ಬಾಲಿವುಡ್ ನಟನಿಗೆ ಜೋಡಿಯಾದ ನಟಿ ರಾಧಿಕಾ ಕುಮಾರಸ್ವಾಮಿ – ಭರ್ಜರಿಯಾಗಿಯೇ ಕಮ್‌ಬ್ಯಾಕ್ ಮಾಡಿದ ಬ್ಯೂಟಿಕ್ವೀನ್

ಬಾಲಿವುಡ್ ನಟನಿಗೆ ಜೋಡಿಯಾದ ನಟಿ ರಾಧಿಕಾ ಕುಮಾರಸ್ವಾಮಿ – ಭರ್ಜರಿಯಾಗಿಯೇ ಕಮ್‌ಬ್ಯಾಕ್ ಮಾಡಿದ ಬ್ಯೂಟಿಕ್ವೀನ್

ಸ್ಯಾಂಡಲ್‌ವುಡ್ ನಟಿ ರಾಧಿಕಾ ಕುಮಾರಸ್ವಾಮಿ ಮತ್ತೆ ಕಮ್‌ಬ್ಯಾಕ್ ಮಾಡುತ್ತಿದ್ದಾರೆ. ಸ್ವಲ್ಪ ಟೈಮ್ ಬ್ರೇಕ್ ತೆಗೆದುಕೊಂಡಿದ್ದ ರಾಧಿಕಾ ಕುಮಾರಸ್ವಾಮಿ ಈಗ ಮತ್ತೆ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಮತ್ತೊಂದು ಹೊಸ ಸಿನಿಮಾದಲ್ಲಿ ನಾಯಕಿಯಾಗಿ ನಟಿಸಲಿರುವ ರಾಧಿಕಾ ಕುಮಾರಸ್ವಾಮಿಯ  ಸಿನಿಮಾ ಅದ್ದೂರಿ ಮೂಹೂರ್ತ ಕಂಡಿದೆ. ರಾಧಿಕಾ ಈ ಬಾರಿ ಬಾಲಿವುಡ್ ನಟನ ಜೊತೆ ನಟಿಸುತ್ತಿರುವುದು ಇನ್ನೊಂದು ವಿಶೇಷ.

ಇದನ್ನೂ ಓದಿ:  ‘ಆದಿಪುರುಷ್’ ಚಿತ್ರಕ್ಕೆ ಕಾನೂನು ಸಂಕಷ್ಟ – ಚಿತ್ರ ಬಿಡುಗಡೆಯಾಗುವ ಮುನ್ನವೇ ದೂರು ದಾಖಲು!

ರಾಧಿಕಾ ಕುಮಾರಸ್ವಾಮಿ ನಟಿಸುತ್ತಿರುವ ಚಿತ್ರಕ್ಕೆ ಅಜಾಗ್ರತ ಎಂದು ಟೈಟಲ್ ಇಡಲಾಗಿದೆ. ಅಜಾಗ್ರತ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಹೈದರಾಬಾದ್ ನ ರಾಮನಾಯ್ಡು ಸ್ಟುಡಿಯೋದಲ್ಲಿ ನೆರವೇರಿತು.  ರಾಧಿಕಾ ಕುಮಾರಸ್ವಾಮಿ ಅವರು ನಾಯಕಿಯಾಗಿ ನಟಿಸುತ್ತಿರುವ  ಈ ಚಿತ್ರಕ್ಕೆ ತೆಲುಗು ಚಿತ್ರರಂಗದ ಖ್ಯಾತ ನಿರ್ಮಾಪಕ ಎ.ಎಂ.ರತ್ನಂ ಚಿತ್ರದ ಪ್ರಥಮ ಸನ್ನಿವೇಶಕ್ಕೆ ಆರಂಭ ಫಲಕ ತೋರಿಸಿ ಶುಭಕೋರಿದರು. ಹೆಸರಾಂತ ವಿತರಕ ಟ್ಯಾಗೋರ್ ಮಧು ಕ್ಯಾಮೆರಾ ಚಾಲನೆ ಮಾಡಿದರು. ಚಿತ್ರರಂಗದ ವಿವಿಧ ಗಣ್ಯರು ಮುಹೂರ್ತ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು. ಅಂದಹಾಗೆ ರಾಧಿಕಾ ಜೊತೆ ನಾಯಕನಾಗಿ ಬಾಲಿವುಡ್ ನಟ ಶ್ರೇಯಸ್ ತಲ್ಪಾಡೆ ನಟಿಸುತ್ತಿದ್ದಾರೆ. ಮೊದಲ ಬಾರಿಗೆ ಇಬ್ಬರೂ ಜೊತೆಯಾಗಿ ಸಿನಿಮಾ ಮಾಡುತ್ತಿದ್ದು ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಾಗಿದೆ. ರಾಧಿಕಾ ಕುಮಾರಸ್ವಾಮಿ ಅವರು ಸಖತ್ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ. ಇನ್ನು ಉಳಿದಂತೆ ಈ ಸಿನಿಮಾದಲ್ಲಿ ರಾವ್ ರಮೇಶ್, ಸುನೀಲ್, ಆದಿತ್ಯ ಮೆನನ್, ರಾಘವೇಂದ್ರ ಶ್ರವಣ್, ದೇವರಾಜ್, ಜಯಪ್ರಕಾಶ್, ವಿನಯಾಪ್ರಸಾದ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಅಜಾಗ್ರತ ಸಿನಿಮಾ ತೆಲುಗು, ಕನ್ನಡ ಸೇರಿದಂತೆ ಏಳು ಭಾಷೆಗಳಲ್ಲಿ ನಿರ್ಮಾಣವಾಗುತ್ತಿದೆ.

suddiyaana