ಮಾರ್ಚ್‌ 03 ರಿಂದ 06 ರವರೆಗೆ ಪಲ್ಸ್ ಪೋಲಿಯೋ ಅಭಿಯಾನ

ಮಾರ್ಚ್‌ 03 ರಿಂದ 06 ರವರೆಗೆ ಪಲ್ಸ್ ಪೋಲಿಯೋ ಅಭಿಯಾನ

ಪೋಲಿಯೋ ಒಂದು ಭಯಾನಕ ರೋಗ. ಈ ರೋಗ ಮಕ್ಕಳಲ್ಲಿ ಶಾಶ್ವತ ಅಂಗವಿಕಲತೆಯನ್ನು ಉಂಟುಮಾಡುತ್ತದೆ. 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಲ್ಲಿ ಈ ರೋಗವು ಹೆಚ್ಚಾಗಿ ಕಂಡುಬರುತ್ತದೆ. ಈ ಹಿನ್ನೆಲೆಯಲ್ಲಿ ಮಕ್ಕಳಿಗೆ ಪಲ್ಸ್‌ ಪೋಲಿಯೋ ಲಸಿಕೆ ಹಾಕಲಾಗುತ್ತದೆ. ಈ ವರ್ಷದ ಪಲ್ಸ್‌ ಪೋಲಿಯೋ ಯಾವಾಗ ಎಂಬ ಗೊಂದಲಕ್ಕೆ ಒಳಗಾಗಿದ್ದ ಜನಕ್ಕೆ ಸರ್ಕಾರ ಮಹತ್ವದ ಸುದ್ದಿಯೊಂದನ್ನು ನೀಡಿದೆ. ಮುಂದಿನ ತಿಂಗಳು ಪಲ್ಸ್‌ ಪೋಲಿಯೋ ಅಭಿಯಾನ ಆರಂಭವಾಗಲಿದೆ ಎಂದು ಮಾಹಿತಿ ನೀಡಿದೆ.

ಇದನ್ನೂ ಓದಿ: ತಮಿಳುನಾಡು ವಿಧಾನಸಭೆಯಲ್ಲಿ ಭಾರಿ ಹೈಡ್ರಾಮ! – ರಾಷ್ಟ್ರಗೀತೆಗೆ ಡಿಎಂಕೆ ಸರ್ಕಾರ ವಿರೋಧ, ಭಾಷಣ ತಿರಸ್ಕರಿಸಿ ಹೊರ ನಡೆದ ರಾಜ್ಯಪಾಲ

5 ವರ್ಷದ ಒಳಗಿನ ಮಕ್ಕಳಿಗೆ ಹಾಕುವ ಪಲ್ಸ್‌ ಪೋಲಿಯೋ ಅಭಿಯಾನ ಯಾವಾಗ ಎಂದು ಜನರು ಗೊಂದಲಕ್ಕೆ ಒಳಗಾಗಿದ್ದರು. ಇದೀಗ ಈ ಗೊಂದಲವನ್ನು ಸರ್ಕಾರ ದೂರ ಮಾಡಿದೆ. ಮಾರ್ಚ್‌ 03 ರಿಂದ 06 ರವರೆಗೆ ಪಲ್ಸ್ ಪೋಲಿಯೋ ಅಭಿಯಾನ ನಡೆಯಲಿದೆ ಎಂದು ಸರ್ಕಾರ ಮಾಹಿತಿ ನೀಡಿದೆ.

ಈ ಅಭಿಯಾನ ಮೂರು  ದಿನಗಳು ನಡೆಯಲ್ಲಿದ್ದು, ಪಲ್ಸ್ ಪೋಲಿಯೋ ಕಾರ್ಯಕ್ರಮದ ಬಗ್ಗೆ ಜಾಗೃತಿ ಅಭಿಯಾನವನ್ನು ಬಿಬಿಎಂಪಿ ಕೈಗೊಳುತ್ತಿದೆ. ಪ್ರಾಥಮಿಕ ಚಿಕಿತ್ಸಾ ಕೇಂದ್ರ, ನಗರ ಚಿಕಿತ್ಸಾ ಕೇಂದ್ರ, ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಲಸಿಕೆ ಹಾಕಲಾಗುತ್ತದೆ.

Shwetha M