ಪುರಿ ಜಗನ್ನಾಥ ರಥಯಾತ್ರೆಯಲ್ಲಿ ನೂಕುನುಗ್ಗಲಿನಿಂದಾಗಿ ಭಕ್ತ ಉಸಿರುಗಟ್ಟಿ ಸಾವು – 400ಕ್ಕೂ ಹೆಚ್ಚು ಮಂದಿಗೆ ಗಾಯ!

ಪುರಿ ಜಗನ್ನಾಥ ರಥಯಾತ್ರೆಯಲ್ಲಿ ನೂಕುನುಗ್ಗಲಿನಿಂದಾಗಿ ಭಕ್ತ ಉಸಿರುಗಟ್ಟಿ ಸಾವು – 400ಕ್ಕೂ ಹೆಚ್ಚು ಮಂದಿಗೆ ಗಾಯ!

ಒಡಿಶಾದ ಐತಿಹಾಸಿಕ ಪುರಿ ಜಗನ್ನಾಥ ರಥಯಾತ್ರೆ  ಭೀಕರ ಅವಘಡ ಸಂಭವಿಸಿದೆ.  ರಥ ಎಳೆಯುವ ವೇಳೆ ನೂಕುನುಗ್ಗಲು ಉಂಟಾಗಿದ್ದು, ಉಸಿರುಗಟ್ಟಿ ಓರ್ವ ಭಕ್ತ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಜಿಂಬಾಬ್ವೆ ವಿರುದ್ಧ ಸೇಡು ತೀರಿಸಿಕೊಂಡ ಗಿಲ್ – 134 ರನ್‌ಗಳಿಗೆ ಜಿಂಬಾಬ್ವೆ ಆಲೌಟ್‌

ರಥಯಾತ್ರೆ ವೇಳೆ ಈ ಅವಘಡ ಸಂಭವಿಸಿದೆ. ಭಕ್ತರು ರಥ ಎಳೆಯುವಾಗ ನೂಕುನುಗ್ಗಲು ಉಂಟಾಗಿದೆ.  ಜನರ ನಡುವೆ ಸಿಲುಕಿ ಭಕ್ತನೋರ್ವ ಉಸಿರಾಡಲು ಆಗದೇ  ಮೃತಪಟ್ಟಿದ್ದಾರೆ. ನೂಕುನುಗ್ಗಲು ಬಳಿಕ ಕಾಲ್ತುಳಿತವೂ  ಉಂಟಾಗಿದ್ದು, 400ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ರಥ ಎಳೆಯುವಾಗ ನೂಕುನುಗ್ಗಲು ಉಂಟಾಗಿದೆ. ಇದರಿಂದಾಗಿ ಕಾಲ್ತುಳಿತ ಉಂಟಾಗಿದೆ, ಭಕ್ತನೊಬ್ಬ ಸಾವನ್ನಪ್ಪಿದ್ದಾನೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಾಲ್ತುಳಿತದ ಬಳಿಕ ಸುಮಾರು 300 ಜನರನ್ನ ಪುರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸುಮಾರು 50 ಮಂದಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಡಿಶ್ಚಾರ್ಜ್‌ ಮಾಡಲಾಗಿದೆ. ಯಾರಿಗೂ ಗಂಭೀರ ಗಾಯಗಳಾಗಿಲ್ಲ. ಕಾಲ್ತುಳಿತದ ಬಳಿಕವೂ ರಥಯಾತ್ರೆಯು ಸುಗಮವಾಗಿ ಸಾಗಿದೆ ಎಂದು ಒಡಿಶಾ ಆರೋಗ್ಯ ಕಾರ್ಯದರ್ಶಿ ಮಾಹಿತಿ ನೀಡಿದ್ದಾರೆ.

Shwetha M