ಬಹುನಿರೀಕ್ಷಿತ ʼಪುಷ್ಪ 2ʼ ಸಿನಿಮಾ ರಿಲೀಸ್‌ಗೆ ಡೇಟ್‌ ಫಿಕ್ಸ್‌! –‌ ದಿನಾಂಕ ಘೋಷಿಸಿದ ಚಿತ್ರತಂಡ

ಬಹುನಿರೀಕ್ಷಿತ ʼಪುಷ್ಪ 2ʼ ಸಿನಿಮಾ ರಿಲೀಸ್‌ಗೆ ಡೇಟ್‌ ಫಿಕ್ಸ್‌! –‌ ದಿನಾಂಕ ಘೋಷಿಸಿದ ಚಿತ್ರತಂಡ

ನಟ ಅಲ್ಲು ಅರ್ಜುನ್‌ ನಟನೆಯ ಬಹುನಿರೀಕ್ಷಿತ ಪ್ಯಾನ್‌ ಇಂಡಿಯಾ ಸಿನಿಮಾಗಳಲ್ಲೊಂದಾದ ʼಪುಷ್ಪ 2ʼ ಸಿನಿಮಾ ರಿಲೀಸ್‌ ಡೇಟ್‌ ಅನೌನ್ಸ್‌ ಆಗಿದೆ.

ಅಲ್ಲು ಅರ್ಜುನ್‌ ನಟನೆಯ ಪ್ಯಾನ್‌ ಇಂಡಿಯಾ ಸಿನಿಮಾ ʼಪುಷ್ಪʼ ಬಾಕ್ಸ್‌ ಆಫೀಸ್‌ನಲ್ಲಿ ದೊಡ್ಡ ಕಮಾಯಿ ಮಾಡಿತ್ತು. ಈ ಸಿನಿಮಾಗೆ ರಾಷ್ಟ್ರ ಪ್ರಶಸ್ತಿ ಕೂಡ ಲಭಿಸಿತ್ತು. ʼಪುಷ್ಪʼ ಸಿನಿಮಾಗೆ ದೊಡ್ಡ ಯಶಸ್ಸು ಲಭಿಸುತ್ತಿದ್ದಂತೆ ಫ್ಯಾನ್ಸ್‌ ‘ಪುಷ್ಪ 2’ ರಿಲೀಸ್‌ ಯಾವಾಗ ಅಂತಾ ಕುತೂಹಲದಿಂದ ಕಾಯುತ್ತಿದ್ದರು. ಇದೀಗ  ಕಾತುರದಿಂದ ಕಾಯುತ್ತಿದ್ದ ಫ್ಯಾನ್ಸ್​ಗೆ ಗುಡ್‌ ನ್ಯೂಸ್‌ ಸಿಕ್ಕಿದೆ. ‘ಪುಷ್ಪ 2’ ಸಿನಿಮಾ ಯಾವಾಗ ರಿಲೀಸ್​ ಆಗಲಿದೆ ಎಂಬ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ.. 2024ರ ಆಗಸ್ಟ್ 15ರಂದು ಈ ಸಿನಿಮಾ ಬಿಡುಗಡೆ ಆಗಲಿದೆ ಎಂದು ಚಿತ್ರತಂಡ ಅಧಿಕೃತ ಘೋಷಣೆ ಮಾಡಿದೆ.

ಇದನ್ನೂ ಓದಿ: ‘ಜೈಲರ್’ ಸಿನಿಮಾದಲ್ಲಿ ಕೆಲಸ ಮಾಡಿದವರಿಗೆ ‘ಚಿನ್ನ’ದ ಉಡುಗೊರೆ – 300 ಮಂದಿಗೆ ನಿರ್ಮಾಪಕ ಕಲಾನಿಧಿ ಮಾರನ್ ಗೋಲ್ಡ್ ಗಿಫ್ಟ್

