ಜಲಂಧರ್ ನಿಂದ ಹೋಶಿಯಾರ್‌ಪುರದತ್ತ ಸಾಗಿದ ಭಾರತ್ ಜೋಡೋ ಯಾತ್ರೆ

ಜಲಂಧರ್ ನಿಂದ ಹೋಶಿಯಾರ್‌ಪುರದತ್ತ ಸಾಗಿದ ಭಾರತ್ ಜೋಡೋ ಯಾತ್ರೆ

ಪಂಜಾಬ್: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಜಲಂಧರ್‌ನಿಂದ ಸೋಮವಾರ ಬೆಳಗ್ಗೆ ಆರಂಭವಾಗಿದೆ. ಇಂದು ಸಂಜೆ ವೇಳೆಗೆ ಯಾತ್ರೆ ಆದಂಪುರದ ಮೂಲಕ ಸಾಗಿ, ಹೋಶಿಯಾರ್‌ಪುರವನ್ನು ತಲುಪಲಿದೆ.

ಇದನ್ನೂ ಓದಿ: ಇದೇ ಮೊದಲ ಬಾರಿಗೆ ವಿದ್ಯಾರ್ಥಿನಿಯರಿಗೆ ಋತುಚಕ್ರ ರಜೆ!

ಜಲಂಧರ್ ಲೋಕಸಭೆಯ ಹಾಲಿ ಸಂಸದ ಸಂತೋಖ್ ಸಿಂಗ್ ಚೌಧರಿ ಶನಿವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದರು. ಬಳಿಕ ಜೋಡೋ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿತ್ತು. ಭಾನುವಾರ ಜಲಂಧರ್‌ನ ಖಾಲ್ಸಾ ಕಾಲೇಜು ಮೈದಾನದಿಂದ ಯಾತ್ರೆ ಪುನರಾರಂಭಗೊಂಡಿದೆ. ಈ ವೇಳೆ  ಹತ್ಯೆಗೀಡಾದ ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರ ತಂದೆ ಪಂಜಾಬ್ ನಲ್ಲಿ ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆಯಲ್ಲಿ ಹೆಜ್ಜೆ ಹಾಕಿದ್ದಾರೆ.

ಸೆಪ್ಟೆಂಬರ್ 7 ರಂದು ತಮಿಳುನಾಡಿನ ಕನ್ಯಾಕುಮಾರಿಯಿಂದ ಆರಂಭವಾದ ಭಾರತ್ ಜೋಡೋ ಯಾಥ್ರೆ ಜನವರಿ 30 ರೊಳಗೆ ಶ್ರೀನಗರದಲ್ಲಿ ಮುಕ್ತಾಯಗೊಳ್ಳಲಿದೆ. ಶ್ರೀನಗರದಲ್ಲಿ ವಿಶೇಷ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಅವರು ರಾಷ್ಟ್ರಧ್ವಜಾರೋಹಣ ಮಾಡುವ ನಿರೀಕ್ಷೆಯಿದೆ ಇದಕ್ಕಾಗಿ ಕಾಂಗ್ರೆಸ್ 21 ವಿರೋಧ ಪಕ್ಷಗಳ ನಾಯಕರನ್ನು ಕಾಂಗ್ರೆಸ್ ಆಹ್ವಾನಿಸಿದೆ.

suddiyaana