ಮುಂಬೈ ವಿರುದ್ಧ ಪಂಜಾಬ್ ಕಿಂಗ್ಸ್‌ಗೆ ಜಯ – 11 ವರ್ಷದ ಬಳಿಕ ಫೈನಲ್‌ಗೆ ಎಂಟ್ರಿ

ಮುಂಬೈ ವಿರುದ್ಧ ಪಂಜಾಬ್ ಕಿಂಗ್ಸ್‌ಗೆ  ಜಯ – 11 ವರ್ಷದ ಬಳಿಕ ಫೈನಲ್‌ಗೆ ಎಂಟ್ರಿ

ಎರಡನೇ ಕ್ವಾಲಿಫೈಯರ್‌ನಲ್ಲಿ  ಪಂಜಾಬ್‌ ಕಿಂಗ್ಸ್ ಮುಂಬೈಯನ್ನ ಮಣಿಸಿತು. ಈ ಮೂಲಕ ಪಂಜಾಬ್ ಕಿಂಗ್ಸ್‌ ಫೈನಲ್‌ಗೆ ಪ್ರವೇಶ ಮಾಡಿದೆ.  ಜೂನ್‌ 3 ರಂದು ನಡೆಯಲಿರುವ ಫೈನಲ್‌ನಲ್ಲಿ ಪಂಜಾಬ್ ಕಿಂಗ್ಸ್‌, ರಾಯಲ್‌ ಚಾಲೆಂಜರ್ಸ್ ತಂಡವನ್ನು ಎದುರಿಸಲಿದೆ. ಈ ಮೂಲಕ ಪಂಜಾಬ್‌ ಕಿಂಗ್ಸ್‌ ಐಪಿಎಲ್‌ನಲ್ಲಿ ಅತಿ ಹೆಚ್ಚು ಬಾರಿ 200 ರನ್‌ಗೂ ಹೆಚ್ಚು ರನ್‌ ಚೇಸ್‌ ಮಾಡಿದ ದಾಖಲೆಯನ್ನು ಬರೆದಿದೆ. ಇನ್ನು ಮುಂಬೈ ಇಂಡಿಯನ್ಸ್‌ ತಂಡ 18 ಆವೃತ್ತಿಗಳ ಐಪಿಎಲ್‌ನಲ್ಲಿ ಇದೇ ಮೊದಲ ಬಾರಿಗೆ 200 ಪ್ಲಸ್‌ ರನ್‌ ಡಿಫೆಂಡ್ ಮಾಡಿಕೊಳ್ಳುವಲ್ಲಿ ವಿಫಲವಾಗಿದೆ

ಟಾಸ್‌ ಸೋತರೂ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್‌ 20 ಓವರ್‌ಗಳಲ್ಲಿ 6 ವಿಕೆಟ್‌ಗೆ 203 ರನ್‌ ಸಿಡಿಸಿತು. ಇದಕ್ಕೆ ಉತ್ತರವಾಗಿ ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್‌ 19 ಓವರ್‌ಗಳಲ್ಲಿ 5 ವಿಕೆಟ್‌ಗೆ 207 ರನ್‌ ಬಾರಿಸಿ ಜಯ ಸಾಧಿಸಿತು. ಈ ಮೂಲಕ ಪಂಜಾಬ್ ಕಿಂಗ್ಸ್‌ 11 ವರ್ಷದ ಬಳಿಕ ಐಪಿಎಲ್‌ ಫೈನಲ್‌ಗೆ ಅರ್ಹತೆ ಪಡೆದಿದೆ.

204 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಪಂಜಾಬ್ ತಂಡದ ಆರಂಭ ಕಳಪೆಯಾಗಿತ್ತು. ಪ್ರಭಸಿಮ್ರನ್ ಸಿಂಗ್ (6), ಪ್ರಿಯಾಂಶ್‌ ಆರ್ಯ (20) ದೊಡ್ಡ ಇನಿಂಗ್ಸ್ ಕಟ್ಟುವಲ್ಲಿ ವಿಫಲರಾದರು. ಮಧ್ಯಮ ಕ್ರಮಾಂಕದಲ್ಲಿ ಭರವಸೆಯ ಆಟಗಾರ ಜೋಸ್‌ ಇಂಗ್ಲೀಸ್‌ 5 ಬೌಂಡರಿ, 2 ಸಿಕ್ಸರ್‌ ಸಹಾಯದಿಂದ 38 ರನ್‌ ಬಾರಿಸಿ ಔಟ್ ಆದರು. ನಾಲ್ಕನೇ ವಿಕೆಟ್‌ಗೆ ಶ್ರೇಯಸ್‌ ಅಯ್ಯರ್‌ ಅವರನ್ನು ಸೇರಿಕೊಂಡ ನೇಹಲ್ ವಧೇರಾ (48) ತಂಡಕ್ಕೆ ಭರ್ಜರಿ ಜೊತೆಯಾಟದ ಕಾಣಿಕೆ ನೀಡಿತು. ಈ ಜೋಡಿಯನ್ನು ಕಟ್ಟಿಹಾಕುವಲ್ಲಿ ವಿಫಲವಾಯಿತು. ಈ ಜೋಡಿ ನಾಲ್ಕನೇ ವಿಕೆಟ್‌ಗೆ ಅರ್ಧಶತಕದ ಜೊತೆಯಾಟವನ್ನು ನೀಡಿತು.

 

Kishor KV