ಮೃತ ರೈತ ಶುಭಕರನ್‌ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ಘೋಷಿಸಿದ ಪಂಜಾಬ್‌ ಸಿಎಂ – ಸಹೋದರನಿಗೆ ಸರ್ಕಾರಿ ಉದ್ಯೋಗ

ಮೃತ ರೈತ ಶುಭಕರನ್‌ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ಘೋಷಿಸಿದ ಪಂಜಾಬ್‌ ಸಿಎಂ – ಸಹೋದರನಿಗೆ ಸರ್ಕಾರಿ ಉದ್ಯೋಗ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಅನ್ನದಾತರು ದೆಹಲಿ ಚಲೋ ನಡೆಸುತ್ತಿದ್ದಾರೆ. ದಿನದಿಂದ ದಿನಕ್ಕೆ ಈ ಚಳವಳಿ ತೀವ್ರಗೊಳ್ಳುತ್ತಿದೆ. ಹಿಂಸಾಚಾರಕ್ಕೆ ತಿರುಗಿದೆ. ಬುಧವಾರ ಪೊಲೀಸರು ಹಾಗೂ ರೈತ ನಡುವೆ ನಡೆದ ಸಂಘರ್ಷದಲ್ಲಿ ರೈತ ಶುಭಕರನ್ ಸಿಂಗ್ ಸಾವನ್ನಪ್ಪಿದ್ದು, ಇದೀಗ ಪಂಜಾಬ್‌ ಸರ್ಕಾರ ರೈತನ ಕುಟುಂಬಕ್ಕೆ ಆರ್ಥಿಕ ನೆರವು ನೀಡಿದೆ.

ಇದನ್ನೂ ಓದಿ: ಜೆಡಿಎಸ್ ಗೆ ಮೂರೇ ಕ್ಷೇತ್ರ! – ಮಂಡ್ಯ, ಹಾಸನ, ಕೋಲಾರ ಟಿಕೆಟ್ ಜೆಡಿಎಸ್ ಗೆ ನೀಡುವುದು ಬಹುತೇಕ ಫಿಕ್ಸ್

ಕನಿಷ್ಠ ಬೆಂಬಲ ಬೆಲೆಗಾಗಿ ಕೇಂದ್ರದ ಪ್ರಸ್ತಾವನೆಗಳನ್ನು ಒಪ್ಪದ ಪ್ರತಿಭಟನಾಕಾರರು ತಮ್ಮ ‘ದೆಹಲಿ ಚಲೋ’ ನಡೆಸುತ್ತಿದ್ದಾರೆ. ಫೆಬ್ರವರಿ 13 ರಂದು ಶುಭಕರನ್ ಅವರು ಖಾನೌರಿ ಗಡಿಯಲ್ಲಿ ಪ್ರತಿಭಟನಾ ನಿರತ ರೈತರೊಂದಿಗೆ ಭಾಗಿಯಾಗಿದ್ದರು. ಈ ವೇಳೆ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಪೊಲೀಸರು ಹಾಗೂ ರೈತರ ಮಧ್ಯೆ ನಡೆದ ಸಂಘರ್ಷದಲ್ಲಿ ಸಾವನ್ನಪ್ಪಿದ್ದರು. 12 ಕ್ಕೂ ಅಧಿಕ ಮಂದಿ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಇದೀಗ ರೈತರ ಪ್ರತಿಭಟನೆಯ ವೇಳೆ ಮೃತಪಟ್ಟ ಶುಭಕರನ್ ಸಿಂಗ್  ಕುಟುಂಬಕ್ಕೆ 1 ಕೋಟಿ ಆರ್ಥಿಕ ನೆರವು ಮತ್ತು ಕಿರಿಯ ಸಹೋದರಿಗೆ ಸರ್ಕಾರಿ ಉದ್ಯೋಗ ನೀಡುವುದಾಗಿ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಶುಕ್ರವಾರ ಘೋಷಿಸಿದ್ದಾರೆ.

ಈ ಸಂಬಂಧ ಮುಖ್ಯಮಂತ್ರಿಗಳು ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಜೊತೆಗೆ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ಕೂಡ ನೀಡಿದ್ದಾರೆ.

Shwetha M