ಕಾಶ್ಮೀರದಲ್ಲಿ ಉಗ್ರರ ದುಷ್ಕೃತ್ಯಕ್ಕೆ ಬ್ರೇಕ್‌ – ಭಯೋತ್ಪಾದಕರ ಆಸ್ತಿ ಮುಟ್ಟುಗೋಲು!

ಕಾಶ್ಮೀರದಲ್ಲಿ ಉಗ್ರರ ದುಷ್ಕೃತ್ಯಕ್ಕೆ ಬ್ರೇಕ್‌ – ಭಯೋತ್ಪಾದಕರ ಆಸ್ತಿ ಮುಟ್ಟುಗೋಲು!

ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕ ಕೃತ್ಯಗಳು ನಡೆಯುತ್ತಲೇ ಇದೆ. ಇದೀಗ  ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಜ್ಜಾಗಿದ್ದ ಪಾಕ್ ಮೂಲದ ಭಯೋತ್ಪಾದಕರ ಆಸ್ತಿಯನ್ನು ಪೊಲೀಸರು  ಮುಟ್ಟುಗೋಲು ಹಾಕಿಕೊಂಡಿದ್ದಾರೆ.

ಜಮ್ಮುವಿನ ದೋಡಾ ಜಿಲ್ಲೆಯಲ್ಲಿ ಭಯೋತ್ಪಾದನಾ ಚಟುವಟಿಕೆಗಳಿಗೆ ಕುಮ್ಮಕ್ಕು ಕೊಡುತ್ತಿರುವ ಭಯೋತ್ಪಾದಕರ ವಿರುದ್ಧ ಅಧಿಕಾರಿಗಳು ಕಠಿಣ ಕ್ರಮ ಕೈಗೊಳ್ಳಲು ಪ್ರಾರಂಭಿಸಿದ್ದಾರೆ. ಈಗಾಗಲೇ ಇಬ್ಬರು ಭಯೋತ್ಪಾದಕರ ಆಸ್ತಿಯನ್ನು ಮುಟ್ಟುಗೋಲು ಹಾಕಲಾಗಿದೆ. ಅಲ್ಲದೇ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಿಂದ ಕಾರ್ಯನಿರ್ವಹಿಸುತ್ತಿರುವ ಇತರ 14 ಭಯೋತ್ಪಾದಕರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ನ್ಯಾಯಾಧೀಶರ ಮಗನ ಶೂ ಕಳವು – ವಿಶೇಷ ತನಿಖಾ ತಂಡ ರಚಿಸಿದ ಪೊಲೀಸರು!

ಜಮ್ಮುವಿನ ದೋಡಾ ಜಿಲ್ಲೆಯಲ್ಲಿ ಭಯೋತ್ಪಾದನಾ ಚಟುವಟಿಕೆಗಳಿಗೆ ಕುಮ್ಮಕ್ಕು ಕೊಡುತ್ತಿರುವ ಭಯೋತ್ಪಾದಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಿದ್ದಾರೆ. ಘೋಷಿತ ಅಪರಾಧಿಗಳಾದ ಲಾಲ್ ದಿನ್‍ಗೆ ಸೇರಿದ ಕಿಶ್ತ್‍ವಾರ್‍ನ ಮುಗಲ್ ಮೈದಾನದಲ್ಲಿರುವ ಹಾಗೂ ಅಬ್ದುಲ್ ರಶೀದ್‍ಗೆ ಸೇರಿದ ಫಾಗ್ಸೂ ಥಾತ್ರಿ ಗ್ರಾಮದಲ್ಲಿರುವ ಭೂಮಿಯನ್ನು ವಶಪಡಿಸಿಕೊಳ್ಳಲಾಗಿದೆ. ಸುಮಾರು 16 ಘೋರ ಭಯೋತ್ಪಾದಕ ಕೃತ್ಯಗಳಲ್ಲಿ ಈ ಇಬ್ಬರೂ ಭಾಗಿಯಾಗಿದ್ದಾರೆ. ಈ ಇಬ್ಬರೂ ತಲೆ ಮರೆಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ದೋಡಾ ಎಸ್‍ಎಸ್‍ಪಿ ಅಬ್ದುಲ್ ಖಯ್ಯೂಮ್ ನ್ಯಾಯಾಲಯದ ಆದೇಶದಂತೆ ನಾವು 14 ಪ್ರಕರಣಗಳಲ್ಲಿ ಆಸ್ತಿ ವಿವರಗಳನ್ನು ಕಂದಾಯ ಇಲಾಖೆಯಿಂದ ಕೇಳುತ್ತಿದ್ದೇವೆ. ವಿವರ ಬಂದ ನಂತರ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

suddiyaana