ರಾಯ್ ಬರೇಲಿಯಲ್ಲಿ ಪ್ರಿಯಾಂಕಾ ಗಾಂಧಿ ಸ್ಪರ್ಧೆ ಬಹುತೇಕ ಡೌಟ್‌! – ಕಾರಣವೇನು ಗೊತ್ತಾ?

ರಾಯ್ ಬರೇಲಿಯಲ್ಲಿ ಪ್ರಿಯಾಂಕಾ ಗಾಂಧಿ ಸ್ಪರ್ಧೆ ಬಹುತೇಕ ಡೌಟ್‌! – ಕಾರಣವೇನು ಗೊತ್ತಾ?

ಮೂರನೇ ಹಂತದ ಚುನಾವಣೆಯ ಕಾವು ಜೋರಾಗಿದೆ. ಎಲ್ಲಾ ರಾಜಕೀಯ ಪಕ್ಷಗಳು ಭರ್ಜರಿಯಾಗಿ ಪ್ರಚಾರ ಮಾಡುತ್ತಿವೆ. ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ನಾಯಕಿ ಪ್ರಿಯಾಂಕ ಗಾಂಧಿ ವಾದ್ರಾ ರಾಯ್ ಬರೇಲಿ ಲೋಕಸಭೆ ಕ್ಷೇತ್ರದಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಲಾಗುತ್ತಿತ್ತು. ಇದೀಗ ಪ್ರಿಯಾಂಕ ಸ್ಪರ್ಧೆ ಮಾಡುವುದು ಬಹುತೇಕ ಡೌಟ್‌ ಅಂತಾ ಹೇಳಲಾಗುತ್ತಿದೆ.

ಇದನ್ನೂ ಓದಿ: ಮೂರು ಮದುವೆಯಾದ ಬಳಿಕ ಮೊದಲ ಗಂಡನೇ ಬೇಕು ಅಂತಾ ಪಟ್ಟು ಹಿಡಿದ ಮಹಿಳೆ!

ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ರಾಯ್ ಬರೇಲಿಯಿಂದ ತಮ್ಮ ಅಭ್ಯರ್ಥಿಗಳನ್ನು ಘೋಷಿಸಿಲ್ಲ. ಈ ಕ್ಷೇತ್ರದಲ್ಲಿ ಬಿಜೆಪಿ ವರುಣ್‌ ಗಾಂಧಿ ಅವರನ್ನು ಕಣಕ್ಕೆ ಇಳಿಸಲು ಪ್ಲಾನ್‌ ಮಾಡಿತ್ತು. ಆದ್ರೆ ಟಿಕೆಟ್‌ ನಿರಾಕರಿಸಿದ್ದಾರೆ. ಇದೀಗ ಪ್ರಿಯಾಂಕ ಗಾಂಧಿ ಅವರು 2024ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆ ಕಡಿಮೆ ಇದೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಪರವಾಗಿ ಮಾತ್ರ ಪ್ರಚಾರ ಮಾಡಲಿದ್ದಾರೆ. ಅಮೇಥಿ ಮತ್ತು ಪಕ್ಷದ ಭದ್ರಕೋಟೆಯಾದ ರಾಯ್ ಬರೇಲಿಯಲ್ಲಿ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಶೀಘ್ರದಲ್ಲೇ ಘೋಷಿಸುವ ಸಾಧ್ಯತೆಯಿದೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ.

ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಅಮೇಥಿ ಮತ್ತು ರಾಯ್ ಬರೇಲಿಯಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಲಾಗುತ್ತಿದೆ. ಈ ಬಾರಿಯೂ ರಾಹುಲ್ ಗಾಂಧಿ ಅಮೇಥಿಯಿಂದ ಸ್ಪರ್ಧಿಸಬಹುದು ಎಂಬ ಊಹಾಪೋಹ ಕೆಲ ದಿನಗಳಿಂದ ಇತ್ತು.

