ಕಾಟನ್ ಕ್ಯಾಂಡಿ ಮಾರಾಟ ಬ್ಯಾನ್ ಮಾಡಿದ ಸರ್ಕಾರ! – ಕಾರಣವೇನು ಗೊತ್ತಾ?
ಪುಟ್ಟ ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಕಾಟನ್ ಕ್ಯಾಂಡಿ ನೆಚ್ಚಿನ ತಿನಿಸಾಗಿದೆ. ಅನೇಕರು ಇದನ್ನು ಇಷ್ಟಪಟ್ಟು ತಿಂತಾರೆ. ಅನೇಕರ ಅಚ್ಚುಮೆಚ್ಚಾಗಿದ್ದ ಕಾಟನ್ ಕ್ಯಾಂಡಿಯನ್ನು ಬ್ಯಾನ್ ಮಾಡಲಾಗಿದೆ.
ಹೌದು, ಕಾಟನ್ ಕ್ಯಾಂಡಿ ತಯಾರಿಕೆಯಲ್ಲಿ ವಿಷಕಾರಿ ಆಂಶವನ್ನು ಬಳಸಲಾಗುತ್ತದೆ. ಇದು ಆರೋಗ್ಯಕ್ಕೆ ಹಾನಿಕರವಾಗಿದೆ. ಈ ಹಿನ್ನೆಲೆ ಪುದುಚೇರಿಯಲ್ಲಿ ಕಾಟನ್ ಕ್ಯಾಂಡಿಯನ್ನು ನಿಷೇಧಿಸಲಾಗಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ: ಸಾವಿನ ನಾಟಕವಾಡಿದ್ದ ಪೂನಂ ಕಾನೂನು ಸಂಕಷ್ಟ! – ನಟಿ ವಿರುದ್ದ100 ಕೋಟಿ ರೂ. ಮಾನನಷ್ಟ ಮೊಕದ್ದಮೆ!
ಪುದುಚೇರಿ ಲೆಫ್ಟಿನೆಂಟ್ ಗವರ್ನರ್ ತಮಿಳಿಸೈ ಸೌಂದರರಾಜನ್ ಅವರು ಕಾಟನ್ ಕ್ಯಾಂಡಿ ಬ್ಯಾನ್ ಮಾಡಿರುವ ಬಗ್ಗೆ ತಮ್ಮ ಸೋಶಿಯಲ್ ಮೀಡಿಯಾ ಖಾತೆ ಎಕ್ಸ್ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಕಾಟನ್ ಕ್ಯಾಂಡಿ ತಯಾರಿಕೆಯಲ್ಲಿ ವಿಷಕಾರಿ ರಾಸಾಯನಿಕವನ್ನು ಬಳಸಿರುವುದನ್ನು ಸರ್ಕಾರಿ ಅಧಿಕಾರಿಗಳು ಪತ್ತೆ ಹಚ್ಚಿದ ನಂತರ ಅದರ ಮಾರಾಟವನ್ನು ನಿಷೇಧಿಸಲಾಗಿದೆ.
ಮಕ್ಕಳಿಗೆ ಕಾಟನ್ ಕ್ಯಾಂಡಿ ಖರೀದಿಸುವುದನ್ನು ತಡೆಯಲು ಸರ್ಕಾರ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಏಕೆಂದರೆ ಅದರಲ್ಲಿ ಇರುವ ರಾಸಾಯನಿಕ ಆಂಶಗಳು ಮಕ್ಕಳ ಆರೋಗ್ಯವನ್ನು ಹಾನಿ ಮಾಡುತ್ತದೆ. ವಿಷಕಾರಿ ವಸ್ತುವಾದ ರೋಡಮೈನ್-ಬಿ ಎಂಬ ಅಂಶವಿರುವುದನ್ನು ಆಹಾರ ಸುರಕ್ಷತಾ ಅಧಿಕಾರಿಗಳು ಪತ್ತೆ ಮಾಡಿದ್ದಾರೆ.
ಕಾಟನ್ ಕ್ಯಾಂಡಿ ಮಾರಾಟ ಮಾಡುವ ಅಂಗಡಿಗಳನ್ನು ಪರಿಶೀಲಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಒಂದು ವೇಳೆ ವಿಷಕಾರಿ ಅಂಶ ಕಂಡುಬಂದಲ್ಲಿ ಅಂಗಡಿಗಳನ್ನು ವಶಕ್ಕೆ ಪಡೆಯುವಂತೆ ತಿಳಿಸಿದ್ದಾರೆ. ಇದೇ ವೇಳೆ ಬಣ್ಣ ಮಿಶ್ರಿತ ಯಾವುದೇ ಅಹಾರ ಪದಾರ್ಥಗಳನ್ನು ಮಕ್ಕಳಿಗೆ ನೀಡಬಾರದು ಎಂದು ಎಚ್ಚರಿಕೆ ನೀಡಿದ್ದಾರೆ.
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಹೆಲ್ತ್ ಪ್ರಕಾರ, ರೋಡಮೈನ್- ಬಿ ರಾಸಾಯನಿಕ ಅಂಶವಾಗಿದ್ದು, ಅದು ಬಣ್ಣವಾಗಿ ಕಾರ್ಯನಿರ್ವಹಿಸುತ್ತದೆ. ಇದನ್ನು ಆಹಾರದೊಂದಿಗೆ ಬೆರೆಸಿದಾಗ ಸಾಮಾನ್ಯವಾಗಿಯೇ ದೇಹವನ್ನು ಪ್ರವೇಶಿಸುತ್ತದೆ. ನಂತರ ಜೀವಕೋಶ ಮತ್ತು ಅಂಗಾಂಶಗಳ ಮೇಲೆ ಆಕ್ಸಿಡೇಟಿವ್ ಒತ್ತಡವನ್ನು ಉಂಟುಮಾಡುತ್ತದೆ ಎಂದು ತಿಳಿಸಿದೆ. ಇದನ್ನು ಆಹಾರದಲ್ಲಿ ದೀರ್ಘಕಾಲದವರೆಗೆ ಬಳಸುವುದರಿಂದ ಕ್ಯಾನ್ಸರ್ನಂತಹ ರೋಗಗಳಿಗೆ ತುತ್ತಾಗಬಹುದು.