ಅರುಣ್ ಕುಮಾರ್ ಪುತ್ತಿಲ ಬೇಡಿಕೆಗೆ ಬಿಜೆಪಿ ನಾಯಕರಿಂದ ಅಸ್ತು – ಪುತ್ತಿಲ ಬಿಜೆಪಿಗೆ ಬರೋದು ಫಿಕ್ಸ್

ಅರುಣ್ ಕುಮಾರ್ ಪುತ್ತಿಲ ಬೇಡಿಕೆಗೆ ಬಿಜೆಪಿ ನಾಯಕರಿಂದ ಅಸ್ತು – ಪುತ್ತಿಲ ಬಿಜೆಪಿಗೆ ಬರೋದು ಫಿಕ್ಸ್

ವಿಧಾನಸಭಾ ಚುನಾವಣೆ ವೇಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಖತ್ ಸದ್ದು ಮಾಡಿದ್ದ ಅರುಣ್ ಕುಮಾರ್ ಪುತ್ತಿಲ ಹೆಸರು ಈಗ ಮತ್ತೊಮ್ಮೆ ಚರ್ಚೆಯಲ್ಲಿದೆ. ಬಿಜೆಪಿ ತೊರೆದಿದ್ದ ಪುತ್ತಿಲ ಇದೀಗ ಬಿಜೆಪಿಗೆ ಮರಳಲು ವೇದಿಕೆ ಸಿದ್ಧವಾಗಿದೆ. ಈಗಾಗಲೇ ಬಿಜೆಪಿಯ ಹಾಗೂ ಆರ್​ಎಸ್​ಎಸ್​ನ ಪ್ರಮುಖ ನಾಯಕರ ಜೊತೆ ಹಲವು ಸುತ್ತಿನ ಮಾತುಕತೆ ಯಶಸ್ವಿಯಾಗಿದೆ. ಪುತ್ತಿಲ ಬೇಡಿಕೆಗೆ ಬಿಜೆಪಿ ನಾಯಕರು ಒಪ್ಪಿಗೆ ಸೂಚಿಸಿದ್ದು ಬಿಜೆಪಿ ಜೊತೆಗೆ ಪುತ್ತಿಲ ಪರಿವಾರ ವಿಲೀನವಾಗಲಿದೆ. ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರಿನಲ್ಲಿ ಅರುಣ್ ಪುತ್ತಿಲ ಬಂಡಾಯದಿಂದಲೇ ಬಿಜೆಪಿ ಹೀನಾಯವಾಗಿ ಸೋಲು ಕಂಡಿತ್ತು. ಕಾಂಗ್ರೆಸ್ ಅಭ್ಯರ್ಥಿ ಗೆಲುವು ಕಂಡ್ರೆ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಪುತ್ತಿಲ ಎರಡನೇ ಸ್ಥಾನ ಪಡೆದುಕೊಂಡಿದ್ರು. ಅಲ್ಲದೆ ಲೋಕಸಭಾ ಚುನಾವಣೆಯಲ್ಲೂ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸೋ ಲೆಕ್ಕಾಚಾರದಲ್ಲಿದ್ರು. ಹಾಗೇನಾದ್ರೂ ಪುತ್ತಿಲ ಕಣಕ್ಕಿಳಿದಿದ್ದೇ ಆದಲ್ಲಿ ಬಿಜೆಪಿ ಹಾಗೂ ಹಿಂದೂ ಮತಗಳು ಇಬ್ಭಾಗವಾಗುವ ಆತಂಕ ಬಿಜೆಪಿಗೆ ಕಾಡಿತ್ತು. ಇದೇ ಕಾರಣಕ್ಕೆ ಪುತ್ತಿಲ ಹಾಗೂ ಅವ್ರ ಪರಿವಾರದ ಜೊತೆಗೆ ನಿರಂತರ ಮಾತುಕತೆ ನಡೆಸಿ ಕೊನೆಗೂ ಪಕ್ಷ ಸೇರ್ಪಡೆಗೆ ಮುಹೂರ್ತ ಇಟ್ಟಿದ್ದಾರೆ.

ಇದನ್ನೂ ಓದಿ:ಪುತ್ತಿಲ ಪರಿವಾರದಿಂದ ಬಿಜೆಪಿಗೆ 3 ದಿನ ಡೆಡ್ ಲೈನ್ – ಚುನಾವಣಾ ರಾಜಕೀಯಕ್ಕೆ ಪುತ್ತಿಲ ಪರಿವಾರ ಸಿದ್ಧ ಅಂತ ಎಚ್ಚರಿಕೆ