ರಾಹುಲ್ ಗಾಂಧಿ 2019ರಲ್ಲಿ ಎರಡು ಕ್ಷೇತ್ರಗಳಿಂದ ಚುನಾವಣೆಗೆ ಸ್ಪರ್ಧಿಸಿದ್ದರು. 2019 ರ ಲೋಕಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿ ಕೇರಳದ ವಯನಾಡ್ ಮತ್ತು ಯುಪಿಯ ಅಮೇಠಿ ಎಂಬ ಎರಡು ಕ್ಷೇತ್ರಗಳಿಂದ ಸ್ಪರ್ಧಿಸಿದ್ದರು. ಆದರೆ ಸೋನಿಯಾ ಗಾಂಧಿ ಯುಪಿಯ ರಾಯ್ ಬರೇಲಿ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದರು. ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಅಮೇಥಿಯಿಂದ ಸ್ಮೃತಿ ಇರಾನಿ ವಿರುದ್ಧ ರಾಹುಲ್ ಸೋಲನ್ನು ಎದುರಿಸಬೇಕಾಯಿತು.

ಆದರೆ ರಾಯ್ ಬರೇಲಿಯಿಂದ ಸೋನಿಯಾ ಭಾರಿ ಮತಗಳಿಂದ ಗೆದ್ದಿದ್ದರು. ಸೋನಿಯಾ ಈ ಬಾರಿ ರಾಜಸ್ಥಾನದಿಂದ ರಾಜ್ಯಸಭಾ ಸದಸ್ಯೆಯಾಗಿ ಆಯ್ಕೆಯಾಗಿದ್ದಾರೆ. ಹೀಗಿರುವಾಗ ಪ್ರಿಯಾಂಕಾ ಗಾಂಧಿ ರಾಯ್ ಬರೇಲಿಯಿಂದ ಚುನಾವಣೆಗೆ ಸ್ಪರ್ಧಿಸುತ್ತಾರೆ ಎಂಬ ಚರ್ಚೆ ಬಹಳ ದಿನಗಳಿಂದ ನಡೆಯುತ್ತಿತ್ತು.

ಇತ್ತೀಚೆಗಷ್ಟೇ ಹರಿದ್ವಾರಕ್ಕೆ ಆಗಮಿಸಿದ್ದ ರಾಬರ್ಟ್ ವಾದ್ರಾ ಬಳಿ ಅಮೇಥಿಯಿಂದ ಚುನಾವಣೆಗೆ ಸ್ಪರ್ಧಿಸುತ್ತೀರಾ ಎಂದು ಕೇಳಲಾಗಿತ್ತು. ಇದಕ್ಕೆ ಪ್ರತಿಕ್ರಿಯಿಸಿದ ಅವರು, ನಾನು ಸದಾ ನಾಡಿನ ಜನರ ಮಧ್ಯೆ ಇದ್ದೇನೆ ಎಂಬ ಕಾರಣಕ್ಕೆ ಸಕ್ರಿಯ ರಾಜಕಾರಣಕ್ಕೆ ಬರಬೇಕು ಎಂಬ ಧ್ವನಿ ದೇಶದೆಲ್ಲೆಡೆ ಬರುತ್ತಿದೆ. 1999ರಿಂದ ಅಲ್ಲಿಗೆ ಪ್ರಚಾರಕ್ಕೆ ಹೋಗಿದ್ದೆ. ಸೋನಿಯಾ ಗಾಂಧಿಯನ್ನು ಅಲ್ಲಿಂದ ಗೆಲುವಿನತ್ತ ಕರೆತಂದಿದ್ದೆವು. ಜನರು ಯಾವಾಗಲೂ ನಾನು ಅವರ ಜತೆ ಇರಬೇಕೆಂದು ಬಯಸುತ್ತಾರೆ ಎಂದಿದ್ದರು.

Shwetha M

Leave a Reply

Your email address will not be published. Required fields are marked *