ಹೊಸ ಪೋಸ್ಟರ್​ ಹಂಚಿಕೊಳ್ಳುವ ಮೂಲಕ ನಿರ್ಮಾಣ ಸಂಸ್ಥೆಯಾದ ‘ಮೈತ್ರಿ ಮೂವೀ ಮೇಕರ್ಸ್​’ ಸಿಹಿ ಸುದ್ದಿ ನೀಡಿದೆ. ಅಲ್ಲು ಅರ್ಜುನ್​ ಕೂಡ ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಸಿನಿಮಾಗೆ ಸುಕುಮಾರ್​ ನಿರ್ದೇಶನ ಮಾಡುತ್ತಿದ್ದಾರೆ. ನಾಯಕಿಯಾಗಿ ರಶ್ಮಿಕಾ ಮಂದಣ್ಣ ಅಭಿನಯಿಸುತ್ತಿದ್ದಾರೆ.

‘ದಿನಾಂಕವನ್ನು ಗುರುತು ಮಾಡಿಕೊಳ್ಳಿ. ವಿಶ್ವಾದ್ಯಂತ 2024ರ ಆಗಸ್ಟ್​ 15ರಂದು ‘ಪುಷ್ಪ 2’ ಸಿನಿಮಾ ರಿಲೀಸ್​ ಆಗಲಿದೆ. ಗಲ್ಲಾಪೆಟ್ಟಿಗೆಯನ್ನು ವಶಪಡಿಸಿಕೊಳ್ಳಲು ಪುಷ್ಪರಾಜ್​ ಮತ್ತೆ ಬರುತ್ತಿದ್ದಾನೆ’ ಎಂಬ ಕ್ಯಾಪ್ಷನ್​ ಜೊತೆಗೆ ಹೊಸ ಪೋಸ್ಟ್​ ಹಂಚಿಕೊಳ್ಳಲಾಗಿದೆ. ಆ ಮೂಲಕ ‘ಪುಷ್ಪ 2’ ಸಿನಿಮಾದ ರಿಲೀಸ್​ ದಿನಾಂಕವನ್ನು ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ಅದ್ದೂರಿ ಬಜೆಟ್​ನಲ್ಲಿ ಈ ಸಿನಿಮಾ ನಿರ್ಮಾಣ ಆಗುತ್ತಿದೆ. ಡಾಲಿ ಧನಂಜಯ್​, ಫಹಾದ್​ ಫಾಸಿಲ್​ ಮುಂತಾದ ಕಲಾವಿದರು ಕೂಡ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ.

2021ರ ಡಿಸೆಂಬರ್​ 17ರಂದು ‘ಪುಷ್ಪ’ ಸಿನಿಮಾ ತೆರೆಕಂಡು ಸೂಪರ್ ಹಿಟ್​ ಆಯಿತು. ಅದರ ಸೀಕ್ವೆಲ್​ ಆಗಿ ಮೂಡಿಬರುತ್ತಿರುವ ‘ಪುಷ್ಪ 2’ ಸಿನಿಮಾದ ಮೇಲೆ ದೊಡ್ಡ ಮಟ್ಟದ ನಿರೀಕ್ಷೆ ಇದೆ. ಆ ನಿರೀಕ್ಷೆಗೆ ತಕ್ಕಂತೆಯೇ ಸಿನಿಮಾ ಮೂಡಿಬರಬೇಕು ಎಂಬ ಕಾರಣದಿಂದ ಸುಕುಮಾರ್​ ಅವರು ಬಹಳ ಕಾಳಜಿ ವಹಿಸಿ ಶೂಟಿಂಗ್ ಮಾಡುತ್ತಿದ್ದಾರೆ. ಆದ್ದರಿಂದ ಈ ಸಿನಿಮಾದ ಕೆಲಸಗಳಿಗೆ ಸಮಯ ಹಿಡಿಯುತ್ತಿದೆ. ಈ ಮೊದಲೇ ಬಿಡುಗಡೆ ಆಗಿರುವ ಫಸ್ಟ್​ ಲುಕ್​ ಪೋಸ್ಟರ್​ ಮತ್ತು ಫಸ್ಟ್​ ಗ್ಲಿಂಪ್ಸ್​ ವಿಡಿಯೋ ಸಖತ್​ ಕ್ರೇಜ್​ ಸೃಷ್ಟಿ ಮಾಡಿದೆ.

suddiyaana