ದಕ್ಷಿಣ ಕನ್ನಡ ಜಿಲ್ಲೆಯ ಪ್ರಭಾವಿ ಹಿಂದೂಮುಖಂಡ ಅರುಣ್ ಕುಮಾರ್‌ ಪುತ್ತಿಲ ಹಾಗೂ ಬಿಜೆಪಿ ಜೊತೆಗಿನ ಸಂಧಾನ ಯಶಸ್ವಿಯಾಗಿದೆ. ಇನ್ನೆರಡು ದಿನಗಳಲ್ಲಿ ಬಿಜೆಪಿ ಸೇರ್ಪಡೆಗೆ ಮುಹೂರ್ತ ಫಿಕ್ಸ್ ಆಗಿದೆ ಎನ್ನಲಾಗಿದೆ.  ಪುತ್ತಿಲ ಜೊತೆ ಫೋನ್‌ ಮೂಲಕ ರಾಜ್ಯ ಬಿಜೆಪಿ ನಾಯಕರು ಮಾತುಕತೆ ನಡೆಸಿದ್ದು, ಈ ವೇಳೆ ಪುತ್ತಿಲ ಬೇಡಿಕೆಗೆ ಅಸ್ತು ಎಂದಿದ್ದಾರೆ ಎನ್ನಲಾಗಿದೆ. ಅರುಣ್ ಕುಮಾರ್ ಪುತ್ತಿಲ ಪರ ಆರ್ ಎಸ್ ಎಸ್ ಪ್ರಮುಖರು ನಿಂತಿದ್ದಾರೆ. ಹೀಗಾಗಿ ಪುತ್ತಿಲ ಅವರೊಂದಿಗೆ ಜೊತೆ ಗೌಪ್ಯ ಮಾತುಕತೆ ನಡೆಸಿದ ಬಿಜೆಪಿ ಪ್ರಮುಖರು ಸಂಧಾನ ಯಶಸ್ವಿಗೊಳಿಸಿದ್ದಾರೆ. ಕೆಲ ದಿನಗಳ ಹಿಂದೆ ಸಭೆ ನಡೆಸಿದ್ದ ಪುತ್ತಿಲ ಪರಿವಾರದ ಕಾರ್ಯಕರ್ತರು ಬಿಜೆಪಿ ಸೇರಲು ಸಿದ್ಧ ಆದರೆ ಯಾವುದೇ ಕಾರಣಕ್ಕೂ ಕ್ಷಮೆ ಕೇಳೋಕೆ ಸಾಧ್ಯವಿಲ್ಲ ಎಂದು ಹೇಳಿದ್ದರು. ಅರುಣ್ ಕುಮಾರ್ ಪುತ್ತಿಲ ಮಾತನಾಡಿ, ಪುತ್ತೂರು ಗ್ರಾಮಾಂತರ ಮತ್ತು ನಗರ ಮಂಡಲ ಒಟ್ಟು ಸೇರಿಸಿ ಅಧ್ಯಕ್ಷ ಸ್ಥಾನ ನೀಡಬೇಕೆಂಬುದು ಪುತ್ತಿಲ ಪರಿವಾರದ ಮುಖಂಡರ ಬೇಡಿಕೆ, ಈ ತೀರ್ಮಾನಕ್ಕೆ ನಾನು ಬದ್ಧ ಅಂತ ಹೇಳಿದ್ದರು.    ನನಗೆ ಅಧ್ಯಕ್ಷ ಸ್ಥಾನ ನೀಡದಿದ್ದರೂ ಪರವಾಗಿಲ್ಲ. ಆದರೆ ಬಿಜೆಪಿ ಪಕ್ಷಕ್ಕಾಗಿಯೇ ದುಡಿದಿರುವ ಇಬ್ಬರು ನಾಯರಿಗೆ ಮಂಡಲ ಸ್ಥಾನವನ್ನು ನೀಡಿ ಎಂದು ಅರುಣ್ ಕುಮಾರ್ ಪುತ್ತಿಲ ಬೇಡಿಕೆ ಮುಂದಿಟ್ಟಿದ್ದರು. ಇದಕ್ಕೂ ಕೂಡ ಬಿಜೆಪಿ ನಾಯಕರು ಒಪ್ಪಿಗೆ ನೀಡಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಟಿಕೆಟ್ ಸಿಗದೆ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಇದ್ರಿಂದ ಬಿಜೆಪಿ ಹೀನಾಯವಾಗಿ ಸೋಲು ಕಂಡಿತ್ತು. ಸುಮಾರು 63 ಸಾವಿರ ಮತಗಳನ್ನು ಪಡೆದುಕೊಂಡಿದ್ದ ಅರುಣ್ ಕುಮಾರ್ ಪುತ್ತಿಲ ಅವರು ಬಿಜೆಪಿಯನ್ನು ಮೂರನೇ ಸ್ಥಾನಕ್ಕೆ ತಳ್ಳಿದ್ದರು. ದಕ್ಷಿಣ ಕನ್ನಡದ ಬಿಜೆಪಿ ಭದ್ರಕೋಟೆ ಎಂದು ಖ್ಯಾತಿ ಪಡೆದಿದ್ದ ಕ್ಷೇತ್ರದಲ್ಲಿ ಬಿಜೆಪಿಗೆ ಮುಖಭಂಗ ಎದುರಾಗಿತ್ತು. ಈ ಹಿನ್ನೆಲೆಯಲ್ಲಿ ಅರುಣ್ ಕುಮಾರ್ ಅವರು ಕ್ಷಮೆ ಕೇಳಿ, ಯಾವುದೇ ಹುದ್ದೆ ಇಲ್ಲದೇ ಪಕ್ಷಕ್ಕೆ ಬರುವುದಾದರೆ ಸ್ವಾಗತ ಮಾಡ್ತೀವಿ ಅಂತ ಸ್ಥಳೀಯ ಬಿಜೆಪಿ ಮುಖಂಡರು ಹೇಳಿದ್ದರು. ಇದೀಗ ಮಾತುಕತೆ ಯಶಸ್ವಿಯಾಗಿದ್ದು ಪುತ್ತಿಲ ಬಿಜೆಪಿಗೆ ಬರೋದು ಫಿಕ್ಸ್ ಆಗಿದೆ.

Sulekha