ಪ್ರಿಯಾಂಕಾ ತಿಳಿಸಿದ್ದಾರೆ.
ಇದನ್ನೂ ಓದಿ: ಹಳೇ ಹುಬ್ಬಳ್ಳಿ ಗಲಭೆ ಕೇಸ್ – ನ್ಯಾಯಾಂಗ ಬಂಧನದಲ್ಲಿದ್ದ 108 ಆರೋಪಿಗಳು ರಿಲೀಸ್!
ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಅನಾರೋಗ್ಯದ ಕಾರಣ ನಾನು ಆಸ್ಪತ್ರೆಗೆ ದಾಖಲು ಆಗಿದ್ದೇನೆ. ಶೀಘ್ರದಲ್ಲೇ ಅನಾರೋಗ್ಯದಿಂದ ಚೇರಿಸಿಕೊಂಡು ಯಾತ್ರೆಯಲ್ಲಿ ಪಾಲ್ಗೊಳ್ಳುವುದಾಗಿ ಹೇಳಿದ್ದಾರೆ. ಅಲ್ಲದೇ ಯಾತ್ರೆಗಾಗಿ ಎಲ್ಲ ಕಾರ್ಯಗಳನ್ನು ವ್ಯವಸ್ಥಿತವಾಗಿ ಮಾಡಿರುವ ಯುಪಿಯ ಕಾಂಗ್ರೆಸ್ ಮುಖಂಡರಿಗೆ, ಕಾರ್ಯಕರ್ತರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.
ಯಾತ್ರೆಯಲ್ಲಿ ತಾನು ಭಾಗಿಯಾಗದ ಹಿನ್ನೆಲೆಯಲ್ಲಿ ಭಾರತ್ ನ್ಯಾಯ್ ಯಾತ್ರೆಯಲ್ಲಿ ಶ್ರಮಿಸಿದ ಎಲ್ಲಾ ನನ್ನ ಸಹೋದ್ಯೋಗಿಗಳು, ಯಾತ್ರಿಗಳು ಹಾಗೂ ನನ್ನ ಸಹೋದರನಿಗೆ ಶುಭಹಾರೈಸುತ್ತೇನೆ ಎಂದು ಪ್ರಿಯಾಂಕಾ ಬರೆದುಕೊಂಡಿದ್ದಾರೆ.
ಇದೀಗ ಬಿಜೆಪಿ ನಾಯಕರು ಇದನ್ನೇ ಅಸ್ತ್ರವಾಗಿ ಬಳಸಿಕೊಂಡಿದ್ದಾರೆ. ಉತ್ತರಪ್ರದೇಶದ ಬಿಜೆಪಿ, ಯಾವಾಗ ಯಾತ್ರೆ ಉತ್ತರ ಪ್ರದೇಶ ತಲುಪಿತೋ ಅವಾಗಲೇ ಪ್ರಿಯಾಂಕಾ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದು ಕಾಂಗ್ರೆಸ್ ನಾಯಕರ ಮಧ್ಯದ ಭಿನ್ನಾಭಿಪ್ರಾಯ, ಬಿರುಕು ಮೂಡಿದೆ ಎಂಬುದು ಹೇಳುತ್ತದೆ. ಸಹೋದರ-ಸಹೋದರಿ ಮಧ್ಯೆ ಕಿತ್ತಾಟವಿದೆ. ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವು ಸರಿಯಾಗಿಲ್ಲ ಎಂದು ಯುಪಿಯ ಬಿಜೆಪಿ ಐಟಿ ಮುಖ್ಯಸ್ಥ ಅಮಿತ್ ಮಾಳವಿಯಾ ಆರೋಪ ಮಾಡಿದ್ದಾರೆ.