ಪ್ರಧಾನಿಯಾಗಿ ರಾಹುಲ್ ಗಾಂಧಿ, ಗೇಮ್ ಚೇಂಜರ್ ಆಗುತ್ತಾರೆ ಮಮತಾ ಬ್ಯಾನರ್ಜಿ – ಏನಿದು ಶತ್ರುಘ್ನ ಲೆಕ್ಕಾಚಾರ?

ಪ್ರಧಾನಿಯಾಗಿ ರಾಹುಲ್ ಗಾಂಧಿ, ಗೇಮ್ ಚೇಂಜರ್ ಆಗುತ್ತಾರೆ ಮಮತಾ ಬ್ಯಾನರ್ಜಿ – ಏನಿದು ಶತ್ರುಘ್ನ ಲೆಕ್ಕಾಚಾರ?
ಪ್ರಧಾನಿಯಾಗಿ ರಾಹುಲ್ ಗಾಂಧಿ, ಗೇಮ್ ಚೇಂಜರ್ ಆಗುತ್ತಾರೆ ಮಮತಾ ಬ್ಯಾನರ್ಜಿ – ಏನಿದು ಶತ್ರುಘ್ನ ಲೆಕ್ಕಾಚಾರ?

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ಮೂಲಕ ಮುಂಬರುವ ಚುನಾವಣೆಗೆ ಸಿದ್ಧತೆ ನಡೆಸುತ್ತಿದ್ದಾರೆ. ಈ ಹೊತ್ತಲ್ಲೇ ಟಿಎಂಸಿ ಸಂಸದ ಶತ್ರುಘ್ನ ಸಿನ್ಹಾ ಅವರು, ರಾಹುಲ್​ ಗಾಂಧಿಗೆ ಭಾರತದ ಪ್ರಧಾನಿಯಾಗುವ ಸಾಮರ್ಥ್ಯವಿದೆ ಎಂದು ಭವಿಷ್ಯ ನುಡಿದಿದ್ದಾರೆ.

ಭಾರತ್ ಜೋಡೋ ಯಾತ್ರೆಯನ್ನು ಕೊಂಡಾಡಿದ ಅವರು, ಇದು ಐತಿಹಾಸಿಕ ಹಾಗೂ ಕ್ರಾಂತಿಕಾರಿ ಯಾತ್ರೆಯಾಗಿದೆ. ರಾಹುಲ್ ಗಾಂಧಿ ಉತ್ತಮ ನಾಯಕರಾಗಿ ಹೊರಹೊಮ್ಮಿದ್ದಾರೆ. ಅಲ್ಲದೇ ಅವರಿಗೆ ಪ್ರಧಾನಿಯಾಗುವ ಸಾಮರ್ಥ್ಯವಿದೆ. ಅವರ ಕುಟುಂಬದ ಸದಸ್ಯರು ಪ್ರಧಾನಿಯಾಗಿ ದೇಶಕ್ಕೆ ಸೇವೆ ಸಲ್ಲಿಸಿದ್ದಾರೆ ಮತ್ತು ದೇಶದ ಅಭಿವೃದ್ಧಿಗೆ ಕೊಡುಗೆ ನೀಡಿದ್ದಾರೆ ಎಂದು ಶ್ಲಾಘಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕಕ್ಕೆ ಸಿಗಲಿದೆಯಾ ‘ಹುಲಿ ರಾಜ್ಯ’ ಪಟ್ಟ ? – ಹುಲಿಗಣತಿಯಲ್ಲಿ ಸಿಗುತ್ತಾ ನಂಬರ್ 1 ಸ್ಥಾನ ?

ಕೆಲವರು ರಾಹುಲ್ ಗಾಂಧಿಯವರ ಚಾರಿತ್ರ್ಯಹರಣ ಮಾಡಲು ಪ್ರಯತ್ನಿಸುತ್ತಿದ್ದಾರೆ. ಇದರಿಂದಾಗಿಯೇ ಅವರು ದೇಶದ ಸಮರ್ಥ ನಾಯಕರಾಗಿ ಹೊರಹೊಮ್ಮಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆ ಮೇಲೆ ಭಾರತ್ ಜೋಡೋ ಯಾತ್ರೆ ಪ್ರಭಾವ ಬೀರಲಿದೆ ಎಂದು ಹೇಳಿದ್ದಾರೆ. ಅಲ್ಲದೇ ಭಾರತ್ ಜೋಡೋ ಯಾತ್ರೆಯನ್ನು ಎಲ್‌ಕೆ ಅಡ್ವಾಣಿ ಮತ್ತು ಮಾಜಿ ಪ್ರಧಾನಿ ಚಂದ್ರಶೇಖರ್ ಅವರ ರಥಯಾತ್ರೆಯೊಂದಿಗೆ ಹೋಲಿಸಿದ್ದಾರೆ.

ಈ ವೇಳೆ ಶತ್ರುಘ್ನ ಸಿನ್ಹಾ ಅವರು ತಮ್ಮ ಪಕ್ಷದ ವರಿಷ್ಠೆ – ಮಮತಾ ಬ್ಯಾನರ್ಜಿ ಅವರನ್ನು ಶ್ಲಾಘಿಸಿದರು ಮತ್ತು ಅವರು 2024 ರ ಲೋಕಸಭೆ ಚುನಾವಣೆಯಲ್ಲಿ ಗೇಮ್ ಚೇಂಜರ್ ಆಗಿ ಹೊರಹೊಮ್ಮುವ ಉಕ್ಕಿನ ಮಹಿಳೆ. ಆಕೆಯನ್ನು ಯಾರೂ ಲಘುವಾಗಿ ಪರಿಗಣಿಸಬೇಡಿ ಎಂದಿದ್ದಾರೆ.

suddiyaana