ಮಾರ್ಚ್ 03 ರಿಂದ 06 ರವರೆಗೆ ಪಲ್ಸ್ ಪೋಲಿಯೋ ಅಭಿಯಾನ – ಎಲ್ಲೆಲ್ಲಿ ಲಸಿಕೆ ಹಾಕಲಾಗುತ್ತದೆ?
ಪೋಲಿಯೋ ಒಂದು ಭಯಾನಕ ರೋಗ. ಈ ರೋಗ ಮಕ್ಕಳಲ್ಲಿ ಶಾಶ್ವತ ಅಂಗವಿಕಲತೆಯನ್ನು ಉಂಟುಮಾಡುತ್ತದೆ. 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಲ್ಲಿ ಈ ರೋಗವು ಹೆಚ್ಚಾಗಿ ಕಂಡುಬರುತ್ತದೆ. ಈ ಹಿನ್ನೆಲೆಯಲ್ಲಿ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕಲಾಗುತ್ತದೆ. ಈ ವರ್ಷದ ಪಲ್ಸ್ ಪೊಲಿಯೋ ಕಾರ್ಯಕ್ರಮ ಬಿಬಿಎಂಪಿಯಿಂದ ಮಾ.3ರಿಂದ 6ರ ವರೆಗೆ ಹಮ್ಮಿಕೊಳ್ಳಲಾಗಿದೆ. ಐದು ವರ್ಷದೊಳಗಿನ 11.12 ಲಕ್ಷ ಮಕ್ಕಳಿಗೆ ಲಸಿಕೆ ನೀಡಲು ಯೋಜಿಸಿದೆ ಎಂದು ಬಿಬಿಎಂಪಿ ತಿಳಿಸಿದೆ.
ಇದನ್ನೂ ಓದಿ: ಹೆತ್ತವರ ಜೊತೆ ರಾಂಚಿ ಟೆಸ್ಟ್ ಹೀರೋ ಧ್ರುವ್ ಜುರೆಲ್ – ತಂದೆ ತಾಯಿಗೆ ಪ್ರಶಸ್ತಿ ಅರ್ಪಣೆ
ಬೆಂಗಳೂರಿನ 145 ಪ್ರಾಥಮಿಕ ಆರೋಗ್ಯ ಕೇಂದ್ರ, 228 ನಮ್ಮ ಕ್ಲಿನಿಕ್ಗಳಲ್ಲಿ, ಔಷಧಾಲಯಗಳು, ಅಂಗನವಾಡಿ ಕೇಂದ್ರಗಳು, ಶಾಲೆಗಳಲ್ಲಿ ಹಾಗೂ ಸ್ಥಿರ ಮತ್ತು ಸಂಚಾರಿ ತಂಡಗಳನ್ನು ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಸ್ವಯಂ ಸೇವಾ ಸಂಸ್ಥೆಯ ಆಸ್ಪತ್ರೆಗಳು, ಮಾಲ್ಗಳು, ಖಾಸಗಿ ನರ್ಸಿಂಗ್ ಹೋಮ್ ಗಳು, ವೈದ್ಯಕೀಯ ಮಹಾವಿದ್ಯಾಲಯ, ಪ್ರಮುಖ ಉದ್ಯಾನವನಗಳು, ಮೆಟ್ರೋ ನಿಲ್ದಾಣ ಇನ್ನು ಮುಂತಾದ ಪ್ರಮುಖ ಜನನಿಬಿಡ ಪ್ರದೇಶಗಳಲ್ಲಿ ಬೂತ್ ರಚಿಸಲಾಗಿದೆ. ಪೋಷಕರು ತಮ್ಮ ಮಕ್ಕಳನ್ನು ಕೆರತಂದು ಲಸಿಕೆ ಹಾಕಿಸಿಕೊಳ್ಳಬೇಕು ಅಂತಾ ಬಿಬಿಎಂಪಿ ಸೂಚಿಸಿದೆ.
ನಗರದ 5 ವರ್ಷದೊಳಗಿನ 11.12 ಲಕ್ಷ ಮಕ್ಕಳಿಗೆ ಲಸಿಕೆ ನೀಡಲು ಯೋಜಿಸಲಾಗಿದೆ. ಅದಕ್ಕಾಗಿ 3,403 ಬೂತ್, 545 ಸ್ಥಿರ ಹಾಗೂ 380 ಸಂಚಾರಿ ತಂಡ ರಚಿಸಲಾಗಿದೆ. 15,354 ಲಸಿಕಾ ಕಾರ್ಯಕರ್ತರು ಹಾಗೂ 758 ಮೇಲ್ವಿಚಾರಕರನ್ನು ನೇಮಕ ಮಾಡಲಾಗಿದೆ ಎಂದು ಬಿಬಿಎಂಪಿ ಪ್ರಕಟಣೆಯಲ್ಲಿ ತಿಳಿಸಿದೆ.